Champions Trophy: ಅಫ್ಘಾನಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾ ತಂಡಕ್ಕೆ ಭರ್ಜರಿ ಜಯ
ಶುಕ್ರವಾರ ಕರಾಚಿಯ ರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ 2025ರ ಮೂರನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾ ಗೆಲುವು ಸಾಧಿಸಿದೆ. ಅಫ್ಘಾನಿಸ್ತಾನ ತಂಡವನ್ನು 107 ರನ್‌ಗಳಿಂದ ಟೆಂಬಾ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ಸೋಲಿಸಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡದ ಪರ ರಯಾನ್ ರಿಕಲ್ಟನ್ ಅದ್ಭುತ ಶತಕ ಸಿಡಿಸಿ ಮಿಂಚಿದರು. ಈ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ ನಿಗದಿತ 50 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 315 ರನ್ ಗಳಿಸಿತು. ದಕ್ಷಿಣ ಆಫ್ರಿಕಾ ನೀಡಿದ 316 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ ತಂಡ ದಕ್ಷಿಣ ಆಫ್ರಿಕಾ ಬೌಲಿಂಗ್ ದಾಳಿಗೆ ತತ್ತರಿಸಿತು. ಪರಿಣಾಮ ಅಫ್ಘಾನಿಸ್ತಾನ ಕೇವಲ 43.3 ಓವರ್‌ಗಳಲ್ಲಿ 208 ರನ್‌ಗಳಿಗೆ ಆಲೌಟ್ ಆಯಿತು.

ರಿಕಲ್ಟನ್ ಅಬ್ಬರ
ದಕ್ಷಿಣ ಆಫ್ರಿಕಾ ತಂಡದ ಓಪನರ್ ರಯಾನ್ ರಿಕಲ್ಟನ್ ಅಫ್ಘಾನಿಸ್ತಾನ ಬೌಲರ್‌ಗಳ ಬೆವರಿಳಿಸಿದರು. ರಿಕಲ್ಟನ್ 106 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 103 ರನ್ ಗಳಿಸಿ ತಂಡಕ್ಕೆ ಉತ್ತಮ ಆರಂಭ ನೀಡಿದರು. ಅದ್ಭುತ ಆರಂಭ ಪಡೆದ ದಕ್ಷಿಣ ಆಫ್ರಿಕಾ ಬೃಹತ್ ಮೊತ್ತ ಕಲೆ ಹಾಕಲು ಸಾಧ್ಯವಾಯಿತು. ಇದಕ್ಕಾಗಿ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಯಿತು.
ಅಫ್ಘಾನಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾದ ಬೌಲರ್‌ಗಳು ಅದ್ಭುತ ಬೌಲಿಂಗ್ ಮಾಡಿದರು. ಹರಿಣಗಳ ಪಡೆಯ ಬೌಲರ್‌ಗಳು ಆರಂಭದಿಂದಲೇ ಅಫ್ಘಾನ್ ಬ್ಯಾಟರ್‌ಗಳ ಮೇಲೆ ಒತ್ತಡ ಹೇರಿದರು. ಯಾವುದೇ ದೊಡ್ಡ ಜೊತೆಯಾಟ ಬೆಳೆಯಲು ಅವಕಾಶ ನೀಡಲಿಲ್ಲ. ಹೀಗಾಗಿ ಅಫ್ಘಾನಿಸ್ತಾನ ಉತ್ತಮ ಆರಂಭ ಪಡೆಯಲಿಲ್ಲ. ಪರಿಣಾಮ ಅಫ್ಘಾನಿಸ್ತಾನ ತಂಡವು 50 ರನ್‌ಗಳ ಒಳಗೆ 4 ವಿಕೆಟ್‌ಗಳನ್ನು ಕಳೆದುಕೊಂಡಿತು.
ಒಂದು ತುದಿಯಲ್ಲಿ ಎಚ್ಚರಿಕೆಯಿಂದ ಆಟವಾಡಿದ ರೆಹಮತ್ ಷಾ 92 ಎಸೆತಗಳಲ್ಲಿ 9 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 90 ರನ್ ಗಳಿಸಿದರು. ಆದರೆ ಶತಕ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ನಾಯಕ ಹಶ್ಮತುಲ್ಲಾ ಶಾಹಿದಿ, ಅಜ್ಮತುಲ್ಲಾ ಒಮರ್ಜೈ ಮತ್ತು ರಶೀದ್ ಖಾನ್ ತಂಡಕ್ಕೆ ಆಸರೆಯಾಗಲಿಲ್ಲ.
ಉಭಯ ತಂಡಗಳ ಪ್ಲೇಯಿಂಗ್-11
ದಕ್ಷಿಣ ಆಫ್ರಿಕಾ: ರಿಯಾನ್ ರಿಕೆಲ್ಟನ್ (ವಿಕೆಟ್‌ಕೀಪರ್), ಟೋನಿ ಡಿ ಜೋರ್ಜಿ, ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ.
ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್‌ಕೀಪರ್), ಇಬ್ರಾಹಿಂ ಜದ್ರಾನ್, ಸೇದಿಕುಲ್ಲಾ ಅಟಲ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಗುಲ್ಬದಿನ್ ನೈಬ್, ಮೊಹಮ್ಮದ್ ನಬಿ, ರಶೀದ್ ಖಾನ್, ಫಜಲ್ಹಕ್ ಫಾರೂಕಿ, ನೂರ್ ಅಹ್ಮದ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications