ಶ್ರೀಲಂಕಾ ಕ್ರಿಕೆಟ್‌ಗೆ ಐಸಿಸಿಯಿಂದ ಶಾಕ್: ಮಂಡಳಿಯನ್ನೇ ಅಮಾನತು ಮಾಡಿದ ಐಸಿಸಿ
ವಿಶ್ವಕಪ್‌ನಲ್ಲಿ ಹೀನಾಯ ಸೋಲು ಅನುಭವಿಸಿ ಲೀಗ್ ಹಂತದಿಂದ ನಿರ್ಗಮಿಸಿರುವ ಶ್ರೀಲಂಕಾ ತಂಡಕ್ಕೆ ಐಸಿಸಿ ಶಾಕ್ ನೀಡಿದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಐಸಿಸಿ ಅಮಾನತು ಮಾಡಿದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯಲ್ಲಿ ಅಲ್ಲಿನ ಸರ್ಕಾರದ ಅತಿಯಾದ ಹಸ್ತಕ್ಷೇಪವನ್ನು ಉಲ್ಲೇಖಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ತನ್ನ ಈ ನಿರ್ಧಾರವನ್ನು ರದ್ದುಗೊಳಿಸುವವರೆಗೆ ಶ್ರೀಲಂಕಾ ತಂಡ ಮುಂದಿನ ಯಾವುದೇ ಐಸಿಸಿ ಟೂರ್ನಿಗಳಲ್ಲಿ ಭಾಗವಹಿಸುವಂತಿಲ್ಲ ಎನ್ನುವುದು ಗಮನಾರ್ಹ. ಹೀಗಾಗಿ ವಿಶ್ವಕಪ್ ಟೂರ್ನಿಯಿಂದ ನಿರ್ಗಮಿಸಿರುವ ಶ್ರೀಲಂಕಾ ತಂಡಕ್ಕೆ ಭಾರೋ ದೊಡ್ಡ ಆಘಾತ ಉಂಟಾಗಿದೆ.

ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡ ಅತ್ಯಂತ ಕಳೆಪೆ ಪ್ರದರ್ಶನ ನೀಡಿದೆ. ಅದರಲ್ಲೀ ಶ್ರೀಲಂಕಾ ಭಾರತ ತಂಡದ ವಿರುದ್ಧ ಕೇವಲ 55 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಗಿತ್ತು. ಈ ಭಾರೀ ಸೋಲಿನ ಕಾರಣಕ್ಕಾಗಿ ಶ್ರೀಲಂಕಾದ ಕ್ರೀಡಾ ಸಚಿವರು ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಎಲ್ಲಾ ಸದಸ್ಯರನ್ನು ತಕ್ಷಣವೇ ರಾಜೀನಾಮೆಗೆ ಆದೇಶಿಸಿದ್ದರು. ಅದಾದ ಬಳಿಕ ಅರ್ಜುನ ರಣತುಂಗ ನೇತೃತ್ವದಲ್ಲಿ ಪದಾಧಿಕಾರಿಗಳನ್ನು ನೇಮಕಮಾಡಲಾಗಿತ್ತು.
ಕ್ರಿಕೆಟ್ ಇನ್ಫೋ ವರದಿಯ ಪ್ರಕಾರ ಶುಕ್ರವಾರ ಐಸಿಸಿ ಈ ವಿಚಾರವಾಗಿ ಸಭೆ ನಡೆಸಿತು. ಐಸಿಸಿ ಸದಸ್ಯರಾಗಿದ್ದುಕೊಂಡು ಶ್ರೀಲಂಕಾ ಕ್ರಿಕೆಟ್ ಮಂಡಳಿ ಜವಾಬ್ಧಾರಿಗಳನ್ನು ಗಂಭೀರವಾಗಿ ಉಲ್ಲಂಘೀಸುತ್ತಿದೆ ಎಂದು ನಿರ್ಧರಿಸಿದೆ. ತನ್ನ ವ್ಯವಹಾರಗಳನ್ನು ಸ್ವಾಯತ್ತವಾಗಿ ನಿರ್ವಹಿಸುವಂತೆ ಮತ್ತು ಅದರ ಕೆಸದಲ್ಲಿ ಸರ್ಕಾರದ ಹಸ್ತಕ್ಷೇಪವಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿ ಈ ಕಠಿಣ ನಿರ್ಧಾರ ತೆಗೆದುಕೊಂಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications