Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

CT 2025: ಚಾಂಪಿಯನ್ಸ್ ಟ್ರೋಫಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ; ಐಸಿಸಿ ಸಷ್ಟನೆ

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸುವುದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧಿಕೃತವಾಗಿ ಹೇಳಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಮ್ಮ ನಿರ್ಧಾರಗಳಿಗೆ ಬದ್ಧವಾಗಿದ್ದವು. ಆದರೆ, ಅಂತಿಮವಾಗಿ ನಿರ್ಧಾರ ಭಾರತದ ಪರವಾಗಿ ಬಂದಿದೆ. ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸುವುದರ ಜೊತೆಗೆ ಪಾಕಿಸ್ತಾನದ ಷರತ್ತನ್ನು ಐಸಿಸಿ ಒಪ್ಪಿಕೊಂಡಿದೆ.

ಭಾರತ ಆತಿಥ್ಯ ವಹಿಸಲಿರುವ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ಮತ್ತು ಭಾರತ ಮತ್ತು ಶ್ರೀಲಂಕಾ ಆತಿಥ್ಯ ವಹಿಸಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಟೂರ್ನಿ ಕೂಡ ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುವುದು. ಇದರಿಂದಾಗಿ ಪಾಕಿಸ್ತಾನ ಕೂಡ ಭಾರತದಲ್ಲಿ ಯಾವುದೇ ಪಂದ್ಯವನ್ನು ಆಡುವುದಿಲ್ಲ ಎಂಬುದನ್ನು ಐಸಿಸಿ ಸ್ಪಷ್ಟಪಡಿಸಿದೆ.

ICC Announces 2025 Champions Trophy Will Be Held in a Hybrid Format

ಪಾಕಿಸ್ತಾನ ಚಾಂಪಿಯನ್ಸ್ ಟ್ರೋಫಿಯ ಕೆಲವು ಪಂದ್ಯಗಳನ್ನು ಮಾತ್ರ ಆಯೋಜಿಸಲಿದೆ. ಇನ್ನುಳಿದ ಕೆಲವು ಪಂದ್ಯಗಳು ಇತರ ದೇಶಗಳಲ್ಲಿ ನಡೆಯಲಿವೆ. ಈ ಕುರಿತು ಐಸಿಸಿ ತನ್ನ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ. ಪ್ರಕಟಣೆಯಲ್ಲಿ 'ಐಸಿಸಿ ಟೂರ್ನಿಗಳಲ್ಲಿ ಭಾರತ ಮತ್ತು ಪಾಕಿಸ್ತಾನ ಆಯೋಜಿಸಿದ ಪಂದ್ಯಗಳಿಗೆ ಸಂಬಂಧಿಸಿದ ಅಪ್ಡೇಟ್‌ಗಳನ್ನು ಬಿಡುಗಡೆ ಮಾಡಲಾಗಿದೆ. ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನದಲ್ಲಿ ಮತ್ತು ತಟಸ್ಥ ಸ್ಥಳದಲ್ಲಿ ಆಡಲಾಗುವುದು. 2024 ರಿಂದ 2027ರವರಗೆ ಐಸಿಸಿ ಟೂರ್ನಿಗಳನ್ನು ಯಾವುದೇ ದೇಶ ಆಯೋಜಿಸಿದರೆ, ಭಾರತ ಮತ್ತು ಪಾಕಿಸ್ತಾನ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಿಸಲಾಗುವುದು ಎಂದು ಐಸಿಸಿ ದೃಢಪಡಿಸಿದೆ.

ಶೀಘ್ರದಲ್ಲೇ ವೇಳಾಪಟ್ಟಿ ಬಿಡುಗಡೆ

ಚಾಂಪಿಯನ್ಸ್ ಟ್ರೋಫಿ 2025ರ ಫೆಬ್ರವರಿ ತಿಂಗಳಲ್ಲಿ ಆರಂಭವಾಗಿ ಮಾರ್ಚ್ ತಿಂಗಳಲ್ಲಿ ಮುಕ್ತಾಯವಾಗಲಿದೆ. ಆತಿಥೇಯ ಪಾಕಿಸ್ತಾನವನ್ನು ಹೊರತುಪಡಿಸಿ, ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ಭಾರತ, ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿವೆ. ಇದರ ಮಧ್ಯೆ
ಚಾಂಪಿಯನ್ಸ್ ಟ್ರೋಫಿ 2025ರ ಅಂತಿಮ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಐಸಿಸಿ ಹೇಳಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಬಹುನಿರೀಕ್ಷಿತ ಪಂದ್ಯ ಎಲ್ಲಿ ನಡೆಯುತ್ತದೆ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಏಕೆಂದರೆ ಪಾಕಿಸ್ತಾನ ಕೂಡ ಭಾರತಕ್ಕೆ ಪ್ರಯಾಣ ಬೆಳೆಸುವುದಿಲ್ಲ ಎಂದು ಹೇಳಿದೆ.

ಹೈಬ್ರಿಡ್ ಮಾದರಿ ಎಂದರೇನು?

ಕ್ರಿಕೆಟ್ ಟೂರ್ನಿಯ ಕೆಲವು ಪಂದ್ಯಗಳು ಆತಿಥೇಯ ದೇಶವನ್ನು ಹೊರತುಪಡಿಸಿ ಬೇರೆ ದೇಶಗಳಲ್ಲಿ ಅಥವಾ ತಟಸ್ಥ ಸ್ಥಳಗಳಲ್ಲಿ ನಡೆಸುವುದನ್ನು ಹೈಬ್ರಿಡ್ ಮಾದರಿ ಎಂದು ಕರೆಯಲಾಗುತ್ತದೆ. 2023 ರಲ್ಲಿ ನಡೆದ ಏಷ್ಯಾಕಪ್ ಟೂರ್ನಿಯಲ್ಲಿ ಹೈಬ್ರಿಡ್ ಮಾದರಿಯನ್ನು ಬಳಸಲಾಗಿತ್ತು. 2023ರ ಏಷ್ಯಾಕಪ್ ಟೂರ್ನಿಯನ್ನು ಪಾಕಿಸ್ತಾನ ಆಯೋಜನೆ ಮಾಡಿತ್ತು. ಆಗ ಭಾರತ ಪಾಕಿಸ್ತಾನದಲ್ಲಿ ಆಡದೆ ಶ್ರೀಲಂಕಾದಲ್ಲಿ ತನ್ನ ಪಂದ್ಯಗಳನ್ನು ಆಡಿತ್ತು.
ಈಗ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಸಹ ಹೈಬ್ರಿಡ್ ಮಾದರಿಯಲ್ಲಿ ಆಡಿಸಲು ಐಸಿಸಿ ಸಿದ್ಧವಾಗಿದೆ.

Story first published: Thursday, December 19, 2024, 17:46 [IST]
Other articles published on Dec 19, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+