Womens T20 World Cup 2024: ಹೊಸ ವೇಳಾಪಟ್ಟಿ ಬಿಡುಗಡೆ; ಭಾರತ -ಪಾಕಿಸ್ತಾನ ಪಂದ್ಯಕ್ಕೆ ಮುರ್ಹೂತ ಫಿಕ್ಸ್
2024ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಬಾಂಗ್ಲಾದೇಶದಲ್ಲಿ ನಡೆಸಬೇಕಾಗಿತ್ತು. ಆದರೆ ಬಾಂಗ್ಲಾದಲ್ಲಿ ದಿನದಿಂದ ದಿನಕ್ಕೆ ಮೀಸಲಾತಿ ಹಿಂಸಾಚಾರ ಹೆಚ್ಚಾಗುತ್ತಿದೆ. ಹೀಗಾಗಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಟಿ20 ವಿಶ್ವಕಪ್ ಟೂರ್ನಿಯನ್ನು ಬಾಂಗ್ಲಾದೇಶದಿಂದ ಯುಎಇಗೆ ಸ್ಥಳಾಂತರಿಸಲಾಗಿತ್ತು.
ಈಗ ವಿಶ್ವಕಪ್ ಪಂದ್ಯಗಳು ದುಬೈ ಮತ್ತು ಶಾರ್ಜಾದಲ್ಲಿ ನಡೆಯಲಿವೆ. ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಮುರ್ಹೂತ ಫಿಕ್ಸ್ ಆಗಿದೆ. ಉಭಯ ತಂಡಗಳ ನಡುವಿನ ರೋಚಕ ಪಂದ್ಯಕ್ಕಾಗಿ ಕ್ರೀಡಾಭಿಮಾನಿಗಳು ಕಾತುರದಿಂದ ಕಾಯುವಂತಾಗಿದೆ.

ಗುಂಪಿನಲ್ಲಿ ಬದಲಾವಣೆ ಇಲ್ಲ
ಐಸಿಸಿ ಸೋಮವಾರ ಟಿ20 ವಿಶ್ವಕಪ್ 2024ರ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಹಿಂದೆ ಇದ್ದ ಗುಂಪಿನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. 'ಎ' ಗುಂಪಿನಲ್ಲಿ ಭಾರತ, ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಶ್ರೀಲಂಕಾ ಸ್ಥಾನ ಪಡೆದರೆ, 'ಬಿ' ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಬಾಂಗ್ಲಾದೇಶ ಮತ್ತು ಸ್ಕಾಟ್ಲೆಂಡ್ ತಂಡಗಳಿವೆ.
ಈ ವರ್ಷದ ಆರಂಭದಲ್ಲಿ ಅಬುಧಾಬಿಯಲ್ಲಿ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಕ್ವಾಲಿಫೈಯರ್ ಮೂಲಕ ಶ್ರೀಲಂಕಾ ಮತ್ತು ಸ್ಕಾಟ್ಲೆಂಡ್ ತಮ್ಮ ಸ್ಥಾನಗಳನ್ನು ಪಡೆದುಕೊಂಡಿವೆ.
ಫೈನಲ್ ಯಾವಾಗ?
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 1 ರವರೆಗೆ 10 ಅಭ್ಯಾಸ ಪಂದ್ಯಗಳು ಸೇರಿದಂತೆ ಎರಡು ಸ್ಥಳಗಳಲ್ಲಿ 23 ಪಂದ್ಯಗಳು ನಡೆಯಲಿವೆ. ಇದಾದ ಬಳಿಕ ಪ್ರತಿ ತಂಡವು 4 ಗುಂಪು ಪಂದ್ಯಗಳನ್ನು ಆಡಲಿವೆ.
ಇದರಲ್ಲಿ ಪ್ರತಿ ಗುಂಪಿನ ಅಗ್ರ 2 ತಂಡಗಳು ಅಕ್ಟೋಬರ್ 17 ಮತ್ತು 18 ರಂದು ನಡೆಯುವ ಸೆಮಿಫೈನಲ್‌ಗೆ ಆರ್ಹತೆ ಪಡೆಯಲಿವೆ. ಅಕ್ಟೋಬರ್ 20 ರಂದು ದುಬೈನಲ್ಲಿ ಫೈನಲ್ ನಡೆಯಲಿದ್ದು, ನಾಕೌಟ್ ಪಂದ್ಯಗಳಿಗೆ ಮೀಸಲು ದಿನಗಳನ್ನು ನಿಗದಿಪಡಿಸಲಾಗಿದೆ.
ಭಾರತದ ವೇಳಾಪಟ್ಟಿ
ಟೀಮ್ ಇಂಡಿಯಾ ಸೆಪ್ಟೆಂಬರ್ 29 ರಂದು ವೆಸ್ಟ್ ಇಂಡೀಸ್ ಮತ್ತು ಅಕ್ಟೋಬರ್ 1 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಅಕ್ಟೋಬರ್ 4 ರಂದು ದುಬೈನಲ್ಲಿ ನಡೆಯಲಿರುವ ಗುಂಪು ಹಂತದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ತನ್ನ ಅಭಿಯಾನವನ್ನು ಶುರು ಮಾಡಲಿದೆ.
ಅಕ್ಟೋಬರ್ 6ರಂದು ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ ಸೆಣಾಸಾಡಲಿದೆ. ಅಕ್ಟೋಬರ್ 9 ರಂದು ದುಬೈನಲ್ಲಿ ನಡೆಯಲಿರುವ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಇದಾದ ಬಳಿಕ ಅಕ್ಟೋಬರ್ 13 ರಂದು ಶಾರ್ಜಾದಲ್ಲಿ ಆಸ್ಟ್ರೇಲಿಯಾ ಮತ್ತು ಟೀಮ್ ಇಂಡಿಯಾ ನಡುವಿನ ಗುಂಪು ಹಂತದ ಕೊನೆಯ ಪಂದ್ಯ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications