For Quick Alerts
ALLOW NOTIFICATIONS  
For Daily Alerts
 

ಚಾಂಪಿಯನ್ಸ್ ಟ್ರೋಫಿ 2017 :ಮಳೆ ಕಾಟ, ಆಸೀಸ್-ಕಿವೀಸ್ ಪಂದ್ಯ ರದ್ದು

ಚಾಂಪಿಯನ್ಸ್ ಟ್ರೋಫಿ 2017ಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಬ್ಯಾಟಿಂಗ್ ಮಾಡುತ್ತಿದೆ

By Mahesh

ಲಂಡನ್, ಜೂನ್ 02 : ಚಾಂಪಿಯನ್ಸ್ ಟ್ರೋಫಿ 2017ಯ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯಕ್ಕೆ ಮಳೆ ಕಾಟ ಹಿನ್ನಲೆಯಲ್ಲಿ ಪಂದ್ಯ ರದ್ದುಗೊಂಡಿದೆ.

ನಾಯಕ ಕೇನ್ ವಿಲಿಯಮ್ಸನ್ ಶತಕದ ನೆರವಿನಿಂದ ನ್ಯೂಜಿಲೆಂಡ್ ಆಸ್ಟ್ರೇಲಿಯಾಕ್ಕೆ 292 ರನ್ ಗಳ ಗೆಲುವಿನ ಗುರಿ ನೀಡಿತ್ತು. ಗೆಲುವಿನ ಗುರಿ ಬೆನ್ನಟ್ಟಿದ ಆಸೀಸ್ ಗೆ ಪದೇ-ಪದೇ ಮಳೆ ಕಾಟ ಕೊಟ್ಟಿತು.

9 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 53 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿರುವ ವೇಳೆ ಮತ್ತೆ ಮಳೆ ಸುರಿಯಲಾರಂಭಿಸಿತು. ಇದರಿಂದ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ನೀಡಿ ಈ ಪಂದ್ಯವನ್ನು ರದ್ದು ಮಾಡಲಾಯಿತು.

ICC Champions Trophy 2017: Australia-New Zealand match abandoned due to rain

9 ಓವರ್ ಗಳಲ್ಲಿ 52 ರನ್ ನೀಡಿ 6 ವಿಕೆಟ್ ಕಬಳಿಸಿದ ಆಸೀಸ್ ವೇಗಿ ಜೋಶ್ ಹ್ಯಾಜಲ್ ವುಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಟಾಸ್ ಗೆದ್ದ ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ 45 ಓವರ್ ಗಳಲ್ಲಿ 291 ರನ್ ಗಳಿಗೆ ಸರ್ವ ಪತನ ಕಂಡಿದೆ. ಆಸೀಸ್ ಪರ ವೇಗಿ ಜೋಶ್ ಹ್ಯಾಜಲ್ ವುಡ್ 9 ಓವರ್ ಗಳಲ್ಲಿ 52 ರನ್ ನೀಡಿ 6 ವಿಕೆಟ್ ಕಬಳಿಸಿ ಮಿಂಚಿದರು.

ಕಿವೀಸ್ ಪಡೆ ಆರಂಭಿಕ ಆಘಾತ ಕಂಡಿದ್ದು, ಆರಂಭಿಕ ಆಟಗಾರ ಮಾರ್ಟಿನ್ ಗಪ್ಟಿಲ್ 26. ರೋಂಚಿ 65 ರನ್ ಗಳಿಸಿ ಔಟಾದರು.

ಚಾಂಪಿಯನ್ಸ್ ಟ್ರೋಫಿ ಜೂನ್ 1 (ಗುರುವಾರ) ದಿ ಓವಲ್ ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಅತಿಥೇಯ ಇಂಗ್ಲೆಂಡ್ ತಂಡ ಸುಲಭ ಜಯ ದಾಖಲಿಸಿದೆ. [ಮಿನಿ ವಿಶ್ವಕಪ್ ಸಮರದ ದೃಶ್ಯಾವಳಿ]

ಭಾರತೀಯ ಕಾಲಮಾನ ಪ್ರಕಾರ ಕ್ರಮವಾಗಿ ಹಗಲು ಪಂದ್ಯ ಮಧ್ಯಾಹ್ನ 3 ಗಂಟೆ ಹಾಗೂ ಹಗಲು/ರಾತ್ರಿ ಪಂದ್ಯ ಸಂಜೆ 6 ಗಂಟೆಗೆ ಆರಂಭವಾಗಲಿದೆ. ಎರಡು ಗುಂಪುಗಳಲ್ಲಿ ತಲಾ ನಾಲ್ಕು ತಂಡಗಳಿವೆ. ಎ ಗುಂಪಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಸೆಣಸುತ್ತಿವೆ.

Story first published: Wednesday, January 3, 2018, 10:05 [IST]
Other articles published on Jan 3, 2018
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+