ಬರ್ಮಿಂಗ್ ಹ್ಯಾಮ್, ಜೂನ್ 07: ಐಸಿಸಿ ಚಾಂಪಿಯನ್ಸ್ ಟ್ರೋಫಿ 2017ರ ಮಹತ್ವದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲ 10 ಓವರ್ ಗಳಲ್ಲಿ 47ರನ್ ಗಳಿಸಿರುವ ದಕ್ಷಿಣ ಆಫ್ರಿಕಾ ಆರಂಭಿಕ ಆಟಗಾರ ಹಶೀಂ ಆಮ್ಲಾರನ್ನು ಕಳೆದುಕೊಂಡಿದೆ.
ಚಾಂಪಿಯನ್ಸ್ ಟ್ರೋಫಿ 2017 : ಗ್ಯಾಲರಿ | ವೇಳಾಪಟ್ಟಿ | 8 ತಂಡಗಳು
ಪಾಕಿಸ್ತಾನ ಈ ಪಂದ್ಯದಲ್ಲಿ ಸೋತರೆ ಮನೆಗೆ ಹೋಗಬೇಕಾಗುತ್ತದೆ. ಭಾರತ ವಿರುದ್ಧ ಸೋಲು ಕಂಡಿರುವ ಪಾಕಿಸ್ತಾನಕ್ಕೆ ಗೆಲುವು ಅನಿವಾರ್ಯವಾಗಿದೆ. ವಿಶ್ವದ ನಂ.1 ಏಕದಿನ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸುವುದು ಪಾಕಿಸ್ತಾನಕ್ಕೆ ಕಷ್ಟಕರ ಎಂಬುದು ತಜ್ಞರ ಅಭಿಪ್ರಾಯ.
