Champions Trophy 2025: ಮಿನಿ ವಿಶ್ವಕಪ್ ಗೆಲ್ಲಲು ಅಫ್ಘಾನಿಸ್ತಾನ ಸಜ್ಜು; ತಂಡಕ್ಕೆ ಜದ್ರಾನ್ ವಾಪಸ್
ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಮಿನಿ ವಿಶ್ವಕಪ್ ಗೆಲ್ಲಲು ಎಂಟು ತಂಡಗಳು ಒಂದೊಂದಾಗಿ ತಮ್ಮ ತಂಡಗಳನ್ನು ಘೋಷಿಸುತ್ತಿವೆ. ನ್ಯೂಜಿಲೆಂಡ್, ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶ ನಂತರ ಇದೀಗ ಭಾನುವಾರದಂದು ಆಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ಎಸಿಬಿ) ಕೂಡ ತನ್ನ ತಂಡವನ್ನು ಪ್ರಕಟಿಸಿದೆ. ಗಾಯದಿಂದ ಚೇತರಿಸಿಕೊಂಡಿರುವ ಸ್ಪೋಟಕ ಆರಂಭಿಕ ಬ್ಯಾಟರ್ ಇಬ್ರಾಹಿಂ ಜದ್ರಾನ್ ಆಫ್ಘಾನಿಸ್ತಾನ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇತ್ತೀಚೆಗೆ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಅಫ್ಘಾನಿಸ್ತಾನ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. ಅಫ್ಘಾನಿಸ್ತಾನ ತಂಡ 2023ರ ಏಕದಿನ ವಿಶ್ವಕಪ್ ಟೂರ್ಮಿಯ ಅಂಕಪಟ್ಟಿಯಲ್ಲಿ 6ನೇ ಸ್ಥಾನ ಪಡೆದರೆ, ಕಳೆದ ನಡೆದ 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ತಲುಪಿತ್ತು. ಇದೀಗ ಸ್ಪಿನ್ನರ್ ಮುಜೀಬ್ ಉರ್ ರಹಿಮಾನ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಪಂದ್ಯಗಳು ಪಾಕಿಸ್ತಾನ ಮತ್ತು ದುಬೈನಲ್ಲಿ ನಡೆಯಲಿವೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು ಎಂಟು ತಂಡಗಳು ಫೆಬ್ರವರಿ 19 ರಿಂದ ಮಾರ್ಚ್ 9ರವರೆಗೆ ಮುಖಾಮುಖಿಯಾಗಲಿವೆ.
ಅಫ್ಘಾನಿಸ್ತಾನ ಮೊದಲ ಬಾರಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲು ಭರ್ಜರಿ ತಯಾರಿ ನಡೆಸಿದೆ. ಏಕದಿನ ವಿಶ್ವಕಪ್ 2023ರಲ್ಲಿ ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳನ್ನು ಸೋಲಿಸುವ ಮೂಲಕ ಅಫ್ಘಾನಿಸ್ತಾನ ಆಘಾತ ನೀಡಿತ್ತು. ಬಳಿಕ ಟಿ20 ವಿಶ್ವಕಪ್ 2024ರಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳನ್ನು ಸೋಲಿಸಿತ್ತು. ಈ ಮೆಗಾ ಟೂರ್ನಿಯಲ್ಲಿ ಅಫ್ಘಾನಿಸ್ತಾನ ತನ್ನ ಮೊದಲ ಪಂದ್ಯ ಫೆಬ್ರವರಿ 21 ರಿಂದು ದಕ್ಷಿಣ ಆಫ್ರಿಕಾ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ.
ಅಫ್ಘಾನಿಸ್ತಾನ ತಂಡ
ಹಶ್ಮತುಲ್ಲಾ ಶಾಹಿದಿ (ನಾಯಕ), ಇಬ್ರಾಹಿಂ ಝದ್ರಾನ್, ರಹಮಾನುಲ್ಲಾ ಗುರ್ಬಾಜ್, ಸೇದಿಕುಲ್ಲಾ ಅಟಲ್, ರಹಮತ್ ಷಾ, ಇಕ್ರಮ್ ಅಲಿಖಿಲ್, ಗುಲ್ಬದಿನ್ ನೈಬ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್, ಎಎಮ್ ಗಜನ್ಫರ್, ನೂರ್ ಅಹ್ಮದ್, ಫಜಲ್ಹಾಕ್, ಫಜಲ್ಹಾಕ್.
ಮೀಸಲು ಆಟಗಾರರು: ದರ್ವಿಶ್ ರಸೂಲಿ, ನಂಗ್ಯಾಲ್ ಖರೋಟಿ, ಬಿಲಾಲ್ ಸಾಮಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications