For Quick Alerts
ALLOW NOTIFICATIONS  
For Daily Alerts
 

CT 2025: ಚಾಂಪಿಯನ್ಸ್ ಟ್ರೋಫಿಯಲ್ಲಿ ಹೊಸ ವಿವಾದ; ಅಫ್ಘಾನಿಸ್ತಾನ ವಿರುದ್ಧ ಆಡದಂತೆ ಇಂಗ್ಲೆಂಡ್‌ಗೆ ಸೂಚನೆ?

ಮುಂದಿನ ತಿಂಗಳು ಪಾಕಿಸ್ತಾನ ಮತ್ತು ಯುಎಇ ಆತಿಥ್ಯ ವಹಿಸಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಸಂಬಂಧಿಸಿದಂತೆ ಹೊಸ ವಿವಾದ ಹುಟ್ಟಿಕೊಂಡಿದೆ. ಇದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ (ಐಸಿಸಿ) ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ವೇಳೆ ಅಫ್ಘಾನಿಸ್ತಾನ ವಿರುದ್ಧ ಆಡದಂತೆ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಸೂಚಿಸಲಾಗಿದೆ. ಅಫ್ಘಾನಿಸ್ತಾನದಲ್ಲಿ ಮಹಿಳೆಯರ ಹಕ್ಕುಗಳ ಮೇಲಿನ ತಾಲಿಬಾನ್ ಆಡಳಿತದ ದೌರ್ಜನ್ಯವನ್ನು ವಿರೋಧಿಸಿ 160ಕ್ಕೂ ಹೆಚ್ಚು ಬ್ರಿಟಿಷ್ ರಾಜಕೀಯ ನಾಯಕರು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಗೆ (ಇಸಿಬಿ) ಪತ್ರ ಬರೆದಿದ್ದಾರೆ.

ಅಫ್ಘಾನಿಸ್ತಾನದಲ್ಲಿ 2021 ರಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ನಂತರ ಕ್ರೀಡೆಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ನಿಷೇಧಿಸಲಾಗಿದೆ. ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ನಿಯಮಗಳನ್ನು ಉಲ್ಲಂಘನೆ ಮಾಡಿದೆ. ಹೀಗಾಗಿ ಇಂಗ್ಲೆಂಡ್ ಪುರುಷರ ಏಕದಿನ ತಂಡವು ಫೆಬ್ರವರಿ 26 ರಂದು ಲಾಹೋರ್‌ನಲ್ಲಿ ಅಫ್ಘಾನಿಸ್ತಾನವನ್ನು ಎದುರಿಸಲಿದೆ.

ICC Champions Trophy 2025 England team has been advised not to play against Afghanistan

ಹೌಸ್ ಆಫ್ ಕಾಮನ್ಸ್ ಮತ್ತು ಹೌಸ್ ಆಫ್ ಲಾರ್ಡ್ಸ್‌ನ ಕ್ರಾಸ್-ಪಾರ್ಟಿ ಗುಂಪು ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ಅಡಿಯಲ್ಲಿ ಮಹಿಳೆಯರು ಮತ್ತು ಹುಡುಗಿಯರ ಮೇಲೆ ಕೈಗೊಂಡಿರುವ ಕ್ರಮಗಳ ವಿರುದ್ಧ ಮಾತನಾಡಲು ಇಸಿಬಿಗೆ ಕರೆ ನೀಡಿತು. ಈ ಗುಂಪು ರಿಫಾರ್ಮ್ ಯುಕೆ ನಾಯಕ ನಿಗೆಲ್ ಫರಾಜ್ ಮತ್ತು ಮಾಜಿ ಲೇಬರ್ ಪಕ್ಷದ ನಾಯಕ ಜೆರೆಮಿ ಕಾರ್ಬಿನ್ ಅವರನ್ನು ಸಹ ಒಳಗೊಂಡಿದೆ.

ಇಸಿಬಿ ಖಂಡನೆ

ಐಸಿಸಿ ಟೂರ್ನಿಗಳಲ್ಲಿ ಅಫ್ಘಾನಿಸ್ತಾನ ಸ್ಪರ್ಧಿಸಲು ಅನುಮತಿಸಲಾಗಿದೆ. ಇಸಿಬಿ ಸಿಇಒ ರಿಚರ್ಡ್ ಗೌಲ್ಡ್ ಎಲ್ಲಾ ಸದಸ್ಯ ರಾಷ್ಟ್ರಗಳು ಇದೇ ರೀತಿಯ ವಿಧಾನವನ್ನು ತೆಗೆದುಕೊಳ್ಳಲು ಉತ್ತಮ ಮಾರ್ಗವಾಗಿದೆ ಎಂದು ಸಲಹೆ ನೀಡಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಆಡಳಿತದಲ್ಲಿ ಮಹಿಳೆಯರು ಮತ್ತು ಹುಡುಗಿಯರನ್ನು ನಡೆಸಿಕೊಳ್ಳುವ ರೀತಿಯನ್ನು ಇಸಿಬಿ ಖಂಡಿಸುತ್ತದೆ ಎಂದಿದ್ದಾರೆ. ಐಸಿಸಿ ಸಂವಿಧಾನವು ಮಹಿಳಾ ಕ್ರಿಕೆಟ್‌ನ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಎಲ್ಲಾ ಸದಸ್ಯ ರಾಷ್ಟ್ರಗಳು ಬದ್ಧವಾಗಿದೆ ಎಂದು ಹೇಳುತ್ತದೆ. ಈ ಬದ್ಧತೆಗೆ ಅನುಗುಣವಾಗಿ, ಅಫ್ಘಾನಿಸ್ತಾನ ವಿರುದ್ಧ ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಪಂದ್ಯಗಳನ್ನು ನಿಗದಿಪಡಿಸದಿರುವ ತನ್ನ ನಿಲುವನ್ನು ಇಸಿಬಿ ಉಳಿಸಿಕೊಂಡಿದೆ.

ಕಳೆದ ವರ್ಷ 2023ರಲ್ಲಿ ಆಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಆಸ್ಟ್ರೇಲಿಯಾ ಹಿಂದೆ ಸರಿದಿತ್ತು. ಆಫ್ಘಾನಿಸ್ತಾನದಲ್ಲಿ ಮಹಿಳೆಯರು ಮತ್ತು ಬಾಲಕಿಯರ ಶಿಕ್ಷಣ ಮತ್ತು ಉದ್ಯೋಗದ ಮೇಲಿನ
ಮತ್ತಷ್ಟು ನಿರ್ಬಂದಗಳನ್ನು ತಾಲಿಬಾನ್ ಸರ್ಕಾರ ಹೇರಿತ್ತು. ಇದನ್ನು ಖಂಡಿಸುವ ಮೂಲಕ ಆಸ್ಟ್ರೇಲಿಯಾ ತಂಡವು ಆಫ್ಘಾನಿಸ್ತಾನ ವಿರುದ್ಧ ಏಕದಿನ ಸರಣಿಯನ್ನು ಆಡದಿರಲಿಲ್ಲ. ಈ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟ್‌ ಬೋರ್ಡ್ ಮಾಹಿತಿ ನೀಡಿತ್ತು.

ಇತ್ತೀಚೆಗೆ ಅಫ್ಘಾನಿಸ್ತಾನದ ಸ್ಟಾರ್ ಕ್ರಿಕೆಟಿಗರಾದ ರಶೀದ್ ಖಾನ್ ಮತ್ತು ಮೊಹಮ್ಮದ್ ನಬಿ ಕೂಡ ತಾಲಿಬಾನ್ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ವೈದ್ಯಕೀಯ ತರಬೇತಿಯನ್ನು ನಿಷೇಧಿಸಿರುವ ವಿರುದ್ಧ ರಶೀದ್ ಖಾನ್ ಧ್ವನಿ ಎತ್ತಿದ್ದರು. ರಶೀದ್ ಖಾನ್ ತಮ್ಮ ದೇಶದ ಮಹಿಳೆಯರ ಬೆಂಬಲಕ್ಕೆ ನಿಂತಿರುವುದಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

Story first published: Tuesday, January 7, 2025, 11:14 [IST]
Other articles published on Jan 7, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+