For Quick Alerts
ALLOW NOTIFICATIONS  
For Daily Alerts
 

CT 2025: ಪಾಕ್‌ನಲ್ಲಿ ಹಾರದ ತ್ರಿವರ್ಣ ಧ್ವಜ: ಮತ್ತೆ ಸಣ್ಣತನ ಪ್ರದರ್ಶನ

ಪಾಕಿಸ್ತಾನದಲ್ಲಿ ನಡೆಯಲಿರುವ ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಗೆ ಸಂಬಂಧಿಸಿದಂತೆ ಒಂದಲ್ಲ ಒಂದು ವಿವಾದಗಳು ನಿರಂತರವಾಗಿ ಮುನ್ನೆಲೆಗೆ ಬರುತ್ತಿವೆ. ಕೆಲವೊಮ್ಮೆ ಕ್ರೀಡಾಂಗಣದ ಬಗ್ಗೆ ಚರ್ಚೆ ನಡೆದರೆ, ಕೆಲವೊಮ್ಮೆ ಆತಿಥ್ಯದ ಬಗ್ಗೆ ಚರ್ಚೆ ನಡೆದಿದೆ. ಈಗ ಧ್ವಜಕ್ಕೆ ಸಂಬಂಧಿಸಿದಂತೆ ವಿವಾದ ಮುನ್ನಲೆಗೆ ಬಂದಿದೆ. ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ 8 ತಂಡಗಳ ಪೈಕಿ ಏಳು ತಂಡಗಳ ರಾಷ್ಟ್ರ ಧ್ವಜಗಳನ್ನು ಹಾರಿಸಲ್ಪಟ್ಟಿದ್ದು, ಭಾರತದ ತ್ರಿಧ್ವಜ ಕಾಣೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಧ್ವಜಕ್ಕೆ ಸಂಬಂಧಿಸಿದಂತೆ ಹೊಸ ವಿವಾದ ಆರಂಭವಾಗಿದೆ.

ಕರಾಚಿ ಕ್ರೀಡಾಂಗಣದಲ್ಲಿ ತ್ರಿಧ್ವಜ ಇಲ್ಲದಿರುವುದಕ್ಕೆ ನಿಖರವಾದ ಕಾರಣ ತಿಳಿದಿಲ್ಲ. ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಯ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡುತ್ತಿರುವುದು ಇದಕ್ಕೆ ಕಾರಣವಾಗಿರಬಹುದು. ಭದ್ರತಾ ಕಾರಣಗಳಿಂದಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟೀಮ್ ಇಂಡಿಯಾವನ್ನು ಪಾಕಿಸ್ತಾನಕ್ಕೆ ಹೋಗಲು ಅನುಮತಿ ನೀಡಿಲ್ಲ. ಹೀಗಾಗಿ ಟೀಮ್ ಇಂಡಿಯಾ ಪಂದ್ಯಗಳು ದುಬೈನಲ್ಲಿ ಮಾತ್ರ ನಡೆಯುತ್ತಿವೆ. ಇದರಿಂದ ಪಾಕಿಸ್ತಾನ ತ್ರಿವರ್ಣ ಧ್ವಜ್ವವನ್ನು ಪಾಕಿಸ್ತಾನ ಹಾರಿಸಿಲ್ಲ ಎಂದು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಕಿಡಿಕಾರಿದ್ದಾರೆ.

ICC Champions Trophy 2025 Pakistan has not hoisted the Indian national flag at the Karachi Stadium

ಯಾವುದೇ ದೇಶವು ಯಾವುದೇ ಐಸಿಸಿ ಟೂರ್ನಿಯನ್ನು ಆಯೋಜಿಸಿದರೂ, ಭಾಗವಹಿಸುವ ಎಲ್ಲಾ ತಂಡಗಳ ರಾಷ್ಟ್ರಧ್ವಜವನ್ನು ಆ ದೇಶದ ಕ್ರೀಡಾಂಗಣದಲ್ಲಿ ಟೂರ್ನಿ ಮುಗಿಯುವವರೆಗೆ ಹಾರಿಸಲಾಗುತ್ತದೆ. ಈಗ ಕರಾಚಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್, ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳ ರಾಷ್ಟ್ರಧ್ವಜವನ್ನು ಮಾತ್ರ ಹಾರಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ವಿಶ್ವ ಕ್ರಿಕೆಟ್‌ನಲ್ಲಿ ಮತ್ತೊಮ್ಮೆ ಪಾಕಿಸ್ತಾನ ತನ್ನ ಸಣ್ಣತನವನ್ನು ತೋರಿಸಿದೆ ಎಂದು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯಗಳ ಪಾಕಿಸ್ತಾನದ ಮೂರು ಕ್ರೀಡಾಂಗಣಗಳಲ್ಲಿ ನಡೆಯಲಿವೆ. ಲಾಹೋರ್‌ನ ಗಡಾಫಿ ಕ್ರೀಡಾಂಗಣ, ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣ ಮತ್ತು ರಾವಲ್ಪಿಂಡಿಯ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಯೋಜಿಸಲಾಗಿದೆ. ಕರಾಚಿ ಮತ್ತು ಲಾಹೋರ್ ಎರಡು ಕ್ರೀಡಾಂಗಣಗಳಲ್ಲಿ ಉದ್ಘಾಟನಾ ಸಮಾರಂಭಗಳು ನಡೆದಿದ್ದು, ವೀಡಿಯೊಗಳು ಹೊರ ಬಿದ್ದಿವೆ.

ಫೆಬ್ರವರಿ 19 ರಿಂದ ಪ್ರಾರಂಭವಾಗುವ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನ ಆಯೋಜಿಸುತ್ತಿದ್ದು, ಇದರಲ್ಲಿ ಒಟ್ಟು ಎಂಟು ತಂಡಗಳು ಭಾಗವಹಿಸುತ್ತಿವೆ. ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮೊದಲ ಬಾರಿಗೆ ಈ ಟೂರ್ನಿಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿವೆ. ಫೆಬ್ರವರಿ 19 ರಂದು ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ. ಭಾರತ ತಂಡ ಫೆಬ್ರವರಿ 20 ರಂದು ದುಬೈನಲ್ಲಿ ಬಾಂಗ್ಲಾದೇಶ ವಿರುದ್ಧ ತನ್ನ ಅಭಿಯಾನವನ್ನು ಆರಂಭಿಸಲಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ 8 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಎ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ತಂಡಗಳು ಸ್ಥಾನ ಪಡೆದಿದ್ದರೆ, ಬಿ ಗುಂಪಿನಲ್ಲಿ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ತಂಡಗಳಿವೆ.

Story first published: Monday, February 17, 2025, 17:01 [IST]
Other articles published on Feb 17, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+