Champions Trophy 2025: ಐಸಿಸಿ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟಣೆ ಬಗ್ಗೆ ಬಿಗ್ ಅಪ್ಡೇಟ್!
2025ರ ಐಸಿಸಿ ಚಾಂಪಿಯನ್ ಟ್ರೋಫಿ ಟೂರ್ನಿಗೆ ಪಾಕಿಸ್ತಾನ ಆತಿಥ್ಯ ವಹಿಸಲಿದೆ. ಪಾಕಿಸ್ತಾನ ಆತಿಥ್ಯ ವಹಿಸಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಬಗ್ಗೆ ಈಗಾಗಲೇ ಅಭಿಮಾನಿಗಳಲ್ಲಿ ಉತ್ಸಾಹವಿದೆ. ಪಾಕಿಸ್ತಾನ ಕೂಡ ಐಸಿಸಿ ಪ್ರತಿಷ್ಠಿತ ಟೂರ್ನಿಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇದೀಗ ಚಾಂಪಿಯನ್ ಟ್ರೋಫಿಯ ವೇಳಾಪಟ್ಟಿಗೆ ಸಂಬಂಧಿಸಿದ ಬಿಗ್ ಅಪ್ಡೇಟ್ ಹೊರ ಬಿದ್ದಿದೆ. ಅದರಲ್ಲೂ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಯಾವಾಗ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
ಭಾರತ ತಂಡ ಪಾಕಿಸ್ತಾನಕ್ಕೆ ಹೋಗಲು ಹಿಂದೇಟು ಹಾಕುತ್ತಿದೆ. ಹೀಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಹೋಗಲಿದೆಯೇ ಅಥವಾ ಎರಡು ತಂಡಗಳ ನಡುವಿನ ಪಂದ್ಯ ತಟಸ್ಥ ಸ್ಥಳದಲ್ಲಿ ನಡೆಯಲಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ನಡುವ ಚಾಂಪಿಯನ್ ಟ್ರೋಫಿ ವೇಳಾಪಟ್ಟಿಯ ಪ್ರಕಟಣೆ ಯಾವಾಗ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ಪಾಕಿಸ್ತಾನದ ಮಾಧ್ಯಮ ವರದಿಗಳ ಪ್ರಕಾರ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ), ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಸಹಯೋಗದೊಂದಿಗೆ ನಡೆಯಲಿರುವ 2025 ರ ಚಾಂಪಿಯನ್ಸ್ ಟ್ರೋಫಿಯ ಸಂಪೂರ್ಣ ವೇಳಾಪಟ್ಟಿಯನ್ನು ಮುಂದಿನ ಕೆಲವೇ ದಿನಗಳಲ್ಲಿ ಪ್ರಕಟಿಸಲಿದೆ.
ಚಾಂಪಿಯನ್ಸ್ ಟ್ರೋಫಿ ಸ್ಥಳಗಳಿಗೆ ಪಿಸಿಬಿ ಮಾಡಿರುವ ವ್ಯವಸ್ಥೆಗಳನ್ನು ಪರಿಶೀಲಿಸಲು ಐಸಿಸಿ ನಿಯೋಗವು ನವೆಂಬರ್ 10 ರಂದು ಲಾಹೋರ್‌ಗೆ ಭೇಟಿ ನೀಡಲಿದೆ. ಇದಾದ ನಂತರ ನವೆಂಬರ್ 11 ರಂದು ನಡೆಯಲಿರುವ ಅಧಿಕೃತ ಸಮಾರಂಭದಲ್ಲಿ ಹಾಲಿ ಮತ್ತು ಮಾಜಿ ಪಾಕ್ ಕ್ರಿಕೆಟಿಗರು ಸೇರಿದಂತೆ ಪ್ರಮುಖರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈ ಸಮಾರಂಭದಲ್ಲಿ 2025ರ ಚಾಂಪಿಯನ್ ಟ್ರೋಫಿಯಾ ಟ್ರೋಫಿ ಟೂರ್ನಿಯ ವೇಳಾಪಟ್ಟಿಯನ್ನು ಪ್ರಕಟಿಸಬಹುದು.

ಪ್ರಸ್ತಾವಿತ ವೇಳಾಪಟ್ಟಿಯ ಪ್ರಕಾರ, ಪಾಕಿಸ್ತಾನ ತಂಡವನ್ನು ಭಾರತ, ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ಜೊತೆಗೆ ಎ ಗುಂಪಿನಲ್ಲಿ ಇರಿಸಲಾಗಿದೆ. ಬಿ ಗುಂಪಿನಲ್ಲಿ ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ತಂಡಗಳಿವೆ. ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸಲು ಟೀಮ್ ಇಂಡಿಯಾವನ್ನು ಕಳುಹಿಸಲು ಬಿಸಿಸಿಐ ಭಾರತ ಸರ್ಕಾರದ ನಿರ್ಧಾರಕ್ಕೆ ಕಾಯುತ್ತಿದೆ.
ಚಾಂಪಿಯನ್ಸ್ ಟ್ರೋಫಿ ಟೂರ್ನಿ 2025ರ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಫೈನಲ್ ಪಂದ್ಯಕ್ಕಾಗಿ ಮಾರ್ಚ್ 10 ಅನ್ನು ಮೀಸಲು ದಿನವನ್ನು ಇರಿಸಲಾಗಿದೆ. ಲಾಹೋರ್, ಕರಾಚಿ ಮತ್ತು ರಾವಲ್ಪಿಂಡಿ ಪಂದ್ಯಗಳಿಗೆ ಆತಿಥ್ಯ ವಹಿಸಲಿದ್ದು, ಲಾಹೋರ್‌ನಲ್ಲಿ ಫೈನಲ್ ಸೇರಿದಂತೆ 7 ಪಂದ್ಯಗಳು ನಡೆಯಲಿವೆ. ಕರಾಚಿಯಲ್ಲಿ ಆರಂಭಿಕ ಪಂದ್ಯ ಮತ್ತು ಸೆಮಿಫೈನಲ್ ನಡೆಯಲಿದ್ದು, ರಾವಲ್ಪಿಂಡಿಯಲ್ಲಿ ಎರಡನೇ ಸೆಮಿಫೈನಲ್ ಸೇರಿದಂತೆ 5 ಪಂದ್ಯಗಳು ನಡೆಯಲಿವೆ. ಸೆಮಿಫೈನಲ್ ಪಂದ್ಯಗಳು ಮಾರ್ಚ್ 5 ಮತ್ತು 6 ರಂದು ನಡೆಯಲಿದ್ದು, ಫೈನಲ್ ಪಂದ್ಯ ಮಾರ್ಚ್ 9 ರಂದು ಲಾಹೋರ್‌ನಲ್ಲಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications