Champions Trophy 2025: ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿಗಳಿಗೆ ಮಣೆ
ಪಾಕಿಸ್ತಾನ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗೆ ಆಸ್ಟ್ರೇಲಿಯಾ ಕ್ರಿಕೆಟ್ ತನ್ನ ತನ್ನ ತಾತ್ಕಾಲಿಕ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿರುವ ಇಬ್ಬರು ಆಟಗಾರರಿಗೆ ಚಾಂಪಿಯನ್ಸ್ ಟ್ರೋಫಿ ಮೊದಲ ಟೂರ್ನಿಯಾಗಿದೆ. ಮತ್ತೊಂದೆಡೆ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಸ್ಪೋಟಕ ಬ್ಯಾಟರ್ ಜೇಕ್ ಫ್ರೇಸರ್-ಮೆಕ್‌ಗುರ್ಕ್ ತಂಡದಿಂದ ಹೊರಗುಳಿದಿದ್ದಾರೆ.
ಹಾಲಿ ವಿಶ್ವ ಚಾಂಪಿಯನ್ ಹಾಗೂ ಎರಡು ಬಾರಿ ಚಾಂಪಿಯನ್ಸ್ ಟ್ರೋಫಿ ವಿಜೇತ ಆಸ್ಟ್ರೇಲಿಯಾ ಮತ್ತೊಂದು ಐಸಿಸಿ ಟ್ರೋಫಿ ಗೆಲ್ಲಲು ಸ್ಟಾರ್ ಅನುಭವಿ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಆಸ್ಟ್ರೇಲಿಯಾ ತಂಡದ ನಾಯಕತ್ವವನ್ನು ಪ್ಯಾಟ್ ಕಮಿನ್ಸ್‌ಗೆ ವಹಿಸಲಿದ್ದು, ಅನುಭವಿ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಅವರನ್ನು ಉಪನಾಯಕರನ್ನಾಗಿ ಮಾಡಲಾಗಿದೆ.

ಭಾರತ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಕಮ್ಮಿನ್ಸ್ ಗಾಯಗೊಂಡಿದ್ದರು. ಗಾಯದ ಹೊರತಾಗಿಯೂ ತಂಡವನ್ನು ನಾಯಕನ್ನಾಗಿ ಮುನ್ನಡೆಸಲಿದ್ದಾರೆ. ಅವರ ಗಾಯದ ಬಗ್ಗೆ ಇನ್ನೂ ಯಾವುದೇ ವೈದ್ಯಕೀಯ ಅಪ್‌ಡೇಟ್ ಬಂದಿಲ್ಲ. ಈ ಐಸಿಸಿ ಟೂರ್ನಿಯಲ್ಲಿ ಅವರು ಆಡುತ್ತಿರುವುದು ಇನ್ನೂ ದೃಢಪಟ್ಟಿಲ್ಲ.
ಮೊದಲ ಬಾರಿಗೆ ಐಸಿಸಿ ಟೂರ್ನಿಯೊಂದನ್ನು ಆಡಲು ಮ್ಯಾಟ್ ಶಾರ್ಟ್ ಮತ್ತು ಆರನ್ ಹಾರ್ಡಿ ಸಜ್ಜಾಗಿದ್ದಾರೆ.
ವೇಗದ ಬೌಲರ್ ನಾಥನ್ ಎಲ್ಲಿಸ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂವರು ಏಕದಿನ ವಿಶ್ವಕಪ್ 2023 ಗೆದ್ದ ತಂಡದಿಂದ ಡೇವಿಡ್ ವಾರ್ನರ್, ಕ್ಯಾಮೆರಾನ್ ಗ್ರೀನ್ ಮತ್ತು ಸೀನ್ ಅಬಾಟ್ ಅವರ ಬದಲಿಗೆ0 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಚಾಂಪಿಯನ್ ಟ್ರೋಫಿ 2025 ಆಸ್ಟ್ರೇಲಿಯಾ ತಂಡ
ಪ್ಯಾಟ್ ಕಮ್ಮಿನ್ಸ್ (ನಾಯಕ), ಅಲೆಕ್ಸ್ ಕ್ಯಾರಿ (ವಿಕೆಟ್‌ಕೀಪರ್), ನಾಥನ್ ಎಲ್ಲಿಸ್, ಆರನ್ ಹಾರ್ಡಿ, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್‌ಕೀಪರ್), ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಮಿಚೆಲ್ ಸ್ಟಾರ್ಕ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್ , ಆಡಮ್ ಝಂಪಾ.
ವೇಳಾಪಟ್ಟಿ
- ಫೆಬ್ರವರಿ 22: ಆಸ್ಟ್ರೇಲಿಯಾ vs ಇಂಗ್ಲೆಂಡ್, ಲಾಹೋರ್
- ಫೆಬ್ರವರಿ 25: ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ, ರಾವಲ್ಪಿಂಡಿ
- ಫೆಬ್ರವರಿ 28: ಅಫ್ಘಾನಿಸ್ತಾನ vs ಆಸ್ಟ್ರೇಲಿಯಾ, ಲಾಹೋರ್
- ಮಾರ್ಚ್ 4: ಸೆಮಿಫೈನಲ್ 1 (ಆರ್ಹತೆ ಪಡೆದರೆ), ದುಬೈ
- ಮಾರ್ಚ್ 5: ಸೆಮಿಫೈನಲ್ 2 (ಆರ್ಹತೆ ಪಡೆದರೆ), ಲಾಹೋರ್
- ಮಾರ್ಚ್ 9: ಫೈನಲ್, (ಆರ್ಹತೆ ಪಡೆದರೆ) ಲಾಹೋರ್ ಅಥವಾ ದುಬೈ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications