For Quick Alerts
ALLOW NOTIFICATIONS  
For Daily Alerts
 

IND vs BAN ಚಾಂಪಿಯನ್ಸ್‌ ಟ್ರೋಫಿ 2025: ಟೀಮ್ ಇಂಡಿಯಾ 'ಶುಭ್' ಆರಂಭ

ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ 2025ರ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು 6 ವಿಕೆಟ್‌ಗಳಿಂದ ಸೋಲಿಸಿದೆ. ಈ ಮೂಲಕ ರೋಹಿತ್ ಶರ್ಮಾ ನೇತೃತ್ವದ ಭಾರತ ಚಾಂಪಿಯನ್ಸ್ ಟ್ರೋಫಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತೋಹೀದ್ ಹೃದಯ್ ಅವರ ಶತಕದ ನೆರವಿನಿಂದ 49.4 ಓವರ್‌ಗಳಲ್ಲಿ 228 ರನ್ ಗಳಿಸಿತು.

ಬಾಂಗ್ಲಾದೇಶ ನೀಡಿದ ಗುರಿಯನ್ನು ಬೆನ್ನಟ್ಟಿದ ಭಾರತ ಪರ ಶುಭಮನ್ ಗಿಲ್ ಅದ್ಭುತ ಬ್ಯಾಟಿಂಗ್ ಮಾಡಿ ಶತಕ ಗಳಿಸಿದರು. ರೋಹಿತ್ ಶರ್ಮಾ ಜೊತೆ ಆರಂಭಿಕನಾಗಿ ಬಂದ ಗಿಲ್ ಒಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ಪಂದ್ಯವನ್ನು ಗೆಲ್ಲಿಸಿದರು. ಗಿಲ್ ಶತಕದ ಬಲದಿಂದ ಭಾರತ 46.3 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 231 ರನ್ ಗಳಿಸುವ ಮೂಲಕ ಗೆಲುವು ಸಾಧಿಸಿತು.

ICC Champions Trophy 2025 Team India defeats Bangladesh by 6 wickets

ಬಾಂಗ್ಲಾದೇಶ ನೀಡಿದ 229 ರನ್‌ಗಳ ಗುರಿಯನ್ನು ಬೆನ್ನಟ್ಟಲು ಭಾರತ ತಂಡದಿಂದ ನಾಯಕ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಬಂದರು. ಇಬ್ಬರೂ ಸೇರಿ ಮೊದಲ ವಿಕೆಟ್‌ಗೆ 9.5 ಓವರ್‌ಗಳಲ್ಲಿ 69 ರನ್‌ಗಳನ್ನು ಸೇರಿಸಿದರು. ರೋಹಿತ್ 36 ಎಸೆತಗಳಲ್ಲಿ 7 ಬೌಂಡರಿಗಳೊಂದಿಗೆ 41 ರನ್ ಗಳಿಸಿ ತಸ್ಕಿನ್ ಅಹ್ಮದ್ ಬೌಲಿಂಗ್‌ನಲ್ಲಿ ಔಟಾದರು. ಇದಾದ ನಂತರ ವಿರಾಟ್ ಕೊಹ್ಲಿ 22 ರನ್‌ಗಳಿಗೆ ವಿಕೆಟ್ ಕಳದುಕೊಂಡರು.

ವಿರಾಟ್ ಕೊಹ್ಲಿ ನಂತರ, ಶ್ರೇಯಸ್ ಅಯ್ಯರ್ 17 ಎಸೆತಗಳಲ್ಲಿ 2 ಬೌಂಡರಿಗಳೊಂದಿಗೆ 15 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಅಕ್ಸರ್ ಪಟೇಲ್ ಕೂಡ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಅವರು 12 ಎಸೆತಗಳಲ್ಲಿ 1 ಬೌಂಡರಿಯೊಂದಿಗೆ 8 ರನ್ ಗಳಿಸಿ ಔಟಾದರು. ಬಳಿಕ ಬಂದ ಕೆಎಲ್ ರಾಹುಲ್ ಅವರು ಶುಭಮನ್ ಗಿಲ್‌ಗೆ ಬೆಂಬಲ ನೀಡಿದರು. ಇಬ್ಬರೂ ಐದನೇ ವಿಕೆಟ್‌ಗೆ 87 ರನ್‌ಗಳ ಅಜೇಯ ಜೊತೆಯಾಟ ಆಡುವ ಮೂಲಕ ಭಾರತಕ್ಕೆ 6 ವಿಕೆಟ್‌ಗಳ ಜಯ ತಂದುಕೊಟ್ಟರು.

ಶುಭಮನ್ ಗಿಲ್ 125 ಎಸೆತಗಳಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್‌ಗಳ ನೆರವಿನಿಂದ ಶತಕ ಪೂರೈಸಿದರು. ಇದು ಗಿಲ್ ಅವರ 8ನೇ ಏಕದಿನ ಶತಕವಾಗಿದ್ದು, ಚಾಂಪಿಯನ್ಸ್ ಟ್ರೋಫಿಯಲ್ಲಿ ಚೊಚ್ಚಲ ಶತಕವಾಗಿದೆ. ಅವರು ಅಜೇಯ 101 ರನ್‌ಗಳ ಇನ್ನಿಂಗ್ಸ್ ಆಡಿದರು. ಕೆಎಲ್ ರಾಹುಲ್ 47 ಎಸೆತಗಳಲ್ಲಿ 1 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ ಅಜೇಯ 41 ರನ್ ಗಳಿಸಿದರು. ಬಾಂಗ್ಲಾದೇಶ ಪರ ರಿಷಾದ್ ಹುಸೇನ್ 2 ವಿಕೆಟ್ ಪಡೆದರೆ, ತಂಜಿಮ್ ಹಸನ್ ಸಕಿಬ್ ಮತ್ತು ಮುಸ್ತಾಫಿಜುರ್ ರೆಹಮಾನ್ ತಲಾ 1 ವಿಕೆಟ್ ಪಡೆದರು.

ಇದಕ್ಕೂ ಮುನ್ನ ಸೌಮ್ಯ ಸರ್ಕಾರ್ ಮತ್ತು ನಜ್ಮುಲ್ ಹಸನ್ ಶಾಂತೊ ಶೂನ್ಯಕ್ಕೆ ಔಟಾದ ಕಾರಣ ಬಾಂಗ್ಲಾದೇಶ ಉತ್ತಮ ಆರಂಭ ಕಾಣಲಿಲ್ಲ. ಉರಿ ಬೌಲಿಂಗ್ ದಾಳಿ ನಡೆಸಿದ ಟೀಮ್ ಇಂಡಿಯಾ ಬೌಲರ್ಸ್ ಬಾಂಗ್ಲಾದೇಶ ತಂಡವನ್ನು ಒಂದು ಹಂತದಲ್ಲಿ 5 ವಿಕೆಟ್‌ ಪಡೆದು 35 ರನ್‌ಗಳಿಗೆ ಕಟ್ಟಿ ಹಾಕಿದರು.

ಜಕಾರ್ ಅಲಿ 114 ಎಸೆತಗಳಲ್ಲಿ 4 ಬೌಂಡರಿಗಳೊಂದಿಗೆ 68 ರನ್ ಗಳಿಸಿದರು. ಇದರೊಂದಿಗೆ ತೋಹೀದ್ ಹೃದಯ್ 114 ಎಸೆತಗಳಲ್ಲಿ 6 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ ತಮ್ಮ ಶತಕವನ್ನು ಪೂರೈಸಿದರು. ಈ ಮೂಲಕ ಬಾಂಗ್ಲಾದೇಶ 49.4 ಓವರ್‌ಗಳಲ್ಲಿ 228 ರನ್ ಗಳಿಸಿ ಆಲೌಟಾಯಿತು. ಭಾರತದ ಪರ ಮೊಹಮ್ಮದ್ ಶಮಿ 5 ವಿಕೆಟ್ ಪಡೆದರು. ಶಮಿ 10 ಓವರ್‌ಗಳಲ್ಲಿ 53 ರನ್‌ಗಳಿಗೆ 4 ವಿಕೆಟ್‌ಗಳನ್ನು ಪಡೆದರು.

Story first published: Thursday, February 20, 2025, 22:13 [IST]
Other articles published on Feb 20, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+