Champions Trophy 2025: ಟೀಮ್ ಇಂಡಿಯಾಗೆ ಟಾಪ್ ಆರ್ಡರ್ ಟೆಕ್ಷನ್!
ಫೆಬ್ರವರಿ 19 ರಿಂದ ಪ್ರಾರಂಭವಾಗುವ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಟೀಮ್ ಇಂಡಿಯಾ ತಂಡಕ್ಕಾಗಿ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಭಾರತ ಕ್ರಿಕೆಟ್ ನಿಯಂತ್ರಂಣ ಮಂಡಳಿಯ (ಬಿಸಿಸಿಐ) ಆಯ್ಕೆ ಸಮಿತಿಗೆ ಟೀಮ್ ಇಂಡಿಯಾಗೆ ಟಾಪ್ ಆರ್ಡರ್ ಕಳಪೆ ಫಾರ್ಮ್‌ನಲ್ಲಿರುವುದು ಟೆಕ್ಷನ್ ಹೆಚ್ಚಿದೆ. ಯುವ ಸ್ಟಾರ್ ಆಟಗಾರರೊಂದಿಗೆ ಅನುಭವಿ ಬ್ಯಾಟರ್‌ಗಳು ಕೂಡ ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದಾರೆ.
ಇತ್ತೀಚೆಗೆ ಮುಕ್ತಾಯವಾದ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಸೋಲಿಗೆ ಟೀಮ್ ಇಂಡಿಯಾ ಟಾಪ್ ಆರ್ಡರ್ ಬ್ಯಾಟಿಂಗ್ ಪ್ರಮುಖ ಕಾರಣವಾಗಿತ್ತು. ಭಾರತ ತಂಡಕ್ಕೆ ಉತ್ತಮ ಆರಂಭ ನೀಡಬೇಕಿದ್ದ ಅನುಭವಿ ಬ್ಯಾಟರ್‌ಗಳು ಫಾರ್ಮ್ ಸಮಸ್ಯೆಯಿಂದಾಗಿ ರನ್ ಗಳಿಸಲು ಸಾಧ್ಯವಾಗಲಿಲ್ಲ. ಇದೀಗ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗೆ ಬಿಸಿಸಿಐ ಟೀಮ್ ಇಂಡಿಯಾ ಪ್ರಕಟಿಸುವ ಮುನ್ನ ಟಾಪ್ ಆರ್ಡರ್ ಟೆಕ್ಷನ್ ತಂದಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತಕ್ಕೆ ರೋಹಿತ್ ಶರ್ಮಾ ಅವರೊಂದಿಗೆ ಶುಭಮನ್ ಗಿಲ್ ಇನ್ನಿಂಗ್ಸ್ ತೆರೆಯುವ ಸಾಧ್ಯತೆಯಿದೆ. ಆದರೆ, ಇಬ್ಬರೂ ಸ್ಟಾರ್ ಬ್ಯಾಟರ್‌ಗಳು ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದಾರೆ. ಇದರ ಮಧ್ಯೆ ರೋಹಿತ್ ಶರ್ಮಾಗೆ ನಾಯಕತ್ವವನ್ನು ಬಿಸಿಸಿಐ ನೀಡುತ್ತಾ ಎಂಬುದು ಪ್ರಶ್ನೆ ಹುಟ್ಟು ಹಾಕಿದೆ. ಶುಭಮನ್ ಗಿಲ್ ಫಾರ್ಮ್ ಸಮಸ್ಯೆ ಎದುರಿಸುತ್ತಿರುವುದರಿಂದ ಮತ್ತೊಂದು ಆಯ್ಕೆಯಲ್ಲಿ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಲೆಕ್ಕಚಾರ ಕೂಡ ನಡೆಯಿತ್ತಿದೆ. ಈಗಾಗಲೇ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಅವರೊಂದಿಗೆ ಜೈಸ್ವಾಲ್ ತಮ್ಮ ಆಕ್ರಮಣಕಾರಿ ಬ್ಯಾಟಿಂಗ್‌ನೊಂದಿಗೆ ಟೀಮ್ ಇಂಡಿಯಾಕ್ಕೆ ಅದ್ಭುತ ಆರಂಭವನ್ನು ನೀಡಿದ್ದಾರೆ.
ಭಾರತಕ್ಕೆ ಮೂರನೇ ಕ್ರಮಾಂಕದಲ್ಲಿ ಆಸರೆಯಾಗುವ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸಹಾ ಆಸ್ಟ್ರೇಲಿಯಾ ವಿರುದ್ಧ ಪರ್ತ್ ಟೆಸ್ಟ್‌ನಲ್ಲಿ ಶತಕ ಸಿಡಿಸಿ ಸೈಲೆಂಟ್ ಆಗಿದ್ದಾರೆ. ವಿರಾಟ್ ಕೊಹ್ಲಿ ಒಮ್ಮೆ ಸಿಡಿದೆದ್ದರೆ, ಎದುರಾಳಿ ಬೌಲರ್‌ಗಳಿಗೆ ನರಕ ತೋರಿಸಬಲ್ಲರು. ಕೊಹ್ಲಿ ಮೇಲೂ ಬೆಟ್ಟದಷ್ಟೂ ನಿರೀಕ್ಷೆಗಳಿವೆ.
ಶ್ರೇಯಸ್ ಅಯ್ಯರ್ 4ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲಿದ್ದು, ದೇಶೀಯ ಕ್ರಿಕೆಟ್‌ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ. ಇನ್ನೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದ ಕೆಎಲ್ ರಾಹುಲ್ ಅವರು ಚಾಂಪಿಯನ್ಸ್ ಟ್ರೋಫಿಯಲ್ಲಿ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ. ಕೆಎಲ್ ರಾಹುಲ್ ತಂಡಕ್ಕೆ ಅಗತ್ಯ ಇದ್ದರೆ ಆರಂಭಿಕನಾಗಿಯೂ ಆಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಜೊತೆಗೆ ರಾಹುಲ್ ವಿಕೆಟ್ ಕೀಪರ್ ಪಾತ್ರವನ್ನೂ ನಿರ್ವಹಿಸಬಲ್ಲರು.
ಕನ್ನಡಿಗನಿಗೆ ಸ್ಥಾನ?
ಟೀಮ್ ಇಂಡಿಯಾ ಟಾಪ್ ಆರ್ಡರ್ ಬ್ಯಾಟಿಂಗ್ ಫಾರ್ಮ್ ಸಮಸ್ಯೆಯಿಂದಾಗಿ ಬಿಸಿಸಿಐ ಆಯ್ಕೆ ಸಮಿತಿ ಕನ್ನಡಿಗ ಮಾಯಾಂಕ್ ಅಗರ್ವಾಲ್ ಅವರಿನ್ನೂ ತಂಡಕ್ಕೆ ಸೇರಿಸಿಕೊಳ್ಳಬಹುದು. ದೇಶೀಯ ಕ್ರಿಕೆಟ್‌ನ ಪ್ರತಿಷ್ಠಿತಿ ಟೂರ್ನಿಯಾದ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸುತ್ತಿರುವ ಮಾಯಾಂಕ್ ಅಗರ್ವಾಲ್ ಸ್ಥಿರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಶತಕದ ಮೇಲೆ ಶತಕ ಸಿಡಿಸಿ ಎಲ್ಲರ ಚಿತ್ತ ಕದ್ದಿದ್ದಾರೆ. ಹೀಗಾಗಿ ಅದ್ಭುತ ಫಾರ್ಮ್‌ನಲ್ಲಿರುವ ಮಾಯಾಂಕ್ ಅಗರ್ವಾಲ್ ಅವರು ಕೂಡ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯ ಭಾರತ ತಂಡಕ್ಕೆ ಆಯ್ಕೆಯಾಗಬಹುದು. ಈ ಮೂಲಕ ಟೀಮ್ ಇಂಡಿಯಾ ಆರ್ಡರ್ ಟೆಕ್ಷನ್ ಅನ್ನು ಕಡಿಮೆ ಮಾಡಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications