Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Champions Trophy 2025: ಐಸಿಸಿ ಚಾಂಪಿಯನ್ ಟ್ರೋಫಿ ಈ ದೇಶದಲ್ಲಿ ನಡೆಯುವ ಸಾಧ್ಯತೆ!

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗೆ ಸಂಬಂಧಿಸಿದಂತೆ ಭಾರತ ಮತ್ತು ಪಾಕಿಸ್ತಾನದ ನಡುವೆ ವಿವಾದ ನಿಲ್ಲುವಂತೆ ಕಾಣುತ್ತಿಲ್ಲ. ಚಾಂಪಿಯನ್ಸ್ ಟ್ರೋಫಿ ಆಡಲು ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ. ಭಾರತ ಸರ್ಕಾರದಿಂದ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಐಸಿಸಿ ಮೆಗಾ ಟೂರ್ನಿಗೆ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಬಿಸಿಸಿಐ ಸಿದ್ಧವಿಲ್ಲ ಎಂದು ಐಸಿಸಿ ಪಿಸಿಬಿಗೆ ತಿಳಿಸಿದೆ. ಬಿಸಿಸಿಐಯ ಈ ನಿರ್ಧಾರದ ನಂತರ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ)ಗೆ ಸಮಸ್ಯೆಗಳು ಎದುರಾಗಿವೆ.

ವರದಿಗಳ ಪ್ರಕಾರ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಹೈಬ್ರಿಡ್ ಮಾದರಿಯನ್ನು ನಿರಾಕರಿಸಿದರೆ, ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ಅನ್ನು ದಕ್ಷಿಣ ಆಫ್ರಿಕಾದಲ್ಲಿ ನಡೆಸುವ ಸಾಧ್ಯತೆಯಿದೆ. ಟೂರ್ನಿಯಲ್ಲಿ ಭಾರತ ಭಾಗವಹಿಸುವ ಕುರಿತು ಸಾಕಷ್ಟು ಚರ್ಚೆಗಳು ನಡೆದಿದ್ದು, ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದೆ. ಅಲ್ಲದೆ, ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿರುವುದನ್ನು ದೃಢಪಡಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪಿಸಿಬಿಗೆ ಮೇಲ್ ಕಳುಹಿಸಿದೆ. ಐಸಿಸಿಯು ಹೈಬ್ರಿಡ್ ಮಾದರಿಯನ್ನು ಒಪ್ಪಿಕೊಂಡರೆ ಪಿಸಿಬಿಗೆ ಸಂಪೂರ್ಣ ಟೂರ್ನಿಯ ಆತಿಥ್ಯ ಶುಲ್ಕವನ್ನು ಖಚಿತಪಡಿಸಬಹುದು.

ICC Champions Trophy 2025 tournament is likely to be held in this country and not in Pakistan

ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಡಲು ಟೀಮ್ ಇಂಡಿಯಾ ಸಿದ್ಧವಾಗಿದೆ. ಟೀಮ್ ಇಂಡಿಯಾದ ಪಂದ್ಯಗಳನ್ನು ಯುಎಇಯಲ್ಲಿ ಮತ್ತು ಫೈನಲ್ ಅನ್ನು ದುಬೈನಲ್ಲಿ ನಡೆಸುವುದರ ಬಗ್ಗೆ ಐಸಿಸಿಗೆ ಬಿಸಿಸಿಐ ಮನವಿ ಸಲ್ಲಿಸಿದೆ. ಇಂತಹ ಸಂದರ್ಭದಲ್ಲಿ ಪಾಕಿಸ್ತಾನ ಸರ್ಕಾರವು ತನ್ನ ತಂಡವನ್ನು ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯಿಂದ ಹಿಂತೆಗೆದುಕೊಳ್ಳುವಂತೆ ಪಿಸಿಬಿ ಕೇಳಬಹುದು. ಇದಾದ ನಂತರ ಪಿಸಿಬಿ ಟೂರ್ನಿಯಿಂದ ಹಿಂದೆ ಸರಿಯಲು ನಿರ್ಧಾರ ತೆಗೆದುಕೊಳ್ಳಬಹುದು. ಕಳೆದ ವರ್ಷ ಪಾಕಿಸ್ತಾನ ಆಯೋಜಿಸಿದ್ದ ಏಷ್ಯಾಕಪ್ ಕೂಡ ಹೈಬ್ರಿಡ್ ಮಾದರಿಯಲ್ಲಿ ನಡೆದಿದ್ದು, ಭಾರತ ಪಾಕಿಸ್ತಾನದಲ್ಲಿ ಆಡಲು ನಿರಾಕರಿಸಿತ್ತು. ಹೀಗಾಗಿ ಭಾರತದ ಪಂದ್ಯಗಳ ಶ್ರೀಲಂಕಾದಲ್ಲಿ ನಡೆದಿದ್ದವು.

ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗೆ ಸುಮಾರು 3 ತಿಂಗಳು ಬಾಕಿ ಇದೆ. ಮುಂದಿನ ವರ್ಷ 2025ರ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಐಸಿಸಿ ಪ್ರಸ್ತುತ ಭಾರತ ಮತ್ತು ಪಾಕಿಸ್ತಾನ ನಡುವಿನ ವಿವಾದವನ್ನು
ಪರಿಹರಿಸುವಲ್ಲಿ ನಿರತವಾಗಿದೆ. 2008ರಲ್ಲಿ ಕೊನೆಯ ಬಾರಿ ಭಾರತ ತಂಡ ಪಾಕಿಸ್ತಾನ ಪ್ರವಾಸ ಕೈಗೊಂಡಿತ್ತು. ಈ ಬಾರಿ ಐಸಿಸಿ ತನ್ನ ಅಂತಿಮ ನಿರ್ಧಾರವನ್ನು ಏನು ನೀಡುತ್ತದೆ ಎಂಬುದು ಕುತೂಹಲಕಾರಿಯಾಗಿದೆ.

Story first published: Wednesday, November 13, 2024, 8:06 [IST]
Other articles published on Nov 13, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+