ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

2021ರ ಟಿ20 ವಿಶ್ವಕಪ್ ಭಾರತದಲ್ಲಿ ನಿಗದಿಯಂತೆಯೇ ನಡೆಯಲಿದೆ: ಐಸಿಸಿ

ICC confirms 2021 T20 World Cup stays in India as per schedule

2021ರಲ್ಲಿ ನಿರ್ಧಾರವಾಗಿರುವ ಟಿ20 ವಿಶ್ವಕಪ್ ಪೂರ್ವಯೋಜನೆಯಂತೆಯೇ ಭಾರತದಲ್ಲಿ ನಡೆಯಲಿದೆ ಎಂಬುದನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ. 16 ದೇಶಗಳು ಪಾಲ್ಗೊಳ್ಳುವ ಈ ಟೂರ್ನಿಯನ್ನು ಮುಂದಿನ ವರ್ಷ ಅಕ್ಟೋಬರ್-ನವೆಂಬರ್ ತಿಂಗಳಿನಲ್ಲಿ ನಿಗದಿಯಾಗಿದೆ.

ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ಭಾರತ, ಐರ್ಲೆಂಡ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ ಜೊತೆಗೆ ಹೊಸ ಅರ್ಹ ತಂಡಗಳಾಗಿ ಪಪುವಾ ನ್ಯೂಗಿನಿ ನಮೀಬಿಯಾ, ನೆದರ್ಲ್ಯಾಂಡ್ಸ್, ಓಮನ್ ಮತ್ತು ಸ್ಕಾಟ್ಲೆಂಡ್ ತಂಡಗಳು ಕೂಡ ಪಾಲ್ಗೊಳ್ಳಲಿದೆ.

ಇಂಡೋ-ಆಸಿಸ್ ಸರಣಿ: ಕಪಿಲ್‌ದೇವ್ ಕಾಲದ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದೆಯಾ ಟೀಮ್ ಇಂಡಿಯಾ?ಇಂಡೋ-ಆಸಿಸ್ ಸರಣಿ: ಕಪಿಲ್‌ದೇವ್ ಕಾಲದ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದೆಯಾ ಟೀಮ್ ಇಂಡಿಯಾ?

ವಿಶ್ವಕಪ್ ಆಯೋಜನೆಯ ಬಗ್ಗೆ ಐಸಿಸಿ ಮಾಧ್ಯಮ ವಕ್ತಾರ ಪ್ರತಿಕ್ರಿಯಿಸಿದ್ದಾರೆ. "ಈವರೆಗಿನ ತೀರ್ಮಾನದಂತೆ ಪೂರ್ವನಿಗದಿಯಂತೆಯೇ ವಿಶ್ವಕಪ್ ಪಂದ್ಯಾವಳಿ ಭಾರತದಲ್ಲೇ ಉಳಿದುಕೊಳ್ಳಲಿದೆ" ಎಂಬುದನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ.

ಈ ವರ್ಷದ ನವೆಂಬರ್ ತಿಂಗಳಿನಲ್ಲಿ ನಡೆಯಬೇಕಿದ್ದ ವಿಶ್ವಕಪ್‌ಅನ್ನು ಕಳೆದ ಆಗಸ್ಟ್‌ನಲ್ಲಿ ಮುಂದೂಡುವ ತೀರ್ಮಾನ ಕೈಗೊಳ್ಳಲಾಗಿತ್ತು. 2022ರಲ್ಲಿ ಆಸ್ಟ್ರೇಲಿಯಾ ವಿಶ್ವಕಪ್ ಆಯೋಜನೆ ಮಾಡುವ ಬಗ್ಗೆ ನಿರ್ಧರಿಸಲಾಗಿತ್ತು. ಭಾರತ ಇದಕ್ಕೂ ಮುನ್ನ 2016ರರಲ್ಲಿ ಟಿ20 ವಿಶ್ವಕಪ್ ಆಯೋಜಿಸಿತ್ತು. ಆಗ ವೆಸ್ಟ್ ಇಂಡೀಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

Story first published: Thursday, November 12, 2020, 17:06 [IST]
Other articles published on Nov 12, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X