ಮುಂದಿನ 3 ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಈ ದೇಶ ಆತಿಥ್ಯ
ಟೆಸ್ಟ್ ಕ್ರಿಕೆಟ್ ರೋಚಕತೆ ಹೆಚ್ಚಿಸಲು ಐಸಿಸಿ ಹೊಸ ಹೊಸ ಕ್ರಮಗಳನ್ನು ಮಾಡಿಕೊಳ್ಳುತ್ತಿದೆ. ಈ ವೇಳೆ ಟೆಸ್ಟ್ ಚಾಂಪಿಯನ್ ಶಿಪ್ ಆಯೋಜಿಸಿ ಟ್ರೋಫಿ ನೀಡುತ್ತಿದೆ. ಈ ಟೂರ್ನಿಯ ಫೈನಲ್‌ಗೆ ಏರಲು ತಂಡಗಳು ಫೈಟ್ ನಡೆಸಲಿವೆ. ಈ ಟೂರ್ನಿಯಲ್ಲಿ ವಿಶೇಷ ರೀತಿಯ ಅಂಕಪಟ್ಟಿಯನ್ನು ರಚಿಸಲಾಗಿದ್ದು, ಈ ಟೂರ್ನಿಯ ಎರಡು ವರ್ಷಗಳ ಕಾಲ ನಡೆಯುತ್ತಿದೆ. ಈ ವೇಳೆ ತಂಡಗಳು ಆಡುವ ಟೆಸ್ಟ್ ಪಂದ್ಯಗಳ ಆಧಾರದ ಮೇಲೆ ಫೈನಲ್ ಸ್ಥಾನವನ್ನು ನಿರ್ಧರಿಸಲಾಗುತ್ತದೆ. ಅಲ್ಲದೆ ಮುಂದಿನ ಮೂರು ವರ್ಷಗಳ ಫೈನಲ್ ಎಲ್ಲಿ ನಡೆಯಲಿದೆ ಎಂಬ ಬಗ್ಗೆ ಐಸಿಸಿ ಈಗ ಅಧಿಕೃತ ಮಾಹಿತಿ ನೀಡಿದೆ.
ಈಗಾಗಲೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಾಲ್ಕನೇ ಆವೃತ್ತಿ ಆರಂಭವಾಗಿದೆ. ಮುಂದಿನ ಮೂರು ಆವೃತ್ತಿಗಳಲ್ಲಿ ಆಯೋಜಿಸಬಹುದಾದ ಫೈನಲ್ ಪಂದ್ಯವನ್ನು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಗೆ ನೀಡಲಾಗಿದೆ ಎಂದು ಐಸಿಸಿ ಹೇಳಿದೆ. ಈಗಾಗಲೇ ಮೂರು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ಗೆ ಆತಿಥ್ಯ ನೀಡಿರುವ ಇಂಗ್ಲೆಂಡ್ ಮುಂದಿನ ಮೂರು ಫೈನಲ್‌ಗೆ ಅವಕಾಶ ನೀಡಲಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2027 ರ ಫೈನಲ್ ಅನ್ನು ಭಾರತದಲ್ಲಿ ನಡೆಸಬಹುದು ಎಂದು ಸಾಕಷ್ಟು ಚರ್ಚೆಗಳು ನಡೆದಿದ್ದವು. ಈಗ ಎಲ್ಲ ಊಹಾ ಪೋಹಗಳಿಗೆ ತೆರೆ ಬಿದ್ದಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತನ್ನ ವಾರ್ಷಿಕ ಸಭೆಯನ್ನು ಸಿಂಗಾಪುರದಲ್ಲಿ ನಡೆಸಿತು. ಮಹಿಳಾ ಕ್ರಿಕೆಟ್ ಉತ್ತೇಜಿಸಲು ಈ ಸಭೆಯಲ್ಲಿ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಇನ್ನು ಇದೇ ಸಭೆಯಲ್ಲಿ ಭಾರತದಲ್ಲಿ ನಡೆಯಲಿರುವ 2025ರ ಮಹಿಳಾ ಕ್ರಿಕೆಟ್ ವಿಶ್ವಕಪ್, 2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಸೇರಿದಂತೆ ಹಲವು ಐಸಿಸಿ ಟೂರ್ನಿಗಳ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆಗಳನ್ನು ನಡೆಸಲಾಗಿದೆ.
ಮೂರು ಚಾಂಪಿಯನ್ಸ್
ಈ ಹಿಂದಿನ ಮೂರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಇಂಗ್ಲೆಂಡ್‌ನಲ್ಲಿ ನಡೆದಿತ್ತು. ಮೊದಲ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಇಂಗ್ಲೆಂಡ್‌ನ ಸೌತಾಂಪ್ಟನ್‌ನಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಭಾರತ ತಂಡಗಳು ಕಾದಟ ನಡೆಸಿದವು. ಮೊದಲ ಬಾರಿಗೆ ನ್ಯೂಜಿಲೆಂಡ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. 2023ರ ಫೈನಲ್ ಲಾರ್ಡ್ಸ್ ನಲ್ಲಿ ನಡೆಯಲಿದೆ. ಈ ವೇಳೆ ಭಾರತ, ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸಿದವು. ಎರಡನೇ ಬಾರಿಯೂ ಟೀಮ್ ಇಂಡಿಯಾ ಫೈನಲ್‌ನಲ್ಲಿ ನಿರಾಸೆ ಅನುಭವಿಸಿತು. ಇನ್ನು ಇತ್ತೀಚಿಗೆ ನಡೆದ ಮೂರನೇ ಆವೃತ್ತಿಯ ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications