For Quick Alerts
ALLOW NOTIFICATIONS  
For Daily Alerts
 

2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್: ಖಚಿತಪಡಿಸಿದ ಐಸಿಸಿ

ICC confirms historic Women’s cricket participation in Commonwealth Games 2022

ಕ್ರಿಕೆಟ್ ಪ್ರೇಮಿಗಳು ಸಂತಸ ಪಡುವ ಸುದ್ದಿಯೊಂದನ್ನು ಐಸಿಸಿ ಬುಧವಾರ ಖಚಿತಪಡಿಸಿದೆ. ಮುಂಬರುವ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್ ಭಾಗವಾಗಿರಲಿದೆ ಎಂದು ಐಸಿಸಿ ಖಚಿತಪಡಿಸಿದೆ. ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕ್ರಿಕೆಟ್ ಕಾಣಿಸಿಕೊಂಡಂತಾಗಲಿದೆ.

ನವೆಂಬರ್ 18ರಂದು ಬುಧವಾರ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಹಾಗೂ ಕಾಮನ್ವೆಲ್ತ್ ಗೇಮ್ಸ್ ಫೆಡರೇಶನ್ ಮಹತ್ವದ ಮಾತುಕತೆ ನಡೆಸಿ ಈ ವಿಚಾರವನ್ನು ಖಚಿತಪಡಿಸಿದೆ. 2022ರ ಜುಲೈ 28ರಿಂದ ಆಗಸ್ಟ್ 8ರ ಮಧ್ಯೆ ನಡೆಯಲಿರುವ ಈ ಪಂದ್ಯಾವಳಿಯ 8 ತಂಡಗಳ ಅರ್ಹತಾ ಪ್ರಕ್ರಿಯೆಗಳನ್ನು ಇದೇ ಸಂದರ್ಭದಲ್ಲಿ ಪ್ರಕಟಿಸಿದೆ.

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳಾ ಕ್ರಿಕೆಟ್‌ನ ಮೊದಲ ಪಾಲ್ಗೊಳ್ಳುವಿಕೆಯಾಗಿರಲಿದೆ. ಪುರುಷರ ಕ್ರಿಕೆಟ್ 1998ರಲ್ಲಿ ಕೌಲಾಲಂಪುರದಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮೊದಲ ಬಾರಿಗೆ ಪಾಲ್ಗೊಳ್ಲುವ ಮೂಲಕ ಇತಿಹಾಸ ಸೃಷ್ಟಿಯಾಗಿತ್ತು.

ಇನ್ನು ಈ ಟೂರ್ನಿಯಲ್ಲಿ ಪಾಲ್ಗೊಳ್ಳುವ ತಂಡಗಳ ಅರ್ಹತೆಗಳನ್ನು ಕುಡ ಪ್ರಕಟಿಸಲಾಗಿದೆ. ಈ ಬಾರಿಯ ಕಾಮನ್‌ವೆಲ್ತ್ ಕ್ರೀಡಾಕೂಡ ಅಯೋಜನೆ ಮಾಡುವ ಇಂಗ್ಲೆಂಡ್ ನೇರವಾಗಿ ಅರ್ಹತೆಯನ್ನು ಪಡೆದುಕೊಂಡಿದೆ. 2021ರ ಏಪ್ರಿಲ್ 1ರ ವೇಳೆಗೆ ಟಿ20 ರ್ಯಾಂಕಿಂಗ್‌ನಲ್ಲಿ 6 ಸ್ಥಾನಗಳನ್ನು ಹೊಂದಿರುವ ತಂಡಗಳು ಆರ್ಹತೆಯನ್ನು ಪಡೆದುಕೊಳ್ಳಲಿದೆ. ಉಳಿದ ಒಂದು ತಂಡ 2022 ಜನವರಿ 1ಕ್ಕೂ ಮುನ್ನ ನಡೆಯುವ ಕ್ವಾಲಿಫೈಯರ್ ಪಂದ್ಯದಲ್ಲಿ ಆಡಿ ಅವಕಾಶವನ್ನು ಗಿಟ್ಟಿಸಿಕೊಳ್ಳಲಿದೆ.

Story first published: Thursday, November 19, 2020, 10:37 [IST]
Other articles published on Nov 19, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+