ICC fine: ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಪಾಕಿಸ್ತಾನಕ್ಕೆ ಭಾರೀ ದಂಡ
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ಫೆಬ್ರವರಿ 19 ರಿಂದ ಪ್ರಾರಂಭವಾಗಲಿದ್ದು, ಫೈನಲ್ ಪಂದ್ಯ ಮಾರ್ಚ್ 9 ರಂದು ನಡೆಯಲಿದೆ. ಆದರೆ ಅದಕ್ಕೂ ಮುನ್ನ ಐಸಿಸಿ ಪಾಕಿಸ್ತಾನ ತಂಡಕ್ಕೆ ಭಾರೀ ದಂಡ ವಿಧಿಸಿದೆ. ಕೇಪ್ ಟೌನ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ ನಿಗದಿತ ಸಮಯದಲ್ಲಿ ಓವರ್‌ಗಳನ್ನು ಪೂರೈಸದ ಕಾರಣ ಪಾಕಿಸ್ತಾನ ತಂಡಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ದಂಡವನ್ನು ವಿಧಿಸಿದೆ. ಐಸಿಸಿ ಪಂದ್ಯ ಶುಲ್ಕದ ಶೇಕಡಾ 25 ರಷ್ಟು ದಂಡ ವಿಧಿಸಿದ್ದು, ಜೊತೆಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಿಂದ ಪಾಕಿಸ್ತಾನ ತಂಡದ ಐದು ಅಂಕಗಳನ್ನು ಕಡಿತಗೊಳಿಸಿದೆ.
ಐಸಿಸಿ ಎಲೈಟ್ ಪ್ಯಾನೆಲ್ ಆಫ್ ಮ್ಯಾಚ್ ರೆಫರಿ ರಿಚಿ ರಿಚರ್ಡ್ಸನ್ ಈ ದಂಡವನ್ನು ವಿಧಿಸಿದ್ದಾರೆ. ಆಟಗಾರರು ಮತ್ತು ಆಟಗಾರರ ಬೆಂಬಲ ಸಿಬ್ಬಂದಿಗೆ ಸಂಬಂಧಿಸಿದ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಪ್ರಕಾರ, ಆಟಗಾರರು ತಮ್ಮ ನಿಗದಿತ ಸಮಯದಲ್ಲಿ ಬೌಲಿಂಗ್ ಮಾಡದ ಪ್ರತಿ ಓವರ್‌ಗೆ ಅವರ ಪಂದ್ಯದ ಶುಲ್ಕದ ಶೇಕಡಾ ಐದರಷ್ಟು ದಂಡವನ್ನು ವಿಧಿಸಲಾಗುತ್ತದೆ. ಇದೀಗ ಈ ದಂಡಕ್ಕೆ ಪಾಕಿಸ್ತಾನ ತಂಡ ಗುರಿಯಾಗಿದೆ.

ಹೆಚ್ಚುವರಿಯಾಗಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಆಟದ ಪರಿಸ್ಥಿತಿಗಳ ಆರ್ಟಿಕಲ್ 16.11.2 ರ ಪ್ರಕಾರ, ಪ್ರತಿ ತಂಡವು ಬೌಲಿಂಗ್ ಮಾಡಿದ ಪ್ರತಿ ಓವರ್‌ಗೆ ಒಂದು ಅಂಕವನ್ನು ದಂಡ ವಿಧಿಸಲಾಗುತ್ತದೆ. ಈ ಕಾರಣದಿಂದಾಗಿ ಐದು ಪಾಕಿಸ್ತಾನದ ಒಟ್ಟು ಐದು ಅಂಕಗಳನ್ನು ಕಡಿತಗೊಳಿಸಲಾಗಿದೆ.
ಪಾಕಿಸ್ತಾನದ ನಾಯಕ ಶಾನ್ ಮಸೂದ್ ಐಸಿಸಿ ವಿಧಿಸಿರುವ ಶಿಕ್ಷೆಯನ್ನು ಒಪ್ಪಿಕೊಂಡಿದ್ದಾರೆ. ಆದ್ದರಿಂದ ಔಪಚಾರಿಕ ವಿಚಾರಣೆಯ ಅಗತ್ಯವಿಲ್ಲ ಎಂದು ಐಸಿಸಿ ತಿಳಿಸಿದೆ. ಫೀಲ್ಡ್ ಅಂಪೈರ್‌ಗಳಾದ ಕುಮಾರ್ ಧರ್ಮಸೇನಾ ಮತ್ತು ನಿತಿನ್ ಮೆನನ್, ಮೂರನೇ ಅಂಪೈರ್ ಅಲೆಕ್ಸ್ ವಾರ್ಫ್ ಮತ್ತು ನಾಲ್ಕನೇ ಅಂಪೈರ್ ಸ್ಟೀಫನ್ ಹ್ಯಾರಿಸ್ ಅವರು ಆರೋಪಗಳನ್ನು ಮಾಡಿದ್ದರು.
ಪಾಕಿಸ್ತಾನಕ್ಕೆ ಸರಣಿ ಸೋಲು
ದಕ್ಷಿಣ ಆಫ್ರಿಕಾ ವಿರುದ್ಧ ಪಾಕಿಸ್ತಾನ 2-0 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಕಳೆದುಕೊಂಡಿದೆ. ಕೇಪ್ ಟೌನ್‌ನಲ್ಲಿ ನಡೆದ ಎರಡು ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ಎದುರು ಹರಿಣಗಳ ಪಡೆ ಪ್ರಾಬಲ್ಯ ಸಾಧಿಸುವ ಮೂಲಕ ಟೆಸ್ಟ್ ಸರಣಿ ಗೆದ್ದು ಬೀಗಿದೆ. ಈ ಮೂಲಕ ಮೊದಲ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಹರಿಣಗಳ ಪಡೆ ಫೈನಲ್‌ಗೆ ಪ್ರವೇಶಿಸಿದೆ. ಈಗ ಜೂನ್ 11 ರಂದು ಲಾರ್ಡ್ಸ್‌ನಲ್ಲಿ ಡಬ್ಲ್ಯೂಟಿಸಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಹರಿಣಗಳ ಪಡೆ ಎದುರಿಸಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications