Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

AFG vs ZIM: ಜಿಂಬಾಬ್ವೆ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ; ಅಫ್ಘಾನ್ ಆಟಗಾರನಿಗೆ ಬಿತ್ತು ದಂಡ

ಹರಾರೆಯಲ್ಲಿ ಶುಕ್ರವಾರ ನಡೆದ ಎರಡನೇ ಟಿ20 ಪಂದ್ಯದ ಜಿಂಬಾಬ್ವೆ ವಿರುದ್ಧ ಆಫ್ಘಾನಿಸ್ತಾನ ಗೆಲುವು ಸಾಧಿಸಿತು. ಈ ಮೂಲಕ ಜಿಂಬಾಬ್ವೆ ಮತ್ತು ಅಫ್ಘಾನಿಸ್ತಾನ ನಡುವಿನ ಸರಣಿ 1-1ರಲ್ಲಿ ಸಮಬಲಗೊಂಡಿದೆ. ಡಿಸೆಂಬರ್ 14, ಶನಿವಾರದಂದು ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಉಭಯ ತಂಡಗಳ ನಡುವೆ ನಿರ್ಣಾಯಕ ಪಂದ್ಯ ನಡೆಯಲಿದೆ. ಆದರೆ ಎರಡನೇ ಟಿ20 ಪಂದ್ಯದಲ್ಲಿ ನೀತಿ ಸಂಹಿತೆಯ ಲೆವೆಲ್ 1 ಉಲ್ಲಂಘಿಸಿದ್ದಕ್ಕಾಗಿ ಅಫ್ಘಾನಿಸ್ತಾನ ತಂಡದ ಆಟಗಾರನಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ದಂಡ ವಿಧಿಸಲಾಗಿದೆ.

ಅಫ್ಘಾನಿಸ್ತಾನದ ಅಲ್‌ರೌಂಡರ್ ಗುಲ್ಬದಿನ್ ನೈಬ್ ಅವರಿಗೆ ಪಂದ್ಯ ಶುಲ್ಕದ ಶೇಕಡಾ 15 ರಷ್ಟು ದಂಡವನ್ನು ಐಸಿಸಿ ವಿಧಿಸಿದೆ. ಅಂತಾರಾಷ್ಟ್ರೀಯ ಪಂದ್ಯದ ವೇಳೆ ಅಂಪೈರ್‌ನ ನಿರ್ಧಾರವನ್ನು ವಿರೋಧಿಸುವುದಕ್ಕೆ ಸಂಬಂಧಿಸಿದ ಆಟಗಾರರು ಮತ್ತು ಆಟಗಾರರ ಬೆಂಬಲ ಸಿಬ್ಬಂದಿಗಾಗಿ ಐಸಿಸಿ ನೀತಿ ಸಂಹಿತೆಯ 2.8 ನೇ ವಿಧಿಯನ್ನು ಉಲ್ಲಂಘಿಸಿದ್ದಕ್ಕಾಗಿ ನೈಬ್‌ ಅವರಿಗೆ ಶಿಕ್ಷೆ ವಿಧಿಸಲಾಗಿದೆ ಎಂದು ಐಸಿಸಿ ಸ್ಪಷ್ಟಪಡಿಸಿದೆ. ಐಸಿಸಿ ದಂಡದ ಜೊತೆಗೆ ಗುಲ್ಬುದ್ದೀನ್ ನೈಬ್‌ ಅವರಿಗೆ ಒಂದು ಡಿಮೆರಿಟ್ ಪಾಯಿಂಟ್ ಕೂಡ ನೀಡಿದೆ.

ICC fines Gulbadin Naib for breaching code of conduct against Zimbabwe

ಗುಲ್ಬದಿನ್ ಮಾಡಿದ್ದೇನು?

ಜಿಂಬಾಬ್ವೆ ವಿರುದ್ಧದ ಎರಡನೇ ಟಿ20 ಪಂದ್ಯದ 11ನೇ ಓವರ್‌ನಲ್ಲಿ ನಾಯಕ ರಶೀದ್ ಖಾನ್ ಅವರ ಬೌಲಿಂಗ್ ದಾಳಿಗೆ ಇಳಿದರು. ಈ ವೇಳೆ ತಶಿಂಗಾ ಮುಸೆಕಿವಾ ವಿರುದ್ಧ ಎಲ್‌ಬಿಡಬ್ಲ್ಯೂ ಮನವಿಯನ್ನು ಅಂಪೈರ್ ಬಳಿ ರಶೀದ್ ಖಾನ್ ಮಾಡಿದರು. ಆದರೆ ತಶಿಂಗಾ ಮುಸೆಕಿವಾ ಎಲ್‌ಬಿಡಬ್ಲ್ಯೂ ಆಗಿರಲಿಲ್ಲ. ಹೀಗಾಗಿ ಮನವಿಯನ್ನು ಅಂಪೈರ್ ತಿರಸ್ಕರಿಸಿದರು. ಈ ಸಂದರ್ಭದಲ್ಲಿ ಗುಲ್ಬದಿನ್ ನೈಬ್ ಅವರು ಅಣಕು ಪ್ರಾರ್ಥನೆಯಲ್ಲಿ ನಮಸ್ಕರಿಸುವ ಮೂಲಕ ತಮ್ಮ ಬೇಸರವನ್ನು ವ್ಯಕ್ತಪಡಿಸಿದರು. ಪಂದ್ಯದಲ್ಲಿ ಡಿಆರ್‌ಎಸ್ ಲಭ್ಯವಿಲ್ಲದಿದ್ದರೂ ಮರುಪರಿಶೀಲನೆಗೆ ವಿನಂತಿಸಿದರು. ಈ ಮೂಲಕ ಅವರು ಐಸಿಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದರು. ಪಂದ್ಯದ ಬಳಿಕ ಅವರು ತಾವು ಮಾಡಿದ ತಪ್ಪಿನ ಬಗ್ಗೆ ಒಪ್ಪಿಕೊಂಡಿದ್ದಾರೆ. ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ವಿಧಿಸಿದ ದಂಡವನ್ನು ಸ್ವೀಕರಿಸಿದ್ದಾರೆ. ಹೀಗಾಗಿ ಔಪಚಾರಿಕ ವಿಚಾರಣೆಯ ಅಗತ್ಯವಿಲ್ಲ ಎಂದು ಐಸಿಸಿ ತಿಳಿಸಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ದರ್ವಿಶ್ ರಸೌಲಿ 42 ಎಸೆತಗಳಲ್ಲಿ 6 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 58 ರನ್ ಮತ್ತು ಅಜ್ಮತುಲ್ಲಾ ಉಮರ್ಜಾಯ್ 23 ಎಸೆತಗಳಲ್ಲಿ 2 ಸಿಕ್ಸರ್ ಮೂಲಕ 28 ರನ್ ಗಳಿಸುವ ಮೂಲಕ ಉತ್ತಮ ಜೊತೆಯಾಟವಾಡಿದರು. ಹೀಗಾಗಿ ಅಫ್ಘಾನಿಸ್ತಾನ 6 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತು.

153 ರನ್‌ಗಳ ಗುರಿ ಬೆನ್ನತ್ತಿದ ಜಿಂಬಾಬ್ವೆ ನಾಯಕ ಸಿಕಂದರ್ ರಜಾ ಹಾಗು ಬ್ರಿಯಾನ್ ಬೆನೆಟ್ ತಂಡದ ಪರ ಉತ್ತಮ ಪ್ರದರ್ಶನ ನೀಡಿದರು. ಆದರೆ ಅಫ್ಘಾನಿಸ್ತಾನದ ಬೌಲಿಂಗ್ ದಾಳಿ ಮುಂದೆ ಜಿಂಬಾಬ್ವೆ ಮಂಕಾಯಿತು. ಪರಿಣಾಮ ಜಿಂಬಾಬ್ವೆಯನ್ನು ಇನ್ನೂ ಎರಡು ಓವರ್‌ಗಳು ಬಾಕಿ ಇರುವಂತೆಯೇ 103 ರನ್‌ಗಳಿಗೆ ಆಲೌಟಾಯಿತು. ಇದರೊಂದಿಗೆ ಅಫ್ಘಾನಿಸ್ತಾನ 50 ರನ್‌ಗಳಿಂದ ಜಯಗಳಿಸಿತು.

Story first published: Saturday, December 14, 2024, 22:55 [IST]
Other articles published on Dec 14, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+