Champions Trophy 2025: ಭಾರತದ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಕಿಸ್ತಾನಕ್ಕೆ ಐಸಿಸಿ ಬರೆ
ಭಾರತ ಹಾಗೂ ಪಾಕಿಸ್ತಾನ ತಂಡಗಳು ಭಾನುವಾರ ಮುಖಾಮುಖಿ ಆಗಲಿವೆ. ಚಾಂಪಿಯನ್ಸ್ ಟ್ರೋಫಿಯ "ಬಿ" ಗುಂಪಿನ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ. ಈ ಪಂದ್ಯಕ್ಕೂ ಮುನ್ನ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಪಾಕಿಸ್ತಾನ ತಂಡಕ್ಕೆ ಬರೆ ನೀಡಿದೆ. ಹಾಗಿದ್ದರೆ ಐಸಿಸಿ ಪಾಕ್ ತಂಡಕ್ಕೆ ಬರೆ ನೀಡಿದ್ದು ಏಕೆ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.
ಬುಧವಾರ ಕರಾಚಿಯ ಅಂಗಳದಲ್ಲಿ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳು ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾದವು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಅಮೋಘ ಪ್ರದರ್ಶನ ನೀಡಿ 60 ರನ್‌ಗಳಿಂದ ಪಂದ್ಯವನ್ನು ಗೆದ್ದಿತು. ಕರಾಚಿಯಲ್ಲಿ ನಡೆದ ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲಿ ನಿಧಾನಗತಿಯ ಓವರ್ ಎಸೆದಿದ್ದಕ್ಕಾಗಿ ದಂಡದ ಬರೆ ಹಾಕಲಾಗಿದೆ. ಪಾಕಿಸ್ತಾನ ತಂಡಕ್ಕೆ ಪಂದ್ಯ ಶುಲ್ಕದ ಶೇಕಡಾ ಐದು ರಷ್ಟು ದಂಡ ವಿಧಿಸಲಾಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಕರಾಚಿಯಲ್ಲಿ ಮೊದಲು ಬೌಲಿಂಗ್ ಮಾಡುವ ನಿರ್ಧಾರವನ್ನು ಮಾಡಿತು. ಈ ವೇಳೆ ನಿಗದಿತ ಸಮಯದೊಳಗೆ ಬೌಲಿಂಗ್ ಮಾಡುವಲ್ಲಿ ಪಾಕಿಸ್ತಾನ ತಂಡ ವಿಫಲವಾಯಿತು. ಹೀಗಾಗಿ ಐಸಿಸಿ ನಿಧಾನಗತಿಯ ಓವರ್ ದರಕ್ಕಾಗಿ ದಂಡ ವಿಧಿಸಲಾಗಿದೆ. ಈ ಪಂದ್ಯದ ಆನ್‌ಫೀಲ್ಡ್ ಅಂಪೈರ್, ಮೂರನೇ ಅಂಪೈರ್ ಪಾಕ್ ಮೇಲೆ ಆರೋಪವನ್ನು ಹೊರಿಸಿದರು. ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ದಂಡವನ್ನು ವಿಧಿಸಿದರು. ಪಾಕಿಸ್ತಾನ ನಾಯಕ ಮೊಹಮ್ಮದ್ ರಿಜ್ವಾನ್ ಅಪರಾಧವನ್ನು ಒಪ್ಪಿಕೊಂಡಿದ್ದರಿಂದ, ಯಾವುದೇ ಔಪಚಾರಿಕ ವಿಚಾರಣೆಯ ಅಗತ್ಯವಿರಲಿಲ್ಲ.
ಪಾಕಿಸ್ತಾನ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿ ಐಸಿಸಿ 2.22 ರ ರಂತೆ ತಪ್ಪು ಮಾಡಿದ್ದು ಸಾಬೀತಾಗಿದೆ. ತಂಡವು ನಿಗದಿತ ಸಮಯದಲ್ಲಿ ಬೌಲ್ ಮಾಡಲು ವಿಫಲವಾದ ಪ್ರತಿ ಓವರ್‌ಗೆ ಆಟಗಾರರಿಗೆ ಅವರ ಪಂದ್ಯ ಶುಲ್ಕದ ಶೇಕಡಾ ಐದು ರಷ್ಟು ದಂಡ ವಿಧಿಸಲಾಗುತ್ತದೆ.

ಫೆ.23ರಂದು ಮಹತ್ವದ ಪಂದ್ಯ
ಚಾಂಪಿಯನ್ಸ್ ಟ್ರೋಫಿಯ ಮುಂದಿನ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯ ಫೆಬ್ರವರಿ 23 ರಂದು ನಡೆಯಲಿದೆ. ಈ ಪಂದ್ಯ ಪಾಕಿಸ್ತಾನ ತಂಡಕ್ಕೆ ಮಾಡು ಇಲ್ಲವೇ ಮಡಿ ರೀತಿ ಇದ್ದು, ಈ ಪಂದ್ಯವನ್ನು ಗೆದ್ದಲ್ಲಿ ಮಾತ್ರ ಸೆಮಿಫೈನಲ್ ಆಸೆಯನ್ನು ಕಾಣಬಹುದಾಗಿದೆ. ಇಲ್ಲದೆ ಇದ್ದರೆ ಆತಿಥೇಯ ತಂಡ ಲೀಗ್ ಹಂತದಲ್ಲೇ ಟೂರ್ನಿಗೆ ಗುಡ್ ಬಾಯ್ ಹೇಳಲಿದೆ.
ಪಂದ್ಯದ ಫಲಿತಾಂಶ
ಕರಾಚಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 5 ವಿಕೆಟ್‌ಗೆ 320 ರನ್ ಸೇರಿಸಿತು. ಈ ವೇಳೆ ಟಾಮ್ ಲಾಥಮ್, ವಿಲ್ ಯಂಗ್ ಶತಕ ಬಾರಿಸಿ ತಂಡಕ್ಕೆ ಅಧಾರವಾದರು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಪಾಕ್ 47.2 ಓವರ್‌ಗಳಲ್ಲಿ 260 ರನ್‌ಗಳಿಗೆ ಸರ್ವಪತನ ಹೊಂದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications