ICC ODI Rankings: ನೂತನ ಏಕದಿನ ರ‍್ಯಾಕಿಂಗ್ ಬಿಡುಗಡೆ; ಟಾಪ್-5 ರಲ್ಲಿ ಮೂವರು ಭಾರತದ ಬ್ಯಾಟರ್ಸ್
ಆಗಸ್ಟ್ 14 ಬುಧವಾರ, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಹೊಸ ಏಕದಿನ ರ‍್ಯಾಂಕಿಂಗ್ ಬಿಡುಗಡೆ ಮಾಡಿದೆ. ಈ ರ‍್ಯಾಂಕಿಂಗ್ ಪಟ್ಟಿಯ ಟಾಪ್-5 ರಲ್ಲಿ ಮೂವರು ಭಾರತದ ಬ್ಯಾಟರ್ ಪ್ರಾಬಲ್ಯ ಸಾಧಿಸಿದ್ದಾರೆ.
ಐಸಿಸಿಯ ನೂತನ ರ‍್ಯಾಂಕಿಂಗ್ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರಿಗೆ ಸಂತಸ ತಂದಿದೆ. ರೋಹಿತ್ ಶರ್ಮಾ ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ ಒಂದು ಸ್ಥಾನ ಜಿಗಿದು ಎರಡನೇ ಸ್ಥಾನ ಪಡೆದಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅವರು ಅದ್ಭುತ ಪ್ರದರ್ಶನ ನೀಡಿದ್ದರು. ರೋಹಿತ್ ಈ ಸರಣಿಯಲ್ಲಿ ಎರಡು ಅರ್ಧ ಶತಕ ಸೇರಿದಂತೆ 52.33 ಸರಾಸರಿಯಲ್ಲಿ 157 ರನ್ ಗಳಿಸಿದರು.
ಮತ್ತೊಂದೆಡೆ ಭಾರತದ ಉಪನಾಯಕ ಶುಭಮನ್ ಗಿಲ್ ಒಂದು ಸ್ಥಾನ ಕುಸಿದು ಮೂರನೇ ಸ್ಥಾನಕ್ಕೆ ತಲುಪಿದ್ದು, ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಪಾಕಿಸ್ತಾನದ ಬಾಬರ್ ಅಜಮ್ 824 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದರೆ, ರೋಹಿತ್ 765 ಪಾಯಿಂಟ್‌ಗಳನ್ನು ಹೊಂದಿದ್ದಾರೆ.
ಇದಲ್ಲದೇ ಟಾಪ್-20ರೊಳಗೆ ಭಾರತದ ಬ್ಯಾಟರ್‌ಗಳ ಹೆಸರನ್ನು ನೋಡುವುದಾದರೆ, ಶ್ರೇಯಸ್ ಅಯ್ಯರ್ 16ನೇ ಸ್ಥಾನದಲ್ಲಿದ್ದರೆ, ಶ್ರೀಲಂಕಾ ವಿರುದ್ಧ ನಿರಾಶಾದಾಯಕ ಪ್ರದರ್ಶನ ನೀಡಿದ ಕೆಎಲ್ ರಾಹುಲ್ ಒಂದು ಸ್ಥಾನ ಕುಸಿದು 21ನೇ ಸ್ಥಾನ ತಲುಪಿದ್ದಾರೆ.
ಬೌಲರ್ ರ‍್ಯಾಂಕಿಂಗ್
ಐಸಿಸಿ ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ ಭಾರತ ಏಕೈಕ ಬೌಲರ್ ಟಾಪ್-5 ರಲ್ಲಿದ್ದಾರೆ. ಚೈನಾಮನ್ ಕುಲದೀಪ್ ಯಾದವ್ ಬೌಲಿಂಗ್ ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಇದಲ್ಲದೇ ದಕ್ಷಿಣ ಆಫ್ರಿಕಾದ ಕೇಶವ್ ಮಹಾರಾಜ್ ಮೊದಲ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯದ ವೇಗದ ಬೌಲರ್ ಜೋಶ್ ಹೇಜಲ್ ವುಡ್ ಎರಡನೇ ಸ್ಥಾನದಲ್ಲಿದ್ದು, ಲೆಗ್ ಸ್ಪಿನ್ನರ್ ಆಡಮ್ ಝಂಪಾ ಮೂರನೇ ಸ್ಥಾನ ಹೊಂದಿದ್ದಾರೆ.
ಟೀಮ್ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಎಂಟನೇ ಸ್ಥಾನವನ್ನು ಉಳಿಸಿಕೊಂಡರೆ, ಮೊಹಮ್ಮದ್ ಸಿರಾಜ್ ಕಳಪೆ ಪ್ರದರ್ಶನದ ನಂತರ ಐದು ಸ್ಥಾನಗಳನ್ನು ಕಳೆದುಕೊಂಡಿದ್ದು, ನ್ಯೂಜಿಲೆಂಡ್‌ನ ಟ್ರೆಂಟ್ ಬೌಲ್ಟ್ ಅವರೊಂದಿಗೆ ಜಂಟಿಯಾಗಿ ಒಂಬತ್ತನೇ ಸ್ಥಾನದಲ್ಲಿದ್ದಾರೆ. ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ 12ನೇ ಸ್ಥಾನದಲ್ಲಿದ್ದು, 2023ರ ಏಕದಿನ ವಿಶ್ವಕಪ್ ಬಳಿಕ ಅವರು ಹೊರಗುಳಿದಿದ್ದಾರೆ.
ಆಲ್‌ರೌಂಡರ್ ರ‍್ಯಾಂಕಿಂಗ್
ಐಸಿಸಿ ಬಿಡುಗಡೆ ಮಾಡಿರುವ ನೂತನ ಏಕದಿನ ಆಲ್‌ರೌಂಡರ್ ರ‍್ಯಾಂಕಿಂಗ್‌ನಲ್ಲಿ ಒಬ್ಬನೇ ಒಬ್ಬ ಭಾರತದ ಆಟಗಾರನಿಲ್ಲ. ರವೀಂದ್ರ ಜಡೇಜಾ ಅವರು 16ನೇ ಸ್ಥಾನದ್ದಲಿದ್ದರೆ, ಹಾರ್ದಿಕ್ ಪಾಂಡ್ಯ ನಾಲ್ಕು ಸ್ಥಾನ ಕುಸಿದು 26ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಟೀಮ್ ಇಂಡಿಯಾ 118 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ 116 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ನಂತರದ ಸ್ಥಾನದಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications