ಟಿ20 ವಿಶ್ವಕಪ್ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಿದ ಐಸಿಸಿ: ಸೆಮಿಫೈನಲ್‌ಗೂ ಮುನ್ನ ದೊಡ್ಡ ನಿರ್ಧಾರ!

ಟಿ20 ವಿಶ್ವಕಪ್ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಸೂಪರ್ 12 ಹಂತದ ಕೆಲವೇ ಪಂದ್ಯಗಳು ಮಾತ್ರ ಬಾಕಿಯಿದ್ದು ಸೆಮಿಫೈನಲ್‌ಗೆ ದಿನಗಣನೆ ಆರಂಭವಾಗಿದೆ. ಇನ್ನು ತಂಡಗಳ ಸೆಮಿಫೈನಲ್ ಹಂತಕ್ಕೇರುವ ಲೆಕ್ಕಾಚಾರ ಜೋರಾಗಿ ನಡೆಯುತ್ತಿದ್ದು ಯಾವ ನಾಲ್ಕು ತಂಡಗಳು ಸೆಮಿಫೈನಲ್‌ಗೆ ಪ್ರವೇಶ ಪಡೆದು ಸೆಣೆಸಾಟ ನಡೆಸಲಿದೆ ಎಂಬುದು ಕುತೂಹಲ ಮೂಡಿಸಿದೆ. ಈ ಸಂದರ್ಭ ಐಸಿಸಿ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳಿಗೆ ಅನ್ವಯವಾಗುವಂತಾ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು ಈಗ ಇರುವ ನಿಯಮದಲ್ಲಿ ಪ್ರಮುಖ ಬದಲಾವಣೆಯನ್ನು ಮಾಡಿದೆ.
ಆಸ್ಟ್ರೇಲಿಯಾದಲ್ಲಿ ಈ ಬಾರಿಯ ವಿಶ್ವಕಪ್ ನಡೆಯುತ್ತಿರುವ ಸಂದರ್ಭದಲ್ಲಿ ಕ್ರಿಕೆಟ್ ಆಟಗಾರರಿಗೆ ಹಾಗೂ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದು ಮಳೆ. ಈ ಟೂರ್ನಿಯಲ್ಲಿ ಹಲವು ಪಂದ್ಯಗಳು ಮಳೆಯಿಂದಾಗಿ ರದ್ದಾಗಿದ್ದು ಕೆಲ ಪಂದ್ಯಗಳು ಡಕ್ವರ್ತ್ ಲೂಯಿಸ್ ನಿಯಮದಲ್ಲಿ ಫಲಿತಾಂಶವನ್ನು ಪಡೆದುಕೊಂಡಿದೆ. ಈಗ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳಿಗೆಮಳೆ ಅಡ್ಡಿಯಾದಲ್ಲಿ ಫಲಿತಾಂಶ ಕಂಡುಕೊಳ್ಳುವ ನಿಟ್ಟಿಲ್ಲಿ ಐಸಿಸಿ ಈ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ.

ಫಲಿತಾಂಶ ಪಡೆಯಲು ಕನಿಷ್ಠ 10 ಓವರ್‌ಗಳು
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಸದ್ಯ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳಲ್ಲಿ ಮಳೆಯಿಂದ ಅಡ್ಡಿಯಾಗುವ ಪಂದ್ಯದಲ್ಲಿ ಫಲಿತಾಂಶವನ್ನು ಪಡೆಯುವ ನಿಯಮದಲ್ಲಿ ಬದಲಾವಣೆ ಮಾಡಿಕೊಂಡಿದೆ. ಮಳೆಯಿಂದಾಗಿ ಪಂದ್ಯಕ್ಕೆ ಅಡ್ಡಿಯುಂಟಾದಾಗ ಫಲಿತಾಂಶವನ್ನು ಪಡೆಯಬೇಕಾದರೆ ಎರಡು ತಂಡಗಳು ಕೂಡ ಕನಿಷ್ಠ 10 ಓವರ್‌ಗಳನ್ನು ಪೂರೈಸಿರಬೇಕು ಎಂದು ನಿಯಮದಲ್ಲಿ ಬದಲಾವಣೆ ಮಾಡಿಕೊಂಡಿದೆ. ಲೀಗ್ ಹಂತದಲ್ಲಿ ಎರಡು ತಂಡಗಳು ಕನಿಷ್ಠ 5 ಓವರ್‌ಗಳನ್ನು ಪೂರೈಸಿದ್ದರೆ ಫಲಿತಾಂಶ ಪಡೆಯುವ ಅವಕಾಶವಿತ್ತು.

ಫಲಿತಾಂಶಕ್ಕಾಗಿ ಮೀಸಲು ದಿನ
ಹೊಸ ನಿಯಮದ ಪ್ರಕಾರ ಸೆಮಿಫೈನಲ್ ಅಥವಾ ಫೈನಲ್ ಪಂದ್ಯದಲ್ಲಿ ಮಳೆ ಬಂದು ಎರಡು ತಂಡಗಳು ಕನಿಷ್ಠ 10 ಓವರ್‌ಗಳ ಆಟವನ್ನು ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ ಫಲಿತಾಂಶ ಹೊರಬೀಳುವುದಿಲ್ಲ. ಆಸ್ಟ್ರೇಲಿಯಾದಲ್ಲಿ ಪ್ರಸಕ್ತ ಋತುವಿನಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳಿಗೆ ಮೀಸಲು ದಿನಗಳನ್ನು ನೀಡಲಾಗಿದೆ. ಈ ಮೂಲಕ ಫಲಿತಾಂಶಗಳನ್ನು ಪಡೆಯುವ ಅವಕಾಶ ನೀಡಲಾಗಿದೆ.
ICC Player Of The Month Award : ಮೊದಲ ಬಾರಿಗೆ ವಿರಾಟ್ ಕೊಹ್ಲಿ ನಾಮನಿರ್ದೇಶನ

ಸೆಮಿಫೈನಲ್‌ಗೇರಲು ತೀವ್ರ ಪೈಪೋಟಿ
ಸೂಪರ್ 12 ಹಂತದ ಪಂದ್ಯಗಳು ಅಂತಿಮ ಹಂತಕ್ಕೆ ಬಂದಿದ್ದರೂ ಯಾವೆಲ್ಲಾ ತಂಡಗಳು ಸೆಮಿಫೈನಲ್ ಹಂತಕ್ಕೇರಲಿದೆ ಎಂಬುದು ಇನ್ನು ಕೂಡ ಖಚಿತವಾಗಿಲ್ಲ. ಬಹುತೇಕ ತಂಡಗಳು ಸೆಮಿಫೈನಲ್ ಹಂತಕ್ಕೇರುವ ಆಶಾಭಾವನೆಯನ್ನು ಹೊಂದಿದ್ದು ಮುಂದಿನ ಪಂದ್ಯಗಳ ಫಲಿತಾಂಶಗಳ ಮೇಲೆ ಕಣ್ಣಿಟ್ಟಿದೆ. ಶುಕ್ರವಾರದ ಪಂದ್ಯಗಳು ಮುಕ್ತಾಯವಾದ ಸಂದರ್ಭದಲ್ಲಿ ಕೇವಲ ಒಂದು ತಂಡ ಮಾತ್ರವೇ ಸೆಮಿಫೈನಲ್‌ಗೆ ಟಿಕೆಟ್ ಖಚಿತಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಶನಿವಾರ ನಡೆಯಲಿರುವ ಶ್ರೀಲಂಕಾ ಹಾಗೂ ಇಂಗ್ಲೆಂಡ್ ವಿರುದ್ಧದ ಪಂದ್ಯ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳ ಸೆಮಿಫೈನಲ್ ಭವಿಷ್ಯವನ್ನು ನಿರ್ಧರಿಸಲಿದೆ.

ಭಾರತ, ದ. ಆಪ್ರಿಕಾ, ಪಾಕ್ ಮಧ್ಯೆ ಪೈಪೋಟಿ
ಇನ್ನು ಎರಡನೇ ಗುಂಪಿನಲ್ಲಿ ಮೂರು ತಂಡಗಳ ಮಧ್ಯೆ ಸೆಮಿಫೈನಲ್ ಪ್ರವೇಶಕ್ಕೆ ನೇರ ಪೈಪೋಟಿಯಿದೆ. ಅಂಕಪಟ್ಟಿಯಲ್ಲಿ ಭಾರತ ಅಗ್ರಸ್ಥಾನದಲ್ಲಿದ್ದರೆ ದಕ್ಷಿಣ ಆಫ್ರಿಕಾ ಎರಡನೇ ಹಾಗೂ ಪಾಕಿಸ್ತಾನ ತಂಡ ಮೂರನೇ ಸ್ಥಾನದಲ್ಲಿದ್ದು ಭಾನುವಾರ ನಡೆಯುವ ಪಂದ್ಯದಲ್ಲಿ ಯಾವ ಎರಡು ತಂಡಗಳು ಸೆಮಿಫೈನಲ್‌ಗೆ ಪ್ರವೇಶ ಪಡೆಯಲಿದೆ. ಭಾರತ ತಂಡ ಅಂತಿಮ ಪಂದ್ಯವನ್ನು ಜಿಂಬಾಬ್ವೆ ತಂಡದ ವಿರುದ್ಧ ಆಡಲಿದ್ದು ಗೆಲುವು ಸಾಧಿಸಿದರೆ ಸುಲಭವಾಗಿ ಸೆಮಿಫೈನಲ್‌ಗೆ ಪ್ರವೇಶ ಪಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications