ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ICC T20I Team of 2022 : ಕೊಹ್ಲಿ, ಸೂರ್ಯ, ಪಾಂಡ್ಯಗೆ ಸ್ಥಾನ: ಉಳಿದಂತೆ ಸ್ಥಾನ ಪಡೆದ ಆಟಗಾರರು

ICC Mens T20I Team Of The Year 2022: Virat Kohli, Suryakumar And Hardik Are Included in The Team

ಐಸಿಸಿ ವರ್ಷದ ಪುರುಷರ ಟಿ20 ತಂಡವನ್ನು ಪ್ರಕಟಿಸಲಾಗಿದ್ದು, ಭಾರತದ ಸ್ಟಾರ್ ಆಟಗಾರರಿಗೆ ಸ್ಥಾನ ಸಿಕ್ಕಿದೆ. ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಉಳಿದಂತೆ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್, ಹ್ಯಾರಿಸ್ ರೌಫ್, ಇಂಗ್ಲೆಂಡ್‌ನ ಜೋಸ್ ಬಟ್ಲರ್, ಸ್ಯಾಮ್ ಕರನ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಶ್ರೀಲಂಕಾ ವನಿಂದು ಹಸರಂಗ, ನ್ಯೂಜಿಲೆಂಡ್‌ನ ಗ್ಲೆನ್‌ ಫಿಲಿಪ್ಸ್, ಐರ್ಲೆಂಡ್‌ನ ಜೋಶ್ ಲಿಟಲ್, ಜಿಂಬಾಬ್ವೆಯ ಸಿಕಂದರ್ ರಾಜಾಗೆ ಕೂಡ ತಂಡದಲ್ಲಿ ಸ್ಥಾನ ಸಿಕ್ಕಿದೆ.

ಐಸಿಸಿ ವರ್ಷದ ಮಹಿಳಾ ಟಿ20 ತಂಡದಲ್ಲಿ ನಾಲ್ವರು ಭಾರತೀಯರು: ದಾಖಲೆ ಬರೆದ ಸ್ಮೃತಿ ಮಂದಾನಐಸಿಸಿ ವರ್ಷದ ಮಹಿಳಾ ಟಿ20 ತಂಡದಲ್ಲಿ ನಾಲ್ವರು ಭಾರತೀಯರು: ದಾಖಲೆ ಬರೆದ ಸ್ಮೃತಿ ಮಂದಾನ

2022ರಲ್ಲಿ ಏಷ್ಯಾಕಪ್‌ಗೆ ಮುನ್ನ ಟಿ20 ತಂಡದಲ್ಲಿ ವಿರಾಟ್ ಕೊಹ್ಲಿಗೆ ಸ್ಥಾನ ಕೊಡಬಾರದು ಎಂದು ಹಲವರು ಟೀಕಿಸಿದ್ದರು. ಅದೆಲ್ಲವವನ್ನು ಮೆಟ್ಟಿನಿಂತ ಕೊಹ್ಲಿ ತಮ್ಮ ಬ್ಯಾಟ್‌ನಿಂದಲೇ ಉತ್ತರ ಕೊಟ್ಟಿದ್ದರು. ಅವರ ಕಿರೀಟಕ್ಕೆ ಮತ್ತೊಂದು ಗರಿಯಂತೆ ಐಸಿಸಿ ವರ್ಷದ ಟಿ20 ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

2022ರಲ್ಲಿ ಈ ಆಟಗಾರರು ನೀಡಿದ ಉತ್ತಮ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ. ಟಿ20 ಮಾದರಿಯಲ್ಲಿ ನಂಬರ್ 1 ಬ್ಯಾಟರ್ ಸೂರ್ಯಕುಮಾರ್ ಯಾದವ್ ಮತ್ತು ಸದ್ಯ ಭಾರತ ಟಿ20 ತಂಡದ ನಾಯಕನಾಗಿರುವ ಹಾರ್ದಿಕ್ ಪಾಂಡ್ಯ ಕೂಡ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಐಸಿಸಿ ವರ್ಷದ ಮಹಿಳಾ ಟಿ20 ತಂಡದಲ್ಲಿ ನಾಲ್ವರು ಭಾರತೀಯರು ಸ್ಥಾನ ಪಡೆದಿದ್ದರೆ, ಪುರುಷ ಟಿ20 ತಂಡದಲ್ಲಿ ಮೂವರು ಸ್ಥಾನ ಪಡೆದುಕೊಂಡಿದ್ದಾರೆ.

 ಭಾರತದ ಮೂವರಿಗೆ ಸ್ಥಾನ

ಭಾರತದ ಮೂವರಿಗೆ ಸ್ಥಾನ

2022ರಲ್ಲಿ ಭಾರತ ಟಿ20 ತಂಡದಲ್ಲಿ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಸೂರ್ಯಕುಮಾರ್ ಯಾದವ್ ತಮ್ಮ ಅಮೋಘ ಆಟದಿಂದ ಐಸಿಸಿ ಟಿ20 ರ್‍ಯಾಂಕಿಂಗ್‌ನಲ್ಲಿ ನಂಬರ್ 1 ಸ್ಥಾನಕ್ಕೇರಿದ್ದಾರೆ.

2022ರ ಏಷ್ಯಾಕಪ್‌ಗೆ ಮುನ್ನ ವಿರಾಟ್ ಕೊಹ್ಲಿ ಬಗ್ಗೆ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಅವರಿಗೆ ತಂಡದಲ್ಲಿ ಸ್ಥಾನ ಕೊಡಬೇಡಿ ಎಂದು ಹಲವರು ಅಭಿಪ್ರಾಯಪಟ್ಟಿದ್ದರು. ಆದರೆ, 2022ರ ಏಷ್ಯಾಕಪ್‌ನಲ್ಲಿ ಹೆಚ್ಚು ರನ್‌ ಗಳಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದರು. 5 ಪಂದ್ಯಗಳಲ್ಲಿ ಅವರು 276 ರನ್ ಗಳಿಸಿದ್ದರು. ಅಫ್ಘಾನಿಸ್ತಾನದ ವಿರುದ್ಧ ಶತಕ ಕೂಡ ಬಾರಿಸಿದ್ದರು.

ನಂತರ ಟಿ20 ವಿಶ್ವಕಪ್‌ನಲ್ಲಿ296 ರನ್ ಗಳಿಸಿ, ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದರು. ಪಾಕಿಸ್ತಾನದ ವಿರುದ್ಧ ಗಳಿಸಿದ ಅಜೇಯ 82 ರನ್ ಜೀವನದಲ್ಲೇ ಮರೆಯಲಾಗದ ಇನ್ನಿಂಗ್ಸ್.

ಸೂರ್ಯಕುಮಾರ್ ಯಾದವ್ 2022ರಲ್ಲಿ ಅತ್ಯುತ್ತಮ ದಾಖಲೆ ಹೊಂದಿದ್ದಾರೆ. ಒಂದು ವರ್ಷದಲ್ಲಿ ಟಿ20 ಮಾದರಿಯಲ್ಲಿ 1000 ರನ್ ಗಳಿಸಿದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. 2 ಶತಕ, 9 ಅರ್ಧಶತಕ ಸಹಿತ 187.43 ಸ್ಟ್ರೈಕ್‌ರೇಟ್‌ನಲ್ಲಿ 1164 ರನ್ ಗಳಿಸಿದ್ದಾರೆ.

2022ರಲ್ಲಿ ಹಾರ್ದಿಕ್ ಪಾಂಡ್ಯ ಭಾರತದ ಪ್ರಮುಖ ಆಲ್‌ರೌಂಡರ್ ಆಗಿ ಗುರುತಿಸಿಕೊಂಡರು. 607 ರನ್ ಕಲೆಹಾಕಿದ ಅವರು 20 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಅಮೂಲ್ಯ ಕೊಡುಗೆ ನೀಡಿದ್ದಾರೆ.

 ಇಂಗ್ಲೆಂಡ್‌ನ ಜೋಸ್ ಬಟ್ಲರ್ ನಾಯಕ

ಇಂಗ್ಲೆಂಡ್‌ನ ಜೋಸ್ ಬಟ್ಲರ್ ನಾಯಕ

2022ರ ಟಿ20 ವಿಶ್ವಕಪ್ ವಿಜೇತ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಅವರಿಗೆ ಐಸಿಸಿ ವರ್ಷದ ಟಿ20 ತಂಡಕ್ಕೆ ನಾಯಕತ್ವ ನೀಡಲಾಗಿದೆ. 2022ರಲ್ಲಿ 15 ಟಿ20 ಪಂದ್ಯಗಳನ್ನಾಡಿರುವ ಅವರು 160.41 ಸ್ಟ್ರೈಕ್‌ರೇಟ್‌ನಲ್ಲಿ 462 ರನ್ ಗಳಿಸಿದ್ದಾರೆ. 2022ರಲ್ಲಿ ತಮ್ಮ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ಅವರು, ಟಿ20 ವಿಶ್ವಕಪ್ ಗೆಲ್ಲುವಲ್ಲಿ ಯಶಸ್ವಿಯಾದರು.

ಇಂಗ್ಲೆಂಡ್‌ನ ಮತ್ತೊಬ್ಬ ಆಟಗಾರ ಸ್ಯಾಮ್ ಕರನ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಟಿ20 ವಿಶ್ವಕಪ್ ಟೂರ್ನಿಯ ಆಟಗಾರ ಪ್ರಶಸ್ತಿ ಮತ್ತು ಫೈನಲ್‌ ಪಂದ್ಯದ ಆಟಗಾರ ಪ್ರಶಸ್ತಿ ಪಡೆದ ಕರನ್ ಇಂಗ್ಲೆಂಡ್ ಗೆಲುವಿನಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು. ವಿಶ್ವಕಪ್‌ನಲ್ಲಿ 6 ಪಂದ್ಯಗಳಲ್ಲಿ 13 ವಿಕೆಟ್ ಪಡೆದರು.

 ಪಾಕ್‌ನ ಇಬ್ಬರಿಗೆ ಸ್ಥಾನ

ಪಾಕ್‌ನ ಇಬ್ಬರಿಗೆ ಸ್ಥಾನ

ಪಾಕಿಸ್ತಾನದ ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ ತಮ್ಮ ಸ್ಥಿರ ಪ್ರದರ್ಶನದಿಂದ 2022ರಲ್ಲಿ ಟಿ20 ಮಾದರಿಯಲ್ಲಿ 996 ರನ್ ಗಳಿಸುವ ಮೂಲಕ, ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡರು. 2022ರಲ್ಲಿ ಅವರು 10 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ಪಾಕಿಸ್ತಾನದ ವೇಗದ ಬೌಲರ್ ಹ್ಯಾರಿಸ್ ರೌಫ್ ಕೂಡ 2022ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. 2022ರಲ್ಲಿ ಅವರು ಟಿ20 ಮಾದರಿಯಲ್ಲಿ 31 ವಿಕೆಟ್ ಪಡೆದಿದ್ದಾರೆ. ಏಷ್ಯಾಕಪ್‌ನಲ್ಲಿ 8 ವಿಕೆಟ್ ಪಡೆದು ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರು.

 ಇತರೆ ಆಟಗಾರರ ಮಾಹಿತಿ

ಇತರೆ ಆಟಗಾರರ ಮಾಹಿತಿ

ನ್ಯೂಜಿಲೆಂಡ್‌ನ ಸ್ಫೋಟಕ ಬ್ಯಾಟರ್ ಗ್ಲೆನ್ ಫಿಲಿಪ್ಸ್ 2022ರಲ್ಲಿ 21 ಟಿ20 ಪಂದ್ಯಗಳನ್ನಾಡಿದ್ದು, 156.33 ಸ್ಟ್ರೈಕ್‌ರೇಟ್‌ನಲ್ಲಿ 716 ರನ್ ಗಳಿಸಿ ಮಿಂಚಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಅವರು 201 ರನ್ ಗಳಿಸಿದ್ದರು.

ಜಿಂಬಾಬ್ವೆಯ ಸಿಕಂದರ್ ರಜಾ ಕೂಡ ಐಸಿಸಿ ಟಿ20 ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. 2022ರಲ್ಲಿ ಅವರು 735 ರನ್ ಗಳಿಸಿದ್ದು, 6.13 ಎಕಾನಮಿಯಲ್ಲಿ ಬೌಲಿಂಗ್ ಮಾಡಿ 25 ವಿಕೆಟ್ ಪಡೆದುಕೊಂಡಿದ್ದಾರೆ.

ಶ್ರೀಲಂಕಾದ ಸ್ಪಿನ್ನರ್ ವನಿಂದು ಹಸರಂಗ 2022ರಲ್ಲಿ ಮಿಂಚಿದ ಸ್ಪಿನ್ನರ್ ಆಗಿದ್ದಾರೆ. ಏಷ್ಯಾಕಪ್‌ನಲ್ಲಿ ಶ್ರೀಲಂಕಾ ಚಾಂಪಿಯನ್ ಆಗಲು ವನಿಂದು ಮಹತ್ವದ ಪಾತ್ರ ನಿರ್ವಹಿಸಿದ್ದರು. ಟಿ20 ವಿಶ್ವಕಪ್‌ನಲ್ಲಿ ಕೂಡ ಅವರು 15 ವಿಕೆಟ್ ಪಡೆದುಕೊಂಡಿದ್ದರು.

ಐರ್ಲೆಂಡ್‌ನ ವೇಗಿ ಜೋಶ್ ಲಿಟಲ್ ತಮ್ಮ ಅತ್ಯುತ್ತಮ ಪ್ರದರ್ಶನದಿಂದ ಗಮನ ಸೆಳೆದಿದ್ದಾರೆ. 2022ರಲ್ಲಿ ಅವರು ಟಿ20 ಮಾದರಿಯಲ್ಲಿ 39 ವಿಕೆಟ್ ಪಡೆದು ಮಿಂಚಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ 11 ವಿಕೆಟ್ ಪಡೆದಿದ್ದಾರೆ.

Story first published: Monday, January 23, 2023, 17:16 [IST]
Other articles published on Jan 23, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X