Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ICC Men's T20 World Cup: ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ಕೆ

ಅಹಮದಾಬಾದ್‌: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಸೂಪರ್ 8 ಹಂತದ ಬಿಗ್ ಫೈಟ್‌ ಭಾನುವಾರ ನಡೆಯಲಿದೆ. ಟಿ20 ವಿಶ್ವಕಪ್‌ನ ಲೀಗ್‌ ಹಂತದಲ್ಲಿ ಎರಡೂ ತಂಡಗಳು ಭರ್ಜರಿ ಪ್ರದರ್ಶನ ನೀಡಿ ಆಡಿದ ನಾಲ್ಕೂ ಪಂದ್ಯಗಳಲ್ಲಿ ಜಯ ಸಾಧಿಸಿವೆ. ಈ ಮೆಗಾ ಟೂರ್ನಿಯಲ್ಲಿ ಅಜೇಯ ಓಟವನ್ನು ಮುಂದುವರಿಸುವುದು ಯಾರು? ಎಂಬ ಪ್ರಶ್ನೆ ಉದ್ಭವಿಸಿದೆ. ಇದಕ್ಕಾಗಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಕಾದಾಟ ನಡೆಸಲಿದ್ದು, ಮಹತ್ವದ ಪಂದ್ಯದಲ್ಲಿ ಟಾಸ್‌ ದಕ್ಷಿಣ ಆಫ್ರಿಕಾ ತಂಡದ ಪಾಲಾಗಿದ್ದು, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮಹತ್ವದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಪಡೆ ಯಾವ ತಂತ್ರದೊಂದಿಗೆ ಕಣಕ್ಕೆ ಇಳಿಯುತ್ತದೆ ಎಂಬ ಬಗ್ಗೆ ಉತ್ತರ ಸಹ ಸಿಕ್ಕಿದೆ. ಸೂರ್ಯ ತನ್ನ ಭರವಸೆಯ ಬ್ಯಾಟರ್‌ಗಳನ್ನು ಬ್ಯಾಕ್ ಮಾಡಿಕೊಂಡಿದ್ದು, ಸೂಪರ್ 8 ಹಂತದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರವಸೆಯ ಆಟಗಾರರನ್ನು ಬೆಂಬಲಿಸಿದೆ. ಇನ್ನು ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಅಂಕಿ ಅಂಶಗಳು ಉತ್ತಮವಾಗಿವೆ. ಭಾರತ ಆಡಿದ 7 ಪಂದ್ಯಗಳಲ್ಲಿ 5ರಲ್ಲಿ ಜಯ ಸಾಧಿಸಿದೆ.

ICC Men s T20 World Cup

ಅಭಿಷೇಕ್‌ಗೆ ಅವಕಾಶ

ಸೂಪರ್ 8 ಹಂತದ ಪಂದ್ಯದಲ್ಲಿ ಜಯ ಸಾಧಿಸಿ ಮುಂದಿನ ಹಂತಕ್ಕೆ ಒಂದು ಕಾಲನ್ನು ಇಡುವ ಯೋಜನೆ ಭಾರತ ತಂಡದ್ದಾಗಿದೆ. ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್‌ ಭರವಸೆಯ ಆಟಗಾರ ಅಭಿಷೇಕ್ ಶರ್ಮಾ ಅವರನ್ನು ಬ್ಯಾಕ್ ಮಾಡಿದ್ದಾರೆ. ಇವರು ಈ ಟೂರ್ನಿಯಲ್ಲಿ ಸತತ ಸೊನ್ನೆ ಸುತ್ತಿದರೂ ಸಹ ಇವರ ಮೇಲೆ ತಂಡ ವಿಶ್ವಾಸ ಇಟ್ಟಿದೆ. ಇವರನ್ನು ಕೈ ಬಿಟ್ಟು ಇನ್ನೊಬ್ಬ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್‌ ಅವರಿಗೆ ಅವಕಾಶ ನೀಡಬಹುದು ಎಂಬ ಮಾತುಗಳು ಇದ್ದವು. ಆದರೆ ಈ ಎಲ್ಲ ಪ್ರಶ್ನೆಗಳಿಗೆ ತೆರೆ ಬಿದ್ದಿದೆ.

ಟೀಮ್ ಇಂಡಿಯಾದ ಉಪನಾಯಕ ಅಕ್ಷರ್ ಪಟೇಲ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ವಾಷಿಂಗ್ಟನ್‌ ಸುಂದರ್‌ ಅವರಿಗೆ ಅವಕಾಶ ನೀಡಲಾಗಿದೆ. ಮಹತ್ವದ ಪಂದ್ಯಕ್ಕಾಗಿ ಎರಡೂ ತಂಡಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ದಕ್ಷಿಣ ಆಫ್ರಿಕಾ ಕೂಡ ಅನುಭವಿ ಆಟಗಾರರಿಗೆ ಮಣೆ ಹಾಕಿದೆ. ಏಡನ್ ಮಾರ್ಕ್ರಾಮ್‌ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ಭಾರತ ತಂಡ: ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್‌ ಸುಂದರ್, ಅರ್ಶ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.

ದಕ್ಷಿಣ ಆಫ್ರಿಕಾ ತಂಡ: ಏಡನ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಯಾನ್ ರಿಕೆಲ್ಟನ್, ಡೆವಾಲ್ಡ್ ಬ್ರೆವಿಸ್, ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ.

Story first published: Sunday, February 22, 2026, 18:37 [IST]
Other articles published on Feb 22, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+