For Quick Alerts
ALLOW NOTIFICATIONS  
For Daily Alerts
 

ICC ODI Rank: ಶ್ರೇಯಸ್‌ ಅಯ್ಯರ್‌, ರಾಹುಲ್‌ಗೆ ಖುಷಿ: ಟಾಪ್‌ 10 ಬೌಲರ್‌ಗಳಲ್ಲಿ ಮೂವರು ಭಾರತೀಯರು

ಐಸಿಸಿ ಹೊಸ ಏಕದಿನ ಬ್ಯಾಟಿಂಗ್ ಶ್ರೇಯಾಂಕವನ್ನು ಬಿಡುಗಡೆ ಮಾಡಿದೆ. ಭಾರತ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಗಳಾದ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಇದರ ಲಾಭ ಪಡೆದಿದ್ದಾರೆ.

ಏಕದಿನ ವಿಶ್ವಕಪ್ 2023 ರ ನಂತರ, ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಿತು. ಈ ಸರಣಿಯಲ್ಲಿ ಟೀಂ ಇಂಡಿಯಾದ ನಾಯಕ ಕೆಎಲ್ ರಾಹುಲ್. ಟೀಂ ಇಂಡಿಯಾ 2-1 ಅಂತರದಲ್ಲಿ ಸರಣಿ ಗೆದ್ದಿತ್ತು. ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಆಡಿದ್ದರು. ಶ್ರೇಯಸ್ 52 ರನ್ ಗಳ ಇನ್ನಿಂಗ್ಸ್ ಆಡಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಐಸಿಸಿ ಶ್ರೇಯಾಂಕದಲ್ಲಿ ಅವರು ಇದರ ಲಾಭ ಪಡೆದಿದ್ದಾರೆ.

ICC ODI Rank: Shreyas Iyer, Rahul happy: Three Indians in top 10 bowlers

ಶ್ರೇಯಸ್ ಅಯ್ಯರ್ ಐಸಿಸಿ ಏಕದಿನ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಒಂದು ಸ್ಥಾನವನ್ನು ಜಿಗಿತ ಕಂಡಿದ್ದಾರೆ. ಮತ್ತು 11 ನೇ ಸ್ಥಾನಕ್ಕೆ ತಲುಪಿದ್ದಾರೆ. ಅವರು 689 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ. ಇದೇ ವೇಳೆಗೆ ಕೆಎಲ್ ರಾಹುಲ್ ಕೂಡ ಒಂದು ಸ್ಥಾನ ಮೇಲೇರಿ 16ನೇ ಸ್ಥಾನಕ್ಕೆ ತಲುಪಿದ್ದಾರೆ. ಅವರು 666 ರೇಟಿಂಗ್ ಅಂಕಗಳನ್ನು ತಮ್ಮ ಬುಟ್ಟಿಗೆ ಹಾಕಿಕೊಂಡಿದ್ದಾರೆ.

ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಭಾರತ ಏಕದಿನ ತಂಡದಲ್ಲಿ ಬ್ಯಾಟಿಂಗ್‌ನ ಪ್ರಮುಖ ಆಧಾರ ಸ್ತಂಭಗಳು. ಈ ಇಬ್ಬರೂ ಆಟಗಾರರು ಸ್ವಂತ ಬಲದಿಂದ ಭಾರತ ತಂಡಕ್ಕೆ ಹಲವು ಪಂದ್ಯಗಳನ್ನು ಗೆದ್ದುಕೊಟ್ಟಿದ್ದಾರೆ. ಈ ಆಟಗಾರರು 2023ರ ಏಕದಿನ ವಿಶ್ವಕಪ್‌ನಲ್ಲೂ ಪ್ರಬಲ ಪ್ರದರ್ಶನ ನೀಡಿದ್ದರು.

ICC ODI Rank: Shreyas Iyer, Rahul happy: Three Indians in top 10 bowlers

ಉಭಯ ಆಟಗಾರರ ವೃತ್ತಿಜೀವನ

ಶ್ರೇಯಸ್ ಅಯ್ಯರ್ 2017 ರಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದರು. ಇದರ ನಂತರ, ಅವರು ಭಾರತ ತಂಡಕ್ಕಾಗಿ 59 ಏಕದಿನ ಪಂದ್ಯಗಳಲ್ಲಿ 2383 ರನ್ ಗಳಿಸಿದ್ದಾರೆ. ಇದರಲ್ಲಿ ಐದು ಶತಕಗಳು ಸೇರಿವೆ. ಮತ್ತೊಂದೆಡೆ, ಕೆಎಲ್ ರಾಹುಲ್ 2016 ರಲ್ಲಿ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದರು. ಅವರು 75 ಏಕದಿನ ಪಂದ್ಯಗಳಲ್ಲಿ 2820 ರನ್ ಗಳಿಸಿದ್ದಾರೆ, ಇದರಲ್ಲಿ 7 ಶತಕಗಳು ಸೇರಿವೆ.

ಐಸಿಸಿ ಏಕದಿನ ಬ್ಯಾಟ್ಸ್‌ಮನ್ ಶ್ರೇಯಾಂಕದಲ್ಲಿ ಬಾಬರ್ ಅಜಮ್ ಮೊದಲ ಸ್ಥಾನದಲ್ಲಿದ್ದಾರೆ. ಅವರು ಮೊದಲ ಸ್ಥಾನವನ್ನು ಉಳಿಸಿಕೊಳ್ಲುವಲ್ಲಿ ಸಫಲರಾಗಿದ್ದಾರೆ. ಪಾಕಿಸ್ತಾನದ ಸ್ಟಾರ್ ಬ್ಯಾಟ್ಸ್‌ಮನ್ ಬಾಬರ್ 824 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ. ಭರವಸೆಯ ಬ್ಯಾಟರ್‌ ಶುಭ್‌ಮನ್ ಗಿಲ್ ಎರಡನೇ ಸ್ಥಾನದಲ್ಲಿದ್ದಾರೆ. ಅವರು 801 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ.

ICC ODI Rank: Shreyas Iyer, Rahul happy: Three Indians in top 10 bowlers

ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರು 768 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ. ರೋಹಿತ್ ಶರ್ಮಾ 746 ರೇಟಿಂಗ್ ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಐಸಿಸಿ ಬ್ಯಾಟಿಂಗ್ ಏಕದಿನ ರ‍್ಯಾಂಕಿಂಗ್‌ನ ಅಗ್ರ 10ರಲ್ಲಿ ಭಾರತದ ಮೂವರು ಆಟಗಾರರು ಇದ್ದಾರೆ.

ಟಾಪ್‌ 10ನಲ್ಲಿ ಮೂವರು ಭಾರತೀಯರು

ಇನ್ನು ಬ್ಯಾಟಿಂಗ್‌ನಂತೆ ಬೌಲರ್‌ಗಳು ಶ್ರೇಯಾಂಕದಲ್ಲಿ ಅಬ್ಬರ ನಡೆಸಿದ್ದಾರೆ. ದಕ್ಷಿಣ ಆಫ್ರಿಕಾದ ಕೇಶವ್ ಮಹರಾಜ್‌ 716 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರ ಸ್ಥಾನ ಕಾಯ್ದುಕೊಂಡಿದ್ದಾರೆ. ಟೀಮ್ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್ ಒಂದು ಸ್ಥಾನ ಕುಸಿತ ಕಂಡು ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ. ಇವರು 678 ಅಂಕ ಕಲೆ ಹಾಕಿದ್ದಾರೆ. ಇನ್ನು ಟೀಮ್ ಇಂಡಿಯಾದ ಯಾರ್ಕರ್‌ ಸ್ಪೇಷಲಿಸ್ಟ್‌ ಜಸ್ಪ್ರಿತ್ ಬುಮ್ರಾ ಆರನೇ ಸ್ಥಾನದಲ್ಲಿ ಮುಂದು ವರೆದಿದ್ದಾರೆ. ಇವರು 665 ಅಂಕಗಳನ್ನು ಹೊಂದಿದ್ದಾರೆ. ಚೈನ್‌ಮೆನ್ ಬೌಲರ್ ಕುಲ್ದೀಪ್‌ ಯಾದವ್ 10ನೇ ಶ್ರೇಯಾಂಕವನ್ನು ಹೊಂದಿದ್ದಾರೆ. ಉಳಿದಂತೆ ಎರಡು ಹಾಗೂ ಮೂರನೇ ಸ್ಥಾನದಲ್ಲಿ ಆಸೀಸ್ ಆಟಗಾರರು ಕಬ್ಜಾ ಮಾಡಿಕೊಂಡಿದ್ದಾರೆ.

Story first published: Wednesday, February 7, 2024, 18:05 [IST]
Other articles published on Feb 7, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+