For Quick Alerts
ALLOW NOTIFICATIONS  
For Daily Alerts
 

ICC ODI Ranking: ಭಾರತ ಏಷ್ಯಾಕಪ್ ಗೆದ್ದರೆ ಪಾಕಿಸ್ತಾನ ತಂಡಕ್ಕೆ ದೊಡ್ಡ ಲಾಭ; ಹೇಗೆ?

2023ರ ಏಷ್ಯಾ ಕಪ್ ಪಂದ್ಯಾವಳಿಯ ನೂತನ ಚಾಂಪಿಯನ್ ಯಾರೆಂದು ನಿರ್ಧರಿಸುವ ಫೈನಲ್ ಪಂದ್ಯ ಭಾನುವಾರ, ಸೆಪ್ಟೆಂಬರ್ 15ರಂದು ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಲಿದೆ. ಇದು 2023ರ ಏಕದಿನ ವಿಶ್ವಕಪ್‌ಗೆ ಮುನ್ನ ಆತ್ಮವಿಶ್ವಾಸ ತುಂಬಲಿದೆ.

ಇನ್ನು 2023ರ ಏಷ್ಯಾ ಕಪ್‌ ಪಂದ್ಯಾವಳಿಯಿಂದ ಪಾಕಿಸ್ತಾನ ಹೊರಬಿದ್ದಿದ್ದರೂ, ಫೈನಲ್‌ನಲ್ಲಿ ಶ್ರೀಲಂಕಾ ತಂಡವನ್ನು ಸೋಲಿಸಲು ಭಾರತ ಯಶಸ್ವಿಯಾದರೆ, ಪಾಕಿಸ್ತಾನ ತಂಡ ಐಸಿಸಿ ಏಕದಿನ ತಂಡಗಳ ಶ್ರೇಯಾಂಕದಲ್ಲಿ ಮತ್ತೆ ನಂಬರ್ ಒನ್ ತಂಡವಾಗಬಹುದು.

ಭಾರತಕ್ಕೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ.1 ತಂಡವಾಗುವ ಸುವರ್ಣಾವಕಾಶವಿತ್ತು. ಆದರೆ, ಏಷ್ಯಾ ಕಪ್ ಪಂದ್ಯಾವಳಿಯ ಸೂಪರ್ 4 ಹಂತದ ತಮ್ಮ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಸೋಲುವ ಮೂಲಕ ಅವಕಾಶವನ್ನು ಹಾಳುಮಾಡಿಕೊಂಡಿದೆ.

icc-odi-ranking

ಮತ್ತೊಂದೆಡೆ, ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ತಂಡ ಅಗ್ರ ಶ್ರೇಯಾಂಕದ ಏಕದಿನ ತಂಡವಾಗಿ ಏಷ್ಯಾ ಕಪ್ ಪಂದ್ಯಾವಳಿಗೆ ಪ್ರವೇಶಿಸಿತ್ತು. ಆದರೆ, ಭಾರತ ಮತ್ತು ಶ್ರೀಲಂಕಾ ವಿರುದ್ಧದ ಸೋಲಿನ ನಂತರ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.

ಪ್ರಸ್ತುತ, ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳು ತಲಾ 115 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿವೆ. ಭಾನುವಾರ ನಡೆಯಲಿರುವ ಐದನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಆಸ್ಟ್ರೇಲಿಯಾ ತಂಡವನ್ನು ಸೋಲಿಸಿದರೆ, ಏಷ್ಯಾಕಪ್ 2023ರ ಫೈನಲ್‌ನಲ್ಲಿ ಭಾರತ ವಿರುದ್ಧ ಶ್ರೀಲಂಕಾ ನಡುವಿನ ಫಲಿತಾಂಶವನ್ನು ಲೆಕ್ಕಿಸದೆ ಪಾಕಿಸ್ತಾನ ಮತ್ತೆ ಅಗ್ರಸ್ಥಾನಕ್ಕೆ ಏರಲಿದೆ.

ಶುಕ್ರವಾರ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಹೆನ್ರಿಕ್ ಕ್ಲಾಸೆನ್ 83 ಎಸೆತಗಳಲ್ಲಿ 174 ರನ್ ನೆರವಿನಿಂದ ದಕ್ಷಿಣ ಆಫ್ರಿಕಾ 164 ರನ್‌ಗಳ ಬೃಹತ್ ಗೆಲುವು ಸಾಧಿಸಿತು.

icc-odi-ranking

ಮಿಚೆಲ್ ಮಾರ್ಷ್ ನಾಯಕತ್ವದ ಆಸ್ಟ್ರೇಲಿಯಾ ತಂಡದ ಸೋಲು ಪಾಕಿಸ್ತಾನ ತಂಡದೊಂದಿಗೆ ರೇಟಿಂಗ್ ಪಾಯಿಂಟ್‌ಗಳಲ್ಲಿ ಸಮನಾಗುವಂತೆ ಮಾಡಿದೆ. ಆದರೂ ಅಗ್ರಸ್ಥಾನದಲ್ಲಿ ಮುಂದುವರಿದಿದೆ.

ಹೆನ್ರಿಕ್ ಕ್ಲಾಸೆನ್ ಮತ್ತು ಡೇವಿಡ್ ಮಿಲ್ಲರ್ (ಅಜೇಯ 82 ರನ್) ಅವರೊಂದಿಗೆ ಐದನೇ ವಿಕೆಟ್‌ಗೆ ಕೇವಲ 94 ಎಸೆತಗಳಲ್ಲಿ 222 ರನ್‌ಗಳ ಅಸಾಧಾರಣ ಜೊತೆಯಾಟ ನಿರ್ಮಿಸಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ 5 ವಿಕೆಟ್‌ಗೆ 416 ರನ್ ಕಲೆಹಾಕಿತು.

ಇದು ಏಕದಿನ ಕ್ರಿಕೆಟ್‌ನಲ್ಲಿ ದಕ್ಷಿಣ ಆಫ್ರಿಕಾದ ಐದನೇ ಗರಿಷ್ಠ ಮೊತ್ತವಾಗಿದೆ. ನಂತರ ಪ್ರವಾಸಿ ಆಸ್ಟ್ರೇಲಿಯಾ ತಂಡವನ್ನು 252 ರನ್‌ಗಳಿಗೆ ಆಲೌಟ್ ಮಾಡಿತು.

ದಕ್ಷಿಣ ಆಫ್ರಿಕಾ ಇನಿಂಗ್ಸ್‌ನ ಕೊನೆಯ ಎಸೆತದಲ್ಲಿ ಬೌಂಡರಿಯಲ್ಲಿ ಕ್ಯಾಚ್ ನೀಡುವ ಮೊದಲು ಹೆನ್ರಿಕ್ ಕ್ಲಾಸೆನ್ 13 ಬೌಂಡರಿ ಮತ್ತು 13 ಭರ್ಜರಿ ಸಿಕ್ಸರ್‌ಗಳನ್ನು ಸಿಡಿಸಿದರು.

ಆಸ್ಟ್ರೇಲಿಯಾ ಪರ ಅಲೆಕ್ಸ್ ಕ್ಯಾರಿ 77 ಎಸೆತಗಳಲ್ಲಿ 99 ರನ್ ಗಳಿಸಿ ಕೊನೆಯ ಆಟಗಾರನಾಗಿ ಔಟಾದರು. ದಕ್ಷಿಣ ಆಫ್ರಿಕಾ ಪರ ಲುಂಗಿ ಎನ್‌ಗಿಡಿ 51 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಕಗಿಸೊ ರಬಾಡ 41 ರನ್ ನೀಡಿ 3 ವಿಕೆಟ್‌ ಪಡೆದರು.

ಭಾನುವಾರ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುವ ಅಂತಿಮ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು 2-2 ಅಂತರದಲ್ಲಿ ಸಮಬಲ ಸಾಧಿಸಿವೆ. ಐದನೇ ಪಂದ್ಯವನ್ನು ಗೆಲ್ಲುವ ತಂಡ ಸರಣಿ ವಶಪಡಿಸಿಕೊಳ್ಳಲಿದೆ.

ಮತ್ತೊಂದೆಡೆ, ಶುಕ್ರವಾರದಂದು ಬಾಂಗ್ಲಾದೇಶ ತಂಡವು ಬಲಿಷ್ಠ ಭಾರತ ತಂಡವನ್ನು 6 ರನ್‌ಗಳಿಂದ ಸೋಲಿಸಿತು. ಆರಂಭಿಕ ಶುಭ್ಮನ್ ಗಿಲ್ ಅವರ 121 ರನ್ ಮತ್ತು ಅಕ್ಷರ್ ಪಟೇಲ್ ಅವರ 42 ರನ್‌ಗಳ ಹೋರಾಟ ಕೊನೆಯಲ್ಲಿ ವ್ಯರ್ಥವಾಯಿತು.

266 ರನ್‌ಗಳ ಗುರಿ ಬೆನ್ನಟ್ಟಿದ ಭಾರತ 49.5 ಓವರ್‌ಗಳಲ್ಲಿ 259 ರನ್‌ಗಳಿಗೆ ಆಲೌಟ್ ಆಯಿತು. ಬಾಂಗ್ಲಾದೇಶ ಪರ ಮುಸ್ತಾಫಿಜುರ್ ರೆಹಮಾನ್ ಮೂರು ವಿಕೆಟ್ ಕಬಳಿಸಿ ಮಿಂಚಿದರು.

ಇದಕ್ಕೂ ಮೊದಲು ನಾಯಕ ಶಕೀಬ್ ಅಲ್ ಹಸನ್ (80 ರನ್) ಮತ್ತು ತೋಹಿದ್ ಹೃದೋಯ್ (54 ರನ್) ಅರ್ಧಶತಕಗಳ ನೆರವಿನಿಂದ ಬಾಂಗ್ಲಾದೇಶ ತಂಡ 50 ಓವರ್‌ಗಳಲ್ಲಿ 8 ವಿಕೆಟ್‌ಗೆ 265 ರನ್ ಕಲೆಹಾಕಿತ್ತು. ಭಾರತದ ಪರ ಬೌಲಿಂಗ್‌ನಲ್ಲಿ ಶಾರ್ದೂಲ್ ಠಾಕೂರ್ ಮೂರು ವಿಕೆಟ್ ಕಬಳಿಸಿದರು.

Story first published: Sunday, September 17, 2023, 12:13 [IST]
Other articles published on Sep 17, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+