ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ICC ODI Ranking: ಏಕದಿನ ರ್‍ಯಾಂಕಿಂಗ್‌ನಲ್ಲಿ ಭಾರಿ ಏರಿಕೆ ಕಂಡ ವಿರಾಟ್ ಕೊಹ್ಲಿ, ಸಿರಾಜ್

ICC ODI Ranking: Indian Cricketers Virat Kohli And Mohammed Siraj Has Big Rise In ODI Rankings

ಇತ್ತೀಚೆಗೆ ತವರಿನಲ್ಲಿ ಮುಕ್ತಾಯಗೊಂಡ ಪ್ರವಾಸಿ ಶ್ರೀಲಂಕಾ ತಂಡದ ವಿರುದ್ಧದ ಏಕದಿನ ಸರಣಿಯನ್ನು ಭಾರತ ತಂಡ 3-0 ಅಂತರದಿಂದ ವೈಟ್‌ವಾಶ್ ಮಾಡಿತು.

ಇದೇ ವೇಳೆ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಸಿರಾಜ್ ಏಕದಿನ ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಇದೀಗ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಆಟಗಾರರಿಗೆ ಐಸಿಸಿಯಿಂದ ಸಿಹಿ ಸುದ್ದಿ ಸಿಕ್ಕಿದೆ.

ICC T20 Ranking: ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಸೂರ್ಯಕುಮಾರ್ICC T20 Ranking: ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಸೂರ್ಯಕುಮಾರ್

ಇತ್ತೀಚಿನ ಐಸಿಸಿ ಏಕದಿನ ಬ್ಯಾಟ್ಸ್‌ಮನ್ ರ್‍ಯಾಂಕಿಂಗ್‌ನಲ್ಲಿ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನಕ್ಕೆ ಏರಿದ್ದು, ಬೌಲರ್‌ಗಳ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ ಮೂರನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ.

ಶ್ರೀಲಂಕಾ ವಿರುದ್ಧ ಅಂತಿಮ ಪಂದ್ಯದಲ್ಲಿ ವಿರಾಟ್ ಕೊಹ್ಲಿ 166 ರನ್‌

ಶ್ರೀಲಂಕಾ ವಿರುದ್ಧ ಅಂತಿಮ ಪಂದ್ಯದಲ್ಲಿ ವಿರಾಟ್ ಕೊಹ್ಲಿ 166 ರನ್‌

ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ದಸುನ್ ಶನಕ ನಾಯಕತ್ವದ ಶ್ರೀಲಂಕಾ ತಂಡದ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು ಮತ್ತು ಸರಣಿಶ್ರೇಷ್ಠ ಪ್ರಶಸ್ತಿಯನ್ನು ಗೆದ್ದರು. ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಅಜೇಯ 166 ರನ್‌ಗಳನ್ನು ಒಳಗೊಂಡಂತೆ ಸರಣಿಯಲ್ಲಿ ಎರಡು ಶತಕಗಳನ್ನು ಬಾರಿಸಿದರು.

ಯುವ ವೇಗಿ ಮೊಹಮ್ಮದ್ ಸಿರಾಜ್ ಮೂರು ಪಂದ್ಯಗಳಲ್ಲಿ ಒಂಬತ್ತು ವಿಕೆಟ್‌ಗಳನ್ನು ಪಡೆದರು ಮತ್ತು ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿದರು. ಮೊದಲ ಪಂದ್ಯದಲ್ಲಿ ಎರಡು ವಿಕೆಟ್, ಎರಡನೇ ಪಂದ್ಯದಲ್ಲಿ ಮೂರು ವಿಕೆಟ್ ಮತ್ತು ಅಂತಿಮ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗಳ ಸಾಧನೆಯನ್ನು ಒಳಗೊಂಡಿತ್ತು.

ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ಬೃಹತ್ 391 ರನ್‌ಗಳನ್ನು ಬೆನ್ನಟ್ಟಿದ ಶ್ರೀಲಂಕಾ ತಂಡವನ್ನು ಕೇವಲ 73 ರನ್‌ಗಳಿಗೆ ನಿಯಂತ್ರಿಸಲು ಮೊಹಮ್ಮದ್ ಸಿರಾಜ್ ನೆರವಾದರು.

750 ಅಂಕಗಳಿಗೆ ಏರಿಕೆ ಕಂಡ ವಿರಾಟ್ ಕೊಹ್ಲಿ

750 ಅಂಕಗಳಿಗೆ ಏರಿಕೆ ಕಂಡ ವಿರಾಟ್ ಕೊಹ್ಲಿ

ಇತ್ತೀಚಿನ ಏಕದಿನ ರ್‍ಯಾಂಕಿಂಗ್‌ನಲ್ಲಿ ವಿರಾಟ್ ಕೊಹ್ಲಿ 750 ಅಂಕಗಳಿಗೆ ಏರಿಕೆ ಕಂಡರು. ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ 887 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರಿದರೆ, ದಕ್ಷಿಣ ಆಫ್ರಿಕಾದ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ 766 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾದ ಇನ್ನೊಬ್ಬ ಬ್ಯಾಟರ್ ಕ್ವಿಂಟನ್ ಡಿ ಕಾಕ್ 759 ಅಂಕಗಳೊಂದಿಗೆ ಅಗ್ರ ಮೂರನೇ ಸ್ಥಾನದಲ್ಲಿದ್ದಾರೆ.

ವಿರಾಟ್ ಕೊಹ್ಲಿ ನಂತರ ಆಸ್ಟ್ರೇಲಿಯಾದ ಸ್ಫೋಟಕ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ 747 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ. ಕೇವಲ ಮೂರು ಪಾಯಿಂಟ್‌ಗಳಿಂದ ಭಾರತೀಯ ಸ್ಟಾರ್ ಬ್ಯಾಟರ್‌ಗಿಂತ ಹಿಂದೆ ಇದ್ದಾರೆ.

ವೃತ್ತಿಜೀವನದ ಅತ್ಯುತ್ತಮ ಸ್ಥಾನ ತಲುಪಿದ ಮೊಹಮ್ಮದ್ ಸಿರಾಜ್

ವೃತ್ತಿಜೀವನದ ಅತ್ಯುತ್ತಮ ಸ್ಥಾನ ತಲುಪಿದ ಮೊಹಮ್ಮದ್ ಸಿರಾಜ್

ಮೊಹಮ್ಮದ್ ಸಿರಾಜ್ ತಮ್ಮ ವೃತ್ತಿಜೀವನದ ಅತ್ಯುತ್ತಮ 685 ರೇಟಿಂಗ್‌ ಪಾಯಿಂಟ್ ಗಳಿಸಿದರು ಮತ್ತು ನ್ಯೂಜಿಲೆಂಡ್ ವಿರುದ್ಧ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರಿಸಿದರೆ, ಸಿರಾಜ್ ನಂಬರ್ 1 ಏಕದಿನ ಬೌಲರ್ ಆಗುವ ಅತ್ಯುತ್ತಮ ಅವಕಾಶ ಹೊಂದಿದ್ದಾರೆ.

ನ್ಯೂಜಿಲೆಂಡ್‌ನ ಟ್ರೆಂಟ್ ಬೌಲ್ಟ್ 730 ಅಂಕಗಳೊಂದಿಗೆ ಏಕದಿನ ಬೌಲರ್‌ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದರೆ, ಆಸ್ಟ್ರೇಲಿಯಾದ ವೇಗಿ ಜೋಶ್ ಹ್ಯಾಜಲ್‌ವುಡ್ 727 ರೇಟಿಂಗ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ

ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ

ಸದ್ಯ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಆಡುತ್ತಿದ್ದು, ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಸಿರಾಜ್ ಇಬ್ಬರೂ ಕಿವೀಸ್ ವಿರುದ್ಧ ತಮ್ಮ ಫಾರ್ಮ್ ಅನ್ನು ಮುಂದುವರಿಸಲು ಎದುರು ನೋಡುತ್ತಿದ್ದಾರೆ.

ನ್ಯೂಜಿಲೆಂಡ್ ಭಾರತ ವಿರುದ್ಧದ ವೈಟ್‌ಬಾಲ್ ಸರಣಿಗಾಗಿ ಪ್ರವಾಸ ಕೈಗೊಂಡಿದ್ದು, ಮೂರು ಏಕದಿನ ಪಂದ್ಯಗಳ ಸರಣಿ ಮತ್ತು ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.

ಏಕದಿನ ಸರಣಿಯ ಮೊದಲ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬುಧವಾರ, ಜನವರಿ 18ರಂದು ನಡೆಯಲಿದೆ.

ನ್ಯೂಜಿಲೆಂಡ್ ವಿರುದ್ಧ ಭಾರತದ ಪೂರ್ಣ ತಂಡ

ನ್ಯೂಜಿಲೆಂಡ್ ವಿರುದ್ಧ ಭಾರತದ ಪೂರ್ಣ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.

Story first published: Wednesday, January 18, 2023, 14:43 [IST]
Other articles published on Jan 18, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X