ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ICC ODI Ranking: ಸತತ ಸೋಲಿನ ಬಳಿಕ ಅಗ್ರಸ್ಥಾನದಿಂದ ಕೆಳಗಿಳಿದ ಕಿವೀಸ್; ನಂ.1 ಸ್ಥಾನದ ಮೇಲೆ ಕಣ್ಣಿಟ್ಟ ಭಾರತ!

ICC ODI Ranking: New Zealand Dropped From Top Spot After Back-to-back Defeats; India Eyes On No.1 Spot

ಶನಿವಾರ, ಜನವರಿ 21ರಂದು ರಾಯ್‌ಪುರದಲ್ಲಿ ನಡೆದ ಭಾರತ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯದಲ್ಲಿ ಪ್ರವಾಸಿ ನ್ಯೂಜಿಲೆಂಡ್ ತಂಡ 8 ವಿಕೆಟ್‌ಗಳಿಂದ ಶರಣಾಯಿತು. ಇದರಿಂದ ಭಾರತ ವಿರುದ್ಧ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ 2-0 ಅಂತರದಲ್ಲಿ ಸರಣಿ ಕಳದುಕೊಂಡಿತು.

ಸತತ ಎರಡು ಪಂದ್ಯಗಳ ಸೋಲಿನ ಬಳಿಕ ನ್ಯೂಜಿಲೆಂಡ್ ತಂಡ ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ ತಮ್ಮ ನಂ.1 ಸ್ಥಾನವನ್ನು ಕಳೆದುಕೊಂಡಿದೆ. ಇದೀಗ ವಿಶ್ವ ಚಾಂಪಿಯನ್ ಇಂಗ್ಲೆಂಡ್ ತಂಡ ಅಗ್ರಸ್ಥಾನಕ್ಕೇರಿದ್ದು, ನ್ಯೂಜಿಲೆಂಡ್ ಎರಡನೇ ಸ್ಥಾನಕ್ಕೆ ಇಳಿದಿದೆ. ಭಾರತ ತಂಡ ಮೂರನೇ ಸ್ಥಾನದಲ್ಲಿ ಮುಂದುವರೆದಿದೆ.

ICC ODI Ranking: ಏಕದಿನ ರ್‍ಯಾಂಕಿಂಗ್‌ನಲ್ಲಿ ಭಾರಿ ಏರಿಕೆ ಕಂಡ ವಿರಾಟ್ ಕೊಹ್ಲಿ, ಸಿರಾಜ್ICC ODI Ranking: ಏಕದಿನ ರ್‍ಯಾಂಕಿಂಗ್‌ನಲ್ಲಿ ಭಾರಿ ಏರಿಕೆ ಕಂಡ ವಿರಾಟ್ ಕೊಹ್ಲಿ, ಸಿರಾಜ್

ಇದೇ ವೇಳೆ, ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ಮಂಗಳವಾರ, ಜನವರಿ 24ರಂದು ನಡೆಯಲಿರುವ ಅಂತಿಮ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಗೆದ್ದರೆ ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರುವ ಅವಕಾಶವಿದೆ.

ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಭಾರತ ತಲಾ 113 ರೇಟಿಂಗ್ ಪಾಯಿಂಟ್‌

ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಭಾರತ ತಲಾ 113 ರೇಟಿಂಗ್ ಪಾಯಿಂಟ್‌

ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಭಾರತ ತಂಡಗಳು ತಲಾ 113 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಸಮಬಲದಲ್ಲಿವೆ. ಭಾರತ ವಿರುದ್ಧ ಎರಡನೇ ಪಂದ್ಯಕ್ಕೂ ಮುನ್ನ ನ್ಯೂಜಿಲೆಂಡ್ 115 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿತ್ತು.

ಇನ್ನು ಇಂಗ್ಲೆಂಡ್ 113 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿತ್ತು. 112 ರೇಟಿಂಗ್‌ನೊಂದಿಗೆ ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿತ್ತು ಮತ್ತು 111 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಭಾರತ ನಾಲ್ಕನೇ ಸ್ಥಾನದಲ್ಲಿತ್ತು ಎಂದು ಐಸಿಸಿ ತಿಳಿಸಿದೆ.

ಎರಡನೇ ಪಂದ್ಯದಲ್ಲಿ ಎಂಟು ವಿಕೆಟ್‌ಗಳಿಂದ ಭಾರತದ ವಿರುದ್ಧ ಸೋತ ನಂತರ, ನ್ಯೂಜಿಲೆಂಡ್ ತಂಡ 113 ರೇಟಿಂಗ್ ಪಾಯಿಂಟ್‌ಗಳಿಗೆ ಇಳಿದು, ಒಟ್ಟಾರೆ 3166 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. 113 ರೇಟಿಂಗ್ ಅಂಕಗಳೊಂದಿಗೆ ಇಂಗ್ಲೆಂಡ್ ಅಗ್ರಸ್ಥಾನದಲ್ಲಿದೆ ಮತ್ತು ಭಾರತ ಮೂರನೇ ಸ್ಥಾನದಲ್ಲಿದೆ.

ತಂಡಗಳ ಐಸಿಸಿ ಏಕದಿನ ರ್‍ಯಾಂಕಿಂಗ್

ತಂಡಗಳ ಐಸಿಸಿ ಏಕದಿನ ರ್‍ಯಾಂಕಿಂಗ್

1. ಇಂಗ್ಲೆಂಡ್ - 113 ರೇಟಿಂಗ್ ಪಾಯಿಂಟ್ಸ್

2. ನ್ಯೂಜಿಲೆಂಡ್ - 113 ರೇಟಿಂಗ್ ಪಾಯಿಂಟ್ಸ್

3. ಭಾರತ - 113 ರೇಟಿಂಗ್ ಪಾಯಿಂಟ್ಸ್

4. ಆಸ್ಟ್ರೇಲಿಯಾ - 112 ರೇಟಿಂಗ್ ಪಾಯಿಂಟ್ಸ್

5. ಪಾಕಿಸ್ತಾನ -106 ರೇಟಿಂಗ್ ಪಾಯಿಂಟ್ಸ್

ಭಾರತ ಟಿ20 ಕ್ರಿಕೆಟ್‌ನಲ್ಲಿ ನಂ.1, ಟೆಸ್ಟ್‌ ಕ್ರಿಕೆಟ್‌ನಲ್ಲಿ ನಂ.2

ಭಾರತ ಟಿ20 ಕ್ರಿಕೆಟ್‌ನಲ್ಲಿ ನಂ.1, ಟೆಸ್ಟ್‌ ಕ್ರಿಕೆಟ್‌ನಲ್ಲಿ ನಂ.2

ಸದ್ಯ ಟಿ20 ಕ್ರಿಕೆಟ್‌ನಲ್ಲಿ ನಂ.1 ಮತ್ತು ಟೆಸ್ಟ್‌ ಕ್ರಿಕೆಟ್‌ನಲ್ಲಿ ನಂ.2 ಆಗಿರುವ ಭಾರತ ತಂಡಕ್ಕೆ ಇದೀಗ ಎಲ್ಲಾ ಮೂರು ಸ್ವರೂಪಗಳಲ್ಲಿ ನಂ.1 ಸ್ಥಾನ ಪಡೆಯುವ ಅದ್ಭುತ ಅವಕಾಶವಿದೆ.

126 ಅಂಕಗಳೊಂದಿಗೆ ಟೆಸ್ಟ್‌ನಲ್ಲಿ ನಂ.1 ಸ್ಥಾನದಲ್ಲಿರುವ ಆಸ್ಟ್ರೇಲಿಯಾ 11 ಅಂಕಗಳಿಂದ ಭಾರತ ತಂಡಕ್ಕಿಂತ ಮುಂದಿದೆ. ಮುನ್ನಡೆಸಿದೆ. ಫೆಬ್ರವರಿ 9ರಿಂದ ಭಾರತದಲ್ಲಿ ಆರಂಭವಾಗಲಿರುವ ಬಹು ನಿರೀಕ್ಷಿತ 4 ಟೆಸ್ಟ್ ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ. ಅಲ್ಲಿ ಸರಣಿ ಗೆದ್ದರೆ ನಂ.1 ಸ್ಥಾನಕ್ಕೇರುವ ಸಾಧ್ಯತೆ ಇದೆ.

ನ್ಯೂಜಿಲೆಂಡ್ ವಿರುದ್ಧ ಇದುವರೆಗಿನ ಏಕದಿನ ಸರಣಿಯಲ್ಲಿ ಭಾರತ ಪ್ರಾಬಲ್ಯ ಸಾಧಿಸಿದೆ. ಸರಣಿಯ ಆರಂಭಿಕ ಪಂದ್ಯದಲ್ಲಿ ಹೈದರಾಬಾದ್‌ನಲ್ಲಿ ದೊಡ್ಡ ಮೊತ್ತದ ಪಂದ್ಯದಲ್ಲಿ ರೋಚಕವಾಗಿ ಗೆದ್ದಿತು. ಶುಭ್ಮನ್ ಗಿಲ್ ಅವರ ದ್ವಿಶತಕದ ನೆರವಿನಿಂದ ಭಾರತ 8 ವಿಕೆಟ್ ನಷ್ಟಕ್ಕೆ 349 ರನ್ ಗಳಿಸಿತು.

ಮೊದಲ ಪಂದ್ಯದಲ್ಲಿ 12 ರನ್‌ಗಳಿಂದ ಭಾರತದೆದುರು ಸೋತ ನ್ಯೂಜಿಲೆಂಡ್

ಮೊದಲ ಪಂದ್ಯದಲ್ಲಿ 12 ರನ್‌ಗಳಿಂದ ಭಾರತದೆದುರು ಸೋತ ನ್ಯೂಜಿಲೆಂಡ್

ಬೃಹತ್ ಮೊತ್ತ ಬೆನ್ನಟ್ಟಿದ ನ್ಯೂಜಿಲೆಂಡ್ 6 ವಿಕೆಟ್ ನಷ್ಟಕ್ಕೆ 131 ರನ್‌ಗಳಿಗೆ ತತ್ತರಿಸಿ ಹೋಗಿತ್ತು. ಆದರೆ ಮೈಕೆಲ್ ಬ್ರೇಸ್‌ವೆಲ್ ಅವರ ಅದ್ಭುತ 140 ರನ್‌ಗಳು ಪ್ರವಾಸಿ ತಂಡವನ್ನು ಗೆಲುವಿನ ಸಮೀಪ ಕೊಂಡೊಯ್ದಿತ್ತು. ಅಂತಿಮವಾಗಿ ಕೇವಲ 12 ರನ್‌ಗಳಿಂದ ಭಾರತದೆದುರು ಸೋಲಬೇಕಾಯಿತು.

ಇನ್ನು 2ನೇ ಏಕದಿನ ಪಂದ್ಯದಲ್ಲಿ ಭಾರತದ ಬಿಗಿ ಬೌಲಿಂಗ್ ದಾಳಿಗೆ ನ್ಯೂಜಿಲೆಂಡ್ ಬ್ಯಾಟರ್‌ಗಳು ಪೆವಿಲಿಯನ್ ಪರೇಡ್ ನಡೆಸಿದರು. ಟಾಮ್ ಲಾಥಮ್ ನಾಯಕತ್ವದ ಪ್ರವಾಸಿ ಕಿವೀಸ್ ತಂಡ 108 ರನ್‌ಗಳಿಗೆ ಆಲೌಟ್ ಆಯಿತು. ಮೊಹಮ್ಮದ್ ಶಮಿ 3 ವಿಕೆಟ್ ಪಡೆದು ಮಿಂಚಿದರು. ಸಾಧಾರಣ ಗುರಿ ಬೆನ್ನತ್ತಿದ ಭಾರತ ತಂಡ ನಾಯಕ ರೋಹಿತ್ ಅವರ ಅರ್ಧಶತಕದ ನೆರವಿನಿಂದ ಭಾರತ ಕೇವಲ 20.1 ಓವರ್‌ಗಳಲ್ಲಿ ಗೆಲುವಿನ ಗುರಿ ಮುಟ್ಟಿತು.

ನ್ಯೂಜಿಲೆಂಡ್ ವಿರುದ್ಧದ ಸರಣಿಗೂ ಮುನ್ನ ಭಾರತ ತಂಡ ಹೊಸ ವರ್ಷದ ಆರಂಭದಲ್ಲಿ ಶ್ರೀಲಂಕಾ ತಂಡವನ್ನು 3-0 ಅಂತರದಲ್ಲಿ ಸೋಲಿಸಿ, ತವರಿನಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಸಾಧಿಸಿದೆ.

Story first published: Sunday, January 22, 2023, 13:46 [IST]
Other articles published on Jan 22, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X