For Quick Alerts
ALLOW NOTIFICATIONS  
For Daily Alerts
 

ICC Ranking: ವಿಶ್ವಕಪ್ ವರ್ಷದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ನಂಬರ್ 1 ಸ್ಥಾನಕ್ಕೇರಿದ ಪಾಕಿಸ್ತಾನ!

ನ್ಯೂಜಿಲೆಂಡ್ ವಿರುದ್ಧ ಪ್ರಸ್ತುತ ನಡೆಯುತ್ತಿರುವ ಏಕದಿನ ಸರಣಿಯ ನಾಲ್ಕನೇ ಪಂದ್ಯದಲ್ಲಿ ಪಾಕಿಸ್ತಾನ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಪಾಕಿಸ್ತಾನ ತಂಡ ಏಕದಿನ ಕ್ರಿಕೆಟ್‌ನಲ್ಲಿ ಶ್ರೇಷ್ಠ ಸಾಧನೆ ಮಾಡಿದೆ. ಐಸಿಸಿ ಏಕದಿನ ಕ್ರಿಕೆಟ್ ಶ್ರೇಯಾಂಕಪಟ್ಟಿಯಲ್ಲಿ ಪಾಕಿಸ್ತಾನ ನಂಬರ್ 1ಕ್ಕೇರಿದೆ. ಬಾಬರ್ ಅಜಂ ಶತಕದ ನೆರವಿನಿಂದಾಗಿ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ನಾಲ್ನೇ ಪಂದ್ಯದಲ್ಲಿಯೂ ಪಾಕ್ ತಂಡ ಗೆಲುವು ಸಾಧಿಸುವ ಮೂಲಕ ಈ ಸಾಧನೆ ಮಾಡಿದೆ.

ವೈಟ್‌ಬಾಲ್ ಸರಣಿಯಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ನ್ಯೂಜಿಲೆಂಡ್ ತಂಡ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿತ್ತು. ಇದರಲ್ಲಿ ಐದು ಪಂದ್ಯಗಳ ಏಕದಿನ ಸರಣಿ ಆಯೋಜನೆಯಾಗಿದ್ದು ಮೊದಲ ನಾಲ್ಕು ಪಂದ್ಯಗಳಲ್ಲಿಯೂ ಪಾಕಿಸ್ತಾನ ತಂಡ ಗೆಲುವು ಸಾಧಿಸಿದ್ದು ಸರಣಿಯನ್ನು 4-0 ಅಂತರದಿಂದ ವಶಕ್ಕೆ ಪಡೆದುಕೊಂಡಿದೆ.

ICC ODI ranking: Pakistan become No. 1 ODI team after defeat New Zealand in 4th ODI

ಈ ಸರಿಯ ಆರಂಭಕ್ಕೂ ಮುನ್ನ ಪಾಕಿಸ್ತಾನ ತಂಡ ಏಕದಿನ ಶ್ರೆಯಾಂಕ ಪಟ್ಟಿಯಲ್ಲಿ 106 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿತ್ತು. ಆದರೆ ಸರಣಿಯ ಮೊದಲ ನಾಲ್ಕು ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಭರ್ಜರಿಯಾಗಿ ಮಣಿಸಿದ ಪರಿಣಾಮವಾಗಿ ಆಸ್ಟ್ರೇಲಿಯಾ ಹಾಗೂ ಭಾರತ ತಂಡವನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದೆ. ಆಸ್ಟ್ರೇಲಿಯಾ ಎರಡನೇ ಹಾಗೂ ಭಾರತ ಮೂರನೇ ಸ್ಥಾನದಲ್ಲಿದೆ.

ಐಸಿಸಿ ಪ್ರಕಟಿಸಿರುವ ಪರಿಷ್ಕೃತ ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನ 113.483 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ ಆಸ್ಟ್ರೇಲಿಯಾ (113.286) 2ನೇ ಸ್ಥಾನದಲ್ಲಿದೆ ಮತ್ತು ಭಾರತ (112.638) 3ನೇ ಸ್ಥಾನಕ್ಕೆ ಕುಸಿದಿದೆ. ಏಕದಿನ ವಿಶ್ವಕಪ್ ವರ್ಷದಲ್ಲಿ ಪಾಕಿಸ್ತಾನಕ್ಕೆ ಈ ನಂಬರ್ 1 ಶ್ರೇಯಾಂಕ ಭಾರಿ ಪ್ರಮಾಣದಲ್ಲಿ ಆತ್ಮವಿಶ್ವಾಸ ಹೆಚ್ಚಿಸಿರುವುದರಲ್ಲಿ ಅನುಮಾನವಿಲ್ಲ. ಯಾಕೆಂದರೆ ಪಾಕ್ ತಂಡ ಇತ್ತೀಚಿನ ದಿನಗಳಲ್ಲಿ ವೈಟ್-ಬಾಲ್ ಕ್ರಿಕೆಟ್‌ನಲ್ಲಿ ಸ್ಥಿರವಾಗಿ ಪ್ರದರ್ಶಣ ನೀಡಿಕೊಂಡು ಬಂದಿದೆ.

ಶುಕ್ರವಾರ ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡ ನ್ಯೂಜಿಲೆಂಡ್ ವಿರುದ್ಧ ಬೃಹತ್ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ಮೊದಲಿಗೆ ಬ್ಯಾಟಿಂಗ್ ನಡೆಸಿದ್ದು ನಾಯಕ ಬಾಬರ್ ಅಜಂ ಅವರ ಶತಕದ ನೆರವಿನಿಂದಾಗಿ 334 ರನ್‌ಗಳನ್ನು ಗಳಿಸಿತ್ತು. ಬಾಬರ್ ಅಜಂ ಈ ಪಂದ್ಯದಲ್ಲಿ 117 ಎಸೆತಗಳಲ್ಲಿ 107 ರನ್‌ಗಳನ್ನು ಗಳಿಸಿದರು. ಈ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ ಕೇವಲ 232 ರನ್‌ಗಳನ್ನು ಮಾತ್ರವೇ ಗಳಿಸಲು ಶಕ್ತವಾಯಿತು. ಹೀಗಾಗಿ ಪಾಕಿಸ್ತಾನ ಈ ಪಂದ್ಯದಲ್ಲಿ 102 ರನ್‌ಗಳ ಅಂತರದ ಬೃಹತ್ ಗೆಲುವು ಸಾಧಿಸಿದೆ.

ಇನ್ನು ಐದು ಪಂದ್ಯಗಳ ಈ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ ತಮಡ ಮೊದಲ ನಾಲ್ಕು ಪಂದ್ಯಗಳಲ್ಲಿಯೂ ಸೋಲು ಕಂಡಿದ್ದು ವೈಟ್‌ವಾಶ್ ಮುಖಭಂಗಕ್ಕೆ ಒಳಗಾಗುವ ಭೀತಿಯಲ್ಲಿದೆ. ಸರಣಿಯ ಐದನೇ ಪಂದ್ಯ ಭಾನುವಾರ ನಡೆಯಲಿದ್ದು ಕರಾಚಿಯ ನ್ಯಾಶನಲ್ ಸ್ಟೇಡಿಯಂನಲ್ಲಿಯೇ ಈ ಪಂದ್ಯ ಕೂಡ ಆಯೋಜನೆಯಾಗಲಿದೆ. ಇನ್ನು ಏಕದಿನ ಸರಣಿಗೂ ಮುನ್ನ ನಡೆದ ಐದು ಪಂದ್ಯಗಳ ಟಿ20 ಸರಣಿ ಒಂದು ಪಂದ್ಯ ಮಳೆಗೆ ಆಹುತಿಯಾದ ಕಾರಣ 2-2 ಅಂತರದಿಂದ ಸಮಬಲದಲ್ಲಿ ಅಂತ್ಯವಾಗಿತ್ತು.

Story first published: Saturday, May 6, 2023, 8:58 [IST]
Other articles published on May 6, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+