ICC ODI Ranking: ಅದ್ಭುತ ಬ್ಯಾಟಿಂಗ್ ನಂತರ ಏಕದಿನ ರ್‍ಯಾಂಕಿಂಗ್‌ನಲ್ಲಿ ಏರಿಕೆ ಕಂಡ ಕೊಹ್ಲಿ, ರೋಹಿತ್

ಮಂಗಳವಾರ, ಜನವರಿ 10ರಂದು ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಬ್ಯಾಟಿಂಗ್ ಅದ್ಭುತ ಬ್ಯಾಟಿಂಗ್ ಪ್ರದರ್ಶನವನ್ನು ನೀಡಿದ ನಂತರ, ಭಾರತದ ಹಿರಿಯ ಬ್ಯಾಟರ್‌ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಬುಧವಾರ ಬಿಡುಗಡೆಯಾದ ಐಸಿಸಿ ಏಕದಿನ ಪುರುಷರ ರ್‍ಯಾಂಕಿಂಗ್‌ನಲ್ಲಿ ಏರಿಕೆ ಕಂಡಿದ್ದಾರೆ.
ಶ್ರೀಲಂಕಾ ವಿರುದ್ಧ ಭಾರತ ತಂಡದ 67 ರನ್‌ಗಳ ಗೆಲುವಿನಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಬಾರಿಸಿದ್ದು, ಇದರಿಂದ ರ್‍ಯಾಂಕಿಂಗ್‌ನಲ್ಲಿ ಎರಡು ಸ್ಥಾನ ಮೇಲೇರಿ 6ನೇ ಸ್ಥಾನಕ್ಕೆ ತಲುಪಿದ್ದಾರೆ.
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕೂಡ ಅಮೋಘ 83 ರನ್ ಗಳಿಸಿ 8ನೇ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಶ್ರೀಲಂಕಾ ತಂಡದ ನಾಯಕ ದಸುನ್ ಶನಕ ಅವರ ತಂಡ ಸೋತರೂ ಕೆಚ್ಚೆದೆಯ ಶತಕ ಗಳಿಸುವ ಮೂಲಕ 20 ಸ್ಥಾನಗಳ ಮೇಲೇರಿ 61ನೇ ಸ್ಥಾನಕ್ಕೆ ತಲುಪಿದ್ದಾರೆ.

ಬೌಲಿಂಗ್‌ನಲ್ಲಿ 18ನೇ ಸ್ಥಾನ ತಲುಪಿದ ಮೊಹಮ್ಮದ್ ಸಿರಾಜ್
ಏಕದಿನ ಕ್ರಿಕೆಟ್‌ನ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್ ಅವರು ಶ್ರೀಲಂಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಎರಡು ವಿಕೆಟ್ ಕಬಳಿಸುವ ಮೂಲಕ ರ್‍ಯಾಂಕಿಂಗ್‌ನಲ್ಲಿ ನಾಲ್ಕು ಸ್ಥಾನಗಳ ಏರಿಕೆ ಕಂಡು 18ನೇ ಸ್ಥಾನ ತಲುಪಿದ್ದಾರೆ.
ಇನ್ನು ಟಿ20 ರ್‍ಯಾಂಕಿಂಗ್‌ನಲ್ಲಿ ಭಾರತದ ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಶತಕ ಗಳಿಸಿದರು. ಹೀಗಾಗಿ ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಮೂಲಕ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಇನ್ನಷ್ಟು ಉತ್ತಮಗೊಳಿಸಿದ್ದಾರೆ. ಬ್ಯಾಟಿಂಗ್ ಚಾರ್ಟ್‌ಗಳಲ್ಲಿ ಅಗ್ರಸ್ಥಾನದಲ್ಲಿ ತಮ್ಮ ಆಳ್ವಿಕೆಯನ್ನು ಮುಂದುವರೆಸಿದ್ದಾರೆ.
ಇನ್ನು ಸಿಡ್ನಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಮತ್ತು ಅಂತಿಮ ಟೆಸ್ಟ್‌ನಲ್ಲಿ ಉಸ್ಮಾನ್ ಖವಾಜಾ ಅವರ ಅದ್ಭುತ ಶತಕದ ನೆರವಿನಿಂದ ಪುರುಷರ ಟೆಸ್ಟ್ ಬ್ಯಾಟರ್‌ಗಳ ರ್‍ಯಾಂಕಿಂಗ್‌ನಲ್ಲಿ 8ನೇ ಸ್ಥಾನ ತಲುಪಿದರು.

ಟೆಸ್ಟ್‌ನಲ್ಲಿ ಅಗ್ರ 10ರೊಳಗೆ ಪ್ರವೇಶಿಸಿದ ಉಸ್ಮಾನ್ ಖವಾಜಾ
ಉಸ್ಮಾನ್ ಖವಾಜಾ 195 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು. ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಮಳೆ-ಬಾಧಿತ ಪಂದ್ಯದಲ್ಲಿ ಫಲಿತಾಂಶವನ್ನು ಪಡೆಯಲು ಡಿಕ್ಲೇರ್ ಘೋಷಿಸಿದ ಕಾರಣ ಖವಾಜಾ ದ್ವಿಶತಕವನ್ನು ತಪ್ಪಿಸಿಕೊಂಡರು. ಆದರೂ, ಉಸ್ಮಾನ್ ಖವಾಜಾ ನಾಲ್ಕು ಸ್ಥಾನಗಳ ಏರಿಕೆ ಕಂಡು ಅಗ್ರ 10ರೊಳಗೆ ಪ್ರವೇಶಿಸಿದರು.
ನ್ಯೂಜಿಲೆಂಡ್‌ನ ಬ್ಯಾಟರ್ ಟಾಮ್ ಲ್ಯಾಥಮ್, ಡೆವೊನ್ ಕಾನ್ವೇ ಮತ್ತು ಸೌದ್ ಶಕೀಲ್ ಪಾಕಿಸ್ತಾನ ವಿರುದ್ಧ ನೀಡಿದ ಉತ್ತಮ ಪ್ರದರ್ಶನದ ಕಾರಣ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಏರಿಕೆ ಕಂಡಿದ್ದಾರೆ.

21ನೇ ಸ್ಥಾನಕ್ಕೆ ತಲುಪಿದ ಡೆವೊನ್ ಕಾನ್ವೇ
ಕರಾಚಿಯಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಟಾಮ್ ಲ್ಯಾಥಮ್ 71 ಮತ್ತು 62 ರನ್ ಗಳಿಸಿ 19ನೇ ಸ್ಥಾನಕ್ಕೆ ಏರಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಡೆವೊನ್ ಕಾನ್ವೇ ಅವರ ಶತಕವು ಮೂರು ಸ್ಥಾನಗಳ ಮೇಲೇರಿ 21ನೇ ಸ್ಥಾನಕ್ಕೆ ತಲುಪಿದ್ದಾರೆ.
ಇನ್ನು ತನ್ನ ಚೊಚ್ಚಲ ಟೆಸ್ಟ್ ಶತಕವನ್ನು ಗಳಿಸಿದ ಸೌದ್ ಶಕೀಲ್ ಇಪ್ಪತ್ತು ಸ್ಥಾನಗಳ ಏರಿಕೆ ಕಂಡು 30ನೇ ಸ್ಥಾನ ತಲುಪಿದ್ದಾರೆ. ಆಸ್ಟ್ರೇಲಿಯಾದ ಮಾರ್ನಸ್ ಲ್ಯಾಬುಸ್ಚಾಗ್ನೆ ಬ್ಯಾಟರ್‌ಗಳ ರ್‍ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications