ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಸಿಸಿ ಏಕದಿನ ಶ್ರೇಯಾಂಕ: ಅಗ್ರಸ್ಥಾನದಲ್ಲಿ ಮುಂದುವರಿದ ವಿರಾಟ್, ರೋಹಿತ್

ICC ODI Rankings: Virat Kohli, Rohit Sharma Reign Supreme

ಐಸಿಸಿ ನೂತನ ಶ್ರೇಯಾಂಕ ಪಟ್ಟು ಬಿಡುಗಡೆಯಾಗಿದ್ದು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಉಪ ನಾಯಕ ರೋಹಿತ್ ಶರ್ಮಾ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲೇ ಮುಂದುವರಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ನಾಯಕ, ಉಪನಾಯಕ ಇಬ್ಬರೂ ಅದ್ಭುತ ಪ್ರದರ್ಶನವನ್ನು ನೀಡಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ 2 ಅಂಕವನ್ನು ಮತ್ತು ರೋಹಿತ್ ಶರ್ಮಾ 3 ಅಂಕವನ್ನು ಪಡೆದುಕೊಂಡಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬೂಮ್ರಾ ಮೊದಲ ಸ್ಥಾನದಲ್ಲೇ ಮುಂದುವರಿಸಿದ್ದಾರೆ.

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 886 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ವಿರಾಟ್ ಕೊಹ್ಲಿ 183 ರನ್‌ಗಳಿಸಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಈ ಸರಣಿಯಲ್ಲಿ 171 ರನ್ ಗಳಿಸಿದ್ದಾರೆ. ನಿರ್ಣಾಯಕ ಅಂತಿಮ ಪಂದ್ಯದಲ್ಲಿ ರೋಹಿತ್ ಶರ್ಮಾ 119 ರನ್‌ಗಳಿಸಿದರು. ರೋಹಿತ್ ಸರ್ಮಾ ಏಕದಿನ ಪಂದ್ಯದಲ್ಲಿ 868 ಅಂಕಗಳನ್ನು ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ಬ್ಯಾಟ್ಸ್‌ಮನ್ ಬಾಬರ್ ಅಜಮ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. 829 ಅಂಕವನ್ನು ಪಡೆದುಕೊಂಡಿದ್ದಾರೆ.

ಮೊದಲೆರಡು ಪಂದ್ಯಗಳಲ್ಲಿ ಆಡಿ ಮೂರನೇ ಪಂದ್ಯದಲ್ಲಿ ಗಾಯಗೊಂಡು ತಂಡದಿಂದ ಹೊರಗುಳಿದಿರುವ ಶಿಖರ್ ಧವನ್ ಸರಣಿಯಲ್ಲಿ 170 ರನ್ ಗಳಿಸಿದರು. ಈ ಮೂಲಕ ಶಿಖರ್ ಧವನ್ 7 ಸ್ಥಾನಗಳ ಏರಿಕೆ ಕಂಡು 15ನೇ ಸ್ಥಾನಕ್ಕೆ ತಲುಪಿದ್ದಾರೆ. ಆಸ್ಟ್ರೇಲಿಯಾದ ಆಟಗಾರ ಸ್ಟೀವ್ ಸ್ಮಿತ್ ಸರಣಿಯಲ್ಲಿ 229 ರನ್ ಗಳಿಸಿ ನಾಲ್ಕು ಸ್ಥಾನಗಳ ಏರಿಕೆಯನ್ನು ಕಂಡಿದ್ದಾರೆ. ಈ ಮೂಲಕ ಸ್ಟೀವ್ ಸ್ಮಿತ್ 23ನೇ ಸ್ಥಾನಕ್ಕೆ ತಲುಪಿದ್ದಾರೆ.

ಆಸ್ಟ್ರೇಲಿಯಾ ಸ್ಪೋಟಕ ಆಟಗಾರ ಡೇವಿಡ್ ವಾರ್ನರ್ ಒಂದು ಸ್ಥಾನ ಮೇಲಕ್ಕೇರಿ 6 ಸ್ಥಾನಕ್ಕೆ ಜಿಗಿದರೆ, ಆಸ್ಟ್ರೇಲಿಯಾ ನಾಯಕ ಅರೋನ್ ಫಿಂಚ್ ಟಾಪ್ ಒಂದು ಸ್ಥಾನ ಮೇಲಕ್ಕೇರುವ ಮೂಲಕ 10 ರಲ್ಲಿ ಸ್ಥಾನ ಪಡೆದುಕೊಳ್ಳವಲ್ಲಿ ಯಶಸ್ವಿಯಾಗಿದ್ದಾರೆ.

ಆಸ್ಟ್ರೇಲಿಯಾವನ್ನು ಈ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದಿದ ಮಣಿಸಿದೆ. ಈ ಮೂಲಕ ಟೀಮ್ ಇಂಡಿಯಾ ಏಕದಿನದಲ್ಲಿ ಎರಡನೇ ಸ್ಥಾನದಲ್ಲಿದೆ. ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಇಂಗ್ಲೆಂಡ್‌ ತಂಡ ಮೊದಲ ಸ್ಥಾನದಲ್ಲೇ ಮುಂದುವರಿದಿದೆ.

Story first published: Monday, January 20, 2020, 18:23 [IST]
Other articles published on Jan 20, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X