ICC ODI ranking: ಅಗ್ರ ಸ್ಥಾನದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ

ನವದೆಹಲಿ: ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ರೋಹಿತ್ ಶರ್ಮಾ ಇತ್ತೀಚೆಗೆ ಪ್ರಕಟಿತ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಏಕದಿನ ರ್‍ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನ ಮುಂದುವರೆದಿದ್ದಾರೆ. ಕೊಹ್ಲಿ ನಂ.1 ಸ್ಥಾನದಲ್ಲಿದ್ದರೆ, ರೋಹಿತ್ 2ನೇ ಸ್ಥಾನದಲ್ಲಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ನನ್ನ ಮಧ್ಯೆ ಏನೂ ಬದಲಾಗಿಲ್ಲ: ಅಜಿಂಕ್ಯ ರಹಾನೆ

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಎರಡು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 89, 63 ರನ್ ಬಾರಿಸಿದ್ದರು. ಇದು ರ್‍ಯಾಂಕಿಂಗ್‌ನಲ್ಲಿ ಗಟ್ಟಿಯಾಗಲು ಕೊಹ್ಲಿಗೆ ನೆರವು ನೀಡಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ರೋಹಿತ್ ಆಡಿಲ್ಲವಾದರೂ ದ್ವಿತೀಯ ಸ್ಥಾನದಲ್ಲಿ ಮುಂದುವರೆದಿದ್ದಾರೆ.

ಕೊಹ್ಲಿ 870 ರೇಟಿಂಗ್ ಪಾಯಿಂಟ್ಸ್‌ನೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಹಿಟ್‌ಮ್ಯಾನ್ ರೋಹಿತ್ 842 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಝಾಮ್ (837), 4ನೇ ಸ್ಥಾನದಲ್ಲಿ ನ್ಯೂಜಿಲೆಂಡ್‌ನ ರಾಸ್ ಟೇಲರ್, 5ನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಆ್ಯನ್ ಫಿಂಚ್ ಇದ್ದಾರೆ.

ಚೇತೇಶ್ವರ ಪೂಜಾರಗೆ ಮರ್ಯಾದೆ ಪ್ರಶ್ನೆ, ಭಾರೀ ಸವಾಲೆಸೆದ ಆರ್‌ ಅಶ್ವಿನ್!

ಏಕದಿನ ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ ನ್ಯೂಜಿಲೆಂಡ್‌ನ ಟ್ರೆಂಟ್‌ ಬೌಲ್ಟ್ (722), ಅಫ್ಘಾನಿಸ್ತಾನದ ಮುಜೀಬ್ ಉರ್ ರಹ್ಮಾನ್ (708), ಭಾರತದ ಜಸ್‌ಪ್ರೀತ್‌ ಬೂಮ್ರಾ (700) ಅಗ್ರ ಮೂರು ಸ್ಥಾನ ಪಡೆದಿದ್ದಾರೆ. ಆಲ್ ರೌಂಡರ್‌ಗಳಲ್ಲಿ ಬಾಂಗ್ಲಾದ ಶಕೀಬ್ ಅಲ್ ಹಸನ್, ಅಫ್ಘಾನ್‌ನ ಮೊಹಮ್ಮದ್ ನಬಿ, ಇಂಗ್ಲೆಂಡ್‌ನ ಕ್ರಿಸ್ ವೋಕ್ಸ್ ಆರಂಭಿಕ ಸ್ಥಾನಗಳಲ್ಲಿದ್ದರೆ, ತಂಡಗಳಲ್ಲಿ ಇಂಗ್ಲೆಂಡ್, ಭಾರತ, ನ್ಯೂಜಿಲೆಂಡ್ ಅಗ್ರ ಮೂರರಲ್ಲಿವೆ.

For Quick Alerts
ALLOW NOTIFICATIONS
For Daily Alerts
 

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Wednesday, January 27, 2021, 21:10 [IST]
Other articles published on Jan 27, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X