ಭಾರತ ಹಾಗೂ ಇಂಗ್ಲೆಂಡ್ ನಡುವಣ ಆಂಡರ್ಸನ್ ಸರಣಿ ಮುಕ್ತಾಯಗೊಂಡಿದೆ. ಈ ಸರಣಿಯಲ್ಲಿ ಉಭಯ ತಂಡಗಳು ಅಮೋಘ ಪ್ರದರ್ಶನ ನೀಡಿವೆ. ಈ ಸರಣಿಯಲ್ಲಿ ಎರಡೂ ತಂಡದ ಆಟಗಾರರು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಶುಭಮನ್ ಗಿಲ್ ಹಾಗೂ ಮೊಹಮ್ಮದ್ ಸಿರಾಜ್ ಸರಣಿಯಲ್ಲಿ ಅಬ್ಬರಿಸಿದ್ದಾರೆ. ಇನ್ನು ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಸಹ ಅಮೋಘ ಪ್ರದರ್ಶನ ನೀಡಿದ್ದಾರೆ. ಈ ವೇಳೆ ಉಭಯ ತಂಡದ ನಾಯಕರು ಮತ್ತೊಮ್ಮೆ ಐಸಿಸಿ ಪ್ರತಿಷ್ಠಿತ ಪ್ರಶಸ್ತಿಗಾಗಿ ಕಾದಾಟ ನಡೆಸಲಿದ್ದಾರೆ.
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಶುಭಮನ್ ಗಿಲ್, ಬೆನ್ ಸ್ಟೋಕ್ಸ್ ಸೇರಿದಂತೆ ದಕ್ಷಿಣ ಆಫ್ರಿಕಾದ ವಿಯಾನ್ ಮುಲ್ಡರ್ ಐಸಿಸಿ ಜುಲೈ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನ ಗೊಂಡಿದ್ದಾರೆ. ಶುಭಮನ್ ಗಿಲ್ ಇಂಗ್ಲೆಂಡ್ ಪ್ರವಾಸದಲ್ಲಿ ಅಮೋಘ ಪ್ರದರ್ಶನ ನೀಡಿ ಅಬ್ಬರಿಸಿದ್ದಾರೆ. ಅಲ್ಲದೆ ಸೊಗಸಾದ ಬ್ಯಾಟಿಂಗ್ ನಡೆಸಿ ದಾಖಲೆಯ ಮೇಲೆ ದಾಖಲೆಗಳನ್ನು ಬರೆದಿದ್ದಾರೆ. ಇನ್ನು ಇಂಗ್ಲೆಂಡ್ ತಂಡ ಸ್ಥಿರ ಪ್ರದರ್ಶನ ನೀಡಿದಲ್ಲಿ ಬೆನ್ ಸ್ಟೋಕ್ಸ್ ಪ್ರದರ್ಶನ ಮುಖ್ಯವಾಗಿದೆ.

ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ ವಿಯಾನ್ ಮುಲ್ಡರ್ ಜಿಂಬಾಬ್ವೆ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನಡೆಸಿ, ತ್ರಿಶತಕ ಬಾರಿಸಿ ಅಬ್ಬರಿಸಿದ್ದರು. ಇನ್ನು ಟೀಮ್ ಇಂಡಿಯಾ ನಾಯಕ ಶುಭಮನ್ ಗಿಲ್ ಸಹ ಜುಲೈನಲ್ಲಿ ಅಮೋಘ ಬ್ಯಾಟಿಂಗ್ ನಡೆಸಿದ್ದಾರೆ. ಇವರು ಆಡಿದ 3 ಟೆಸ್ಟ್ ಪಂದ್ಯಗಳಲ್ಲಿ 94ರ ಸರಾಸರಿಯಲ್ಲಿ 567 ರನ್ ಕಲೆ ಹಾಕಿದ್ದಾರೆ. ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಜುಲೈನಿಂದ ಆಗಸ್ಟ್ ವರೆಗೆ ನಡೆದಿತ್ತು.
ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಶುಭಮನ್ ಗಿಲ್ ಮೊದಲ ಇನಿಂಗ್ಸ್‌ನಲ್ಲಿ 269 ರನ್ ಸಿಡಿಸಿದ್ದರು. ಅಲ್ಲದೆ ಎರಡನೇ ಇನಿಂಗ್ಸ್‌ನಲ್ಲೂ ಇವರು 161 ರನ್‌ಗಳನ್ನು ಕಲೆ ಹಾಕಿ ತಂಡಕ್ಕೆ ನೆರವಾಗಿದ್ರು. ಈ ಮೂಲಕ ಇವರು ಒಂದು ಟೆಸ್ಟ್ ಪಂದ್ಯದಲ್ಲಿ 430 ರನ್ ಸಿಡಿಸಿ ಅಬ್ಬರಿಸಿದ್ದಾರೆ.
ಜಿಂಬಾಬ್ವೆ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ವಿಯಾನ್ ಮುಲ್ಡರ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಇವರು ಮೊದಲ ಇನಿಂಗ್ಸ್‌ನಲ್ಲಿ 367 ರನ್ ಸಿಡಿಸಿ, ಬ್ರಿಯಾನ್ ಲಾರಾ ಅವರ 400 ರನ್‌ಗಳ ದಾಖಲೆ ಮುರಿದು ಬೀಳುತ್ತಿತ್ತು. ಅಲ್ಲದೆ ಇವರು ನಾಯಕಾಗಿ ಡಿಕ್ಲೇರ್ ಮಾಡಿಕೊಂಡರು. ಇವರು ಈ ಸರಣಿಯಲ್ಲಿ 531 ರನ್ ಚಚ್ಚಿದ್ದಾರೆ.
ಇಂಗ್ಲೆಂಡ್ ತಂಡದ ನಾಯಕ ಭಾರತ ವಿರುದ್ಧ ಅಮೋಘ ಪ್ರದರ್ಶನ ನೀಡಿದ್ದಾರೆ. ಇವರು ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗಿದ್ದಾರೆ. ಇವರು 50ರ ಸರಾಸರಿಯಲ್ಲಿ 251 ರನ್ ಕಲೆ ಹಾಕಿದ್ದು, 12 ವಿಕೆಟ್‌ಗಳನ್ನು ಕಬಳಿಸಿದ್ದಾರೆ.