ಟೆಸ್ಟ್ ರ‍್ಯಾಂಕಿಂಗ್: ನಾಲ್ಕು ವರ್ಷದ ಬಳಿಕ ಅಗ್ರಸ್ಥಾನದಿಂದ ಕೆಳಕ್ಕಿಳಿದ ಭಾರತ

ಐಸಿಸಿ ಹೊಸ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿ ಭಾರತಕ್ಕೆ ದೊಡ್ಡ ಆಘಾತ ನೀಡಿದೆ. ಟೆಸ್ಟ್‌ನಲ್ಲಿ ಮೊದಲ ಸ್ಥಾನದಲ್ಲಿ ಭದ್ರವಾಗಿ ಕೂತಿದ್ದ ಭಾರತ ಈಗ ಆ ಸ್ಥಾನವನ್ನು ಕಳೆದುಕೊಂಡಿದೆ. ಟೀಮ್ ಇಂಡಿಯಾ ಮೂರನೇ ಸ್ಥಾನಕ್ಕೆ ಕುಸಿದಿದ್ದು ಮೊದಲ ಸ್ಥಾನವನ್ನು ಆಸ್ಟ್ರೇಲಿಯಾ ಆಕ್ರಮಿಸಿಕೊಂಡಿದೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ 2016ರಿಂದ ನಿರಂತರವಾಗಿ ಮೊದಲ ಸ್ಥಾನದಲ್ಲಿ ಮಿಂಚಿತ್ತು. ಆದರೆ ಸುಮಾರು ನಾಲ್ಕು ವರ್ಷಗಳ ಬಳಿಕ ಅಗ್ರ ಸ್ಥಾನದಿಂದ ಭಾರತ ಜಾರಿದೆ. ಭಾರತಕ್ಕಿಂತ ಎರಡು ಅಂಕದ ಮುನ್ನಡೆಯನ್ನು ಪಡೆದಿರುವ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನಕ್ಕೆ ನ್ಯೂಜಿಲೆಂಡ್ ಲಗ್ಗೆಯಿಟ್ಟಿದೆ.
ಮೂರನೇ ಸ್ಥಾನಕ್ಕೆ ಜಾರಿರುವ ಭಾರತ ನ್ಯೂಜಿಲೆಂಡ್‌ಗಿಂತ ಒಂದು ಅಂಕ ಕಡಿಮೆ ಪಡೆದುಕೊಂಡಿದೆ. ರ‍್ಯಾಂಕಿಂಗ್‌ನಲ್ಲಿ ಆಸ್ಟ್ರೇಲಿಯಾ 116 ಅಂಕಗಳನ್ನು ಪಡೆದುಕೊಂಡಿದ್ದರೆ ನ್ಯೂಜಿಲೆಂಡ್ 115 ಮತ್ತು ಭಾರತ 114 ಅಂಕಗಳನ್ನು ಪಡೆದುಕೊಂಡಿದೆ.
ಇನ್ನು ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಟೆಸ್ಟ್ ಮಾತ್ರವಲ್ಲ ಟಿ20 ಮಾದರಿಯಲ್ಲೂ ನಂಬರ್ 1 ಸ್ಥಾನವನ್ನು ಪಡೆದುಕೊಂಡಿದೆ. 2018 ರಿಂದ ಟಿ20 ರ‍್ಯಾಂಕಿಂಗ್‌ನಲ್ಲಿ ಪಾಕಿಸ್ತಾನ ಅಗ್ರ ಸ್ಥಾನದಲ್ಲಿತ್ತು. 27 ತಿಂಗಳ ಬಳಿಕ ಈಗ ಪಾಕಿಸ್ತಾನ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಇಂಗ್ಲೆಂಡ್ ಎರಡನೇ ಸ್ಥಾನವನ್ನು ಪಡೆದುಕೊಂಡರೆ ಟೀಮ್ ಇಂಡಿಯಾ ಮೂರನೇ ಸ್ಥಾನದಲ್ಲಿದೆ.
ಏಕದಿನ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ಅಗ್ರಸ್ಥಾನದಲ್ಲಿ ಮುಂದುವರಿಸಿದೆ. ಬಹಳ ಕಾಲದ ಬಳಿಕ ಟೀಮ್ ಇಂಡಿಯಾ ಟೆಸ್ಟ್, ಏಕದಿನ ಮತ್ತು ಟಿ20 ಈ ಯಾವ ಮಾದರಿಯಲ್ಲೂ ಮೊದಲ ಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಿಲ್ಲ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications