For Quick Alerts
ALLOW NOTIFICATIONS  
For Daily Alerts
 

ICC Ranking: ರಶೀದ್ ಖಾನ್ ಈಗ ಟಿ20 ನಂಬರ್ 1 ಬೌಲರ್: 7ನೇ ಸ್ಥಾನದಲ್ಲೇ ಉಳಿದ ಕೊಹ್ಲಿ

ICC Ranking: Virat Kohli Stays At Number 7 In ODI Batters Ranking : Rashid Khan No.1 T20 Bowler

ಅಫ್ಘಾನಿಸ್ತಾನದ ಚಾಂಪಿಯನ್ ಬೌಲರ್ ರಶೀದ್ ಖಾನ್, ವಿಶ್ವದ ನಂಬರ್ 1 ಟಿ20 ಬೌಲರ್ ಎನಿಸಿಕೊಂಡಿದ್ದಾರೆ. ಈ ವಾರದ ಐಸಿಸಿ ರ್‍ಯಾಂಕಿಂಗ್ ಪಟ್ಟಿಯಲ್ಲಿ ಶ್ರೀಲಂಕಾದ ವನಿಂದು ಹಸರಂಗ ಅವರನ್ನು ಹಿಂದಿಕ್ಕಿರುವ ರಶೀದ್ ಖಾನ್ ನಂಬರ್ 1 ಸ್ಥಾನಕ್ಕೇರಿದ್ದಾರೆ.

ಇತ್ತೀಚೆಗೆ ಮುಕ್ತಾಯವಾದ ಪಾಕಿಸ್ತಾನ ವಿರುದ್ಧ ರಶೀದ್ ಖಾನ್ ಉತ್ತಮ ಪ್ರದರ್ಶನ ನೀಡಿದ್ದು, ಅಗ್ರಸ್ಥಾನಕ್ಕೇರಲು ಸಹಾಯವಾಗಿದೆ. ಪಾಕಿಸ್ತಾನ ವಿರುದ್ಧದ ಸರಣಿಯಲ್ಲಿ ಮೂರು ವಿಕೆಟ್ ಪಡೆದುಕೊಂಡಿದ್ದರು, ಅವರ ಎಕಾನಮಿ ಅತ್ಯುತ್ತಮವಾಗಿತ್ತು. 710 ಅಂಕಗಳೊಂದಿಗೆ ರಶೀದ್ ಖಾನ್ ಅಗ್ರಸ್ಥಾನದಲ್ಲಿದ್ದರೆ, 695 ಅಂಕಗಳನ್ನು ಗಳಿಸಿರುವ ವನಿಂದು ಹಸರಂಗ ಎರಡನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.

ಅಫ್ಘಾನಿಸ್ತಾನದ ವೇಗದ ಬೌಲರ್ ಫಜಲ್ಹಕ್ ಫಾರೂಕಿ 692 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ಅವರು 5 ವಿಕೆಟ್ ಪಡೆದು ಮಿಂಚಿದ್ದರು. ಮುಜೀಬ್ ಉರ್ ರೆಹಮಾನ್ 668 ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದ್ದಾರೆ. ಅಗ್ರ 10 ಬೌಲರ್ ಗಳಲ್ಲಿ ಅಫ್ಘಾನಿಸ್ತಾನದ ಮೂವರು ಆಟಗಾರರು ಇರುವುದು ವಿಶೇಷವಾಗಿದೆ. ಇನ್ನು ಭಾರತದ ಯಾವೊಬ್ಬ ಬೌಲರ್ ಕೂಡ ಅಗ್ರ ಹತ್ತರಲ್ಲಿ ಸ್ಥಾನ ಪಡೆದುಕೊಂಡಿಲ್ಲ.

ಟಿ20 ಬ್ಯಾಟಿಂಗ್ ವಿಭಾಗದಲ್ಲಿ ಮಾತ್ರ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ. ದಕ್ಷಿಣ ಆಫ್ರಿಕಾದ ರಿಲೀ ರೊಸ್ಸೊವ್ 3 ಸ್ಥಾನಗಳ ಏರಿಕೆ ಕಂಡಿದ್ದು, 6ನೇ ಸ್ಥಾನದಲ್ಲಿದ್ದಾರೆ. ಆಲ್‌ರೌಂಡರ್ ವಿಭಾಗದಲ್ಲಿ ಶಕೀಬ್ ಅಲ್ ಹಸನ್ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ.

ICC Ranking: Virat Kohli Stays At Number 7 In ODI Batters Ranking : Rashid Khan No.1 T20 Bowler

ಏಳನೇ ಸ್ಥಾನದಲ್ಲಿ ಉಳಿದ ವಿರಾಟ್ ಕೊಹ್ಲಿ

ಏಕದಿನ ಮಾದರಿ ರ್‍ಯಾಂಕಿಂಗ್‌ನ ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ 7ನೇ ಸ್ಥಾನದಲ್ಲೇ ಮುಂದುವರೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಅರ್ಧಶತಕ ಗಳಿಸಿದ ಅವರು, ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಆರಂಭಿಕ ಬ್ಯಾಟರ್ ಶುಭಮನ್ ಗಿಲ್ 5ನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ 8ನೇ ಸ್ಥಾನದಲ್ಲಿದ್ದಾರೆ. 887 ಅಂಕಗಳನ್ನು ಹೊಂದಿರುವ ಬಾಬರ್ ಅಜಂ ಏಕದಿನ ಮಾದರಿಯಲ್ಲಿ ನಂಬರ್ 1 ಬ್ಯಾಟರ್ ಎನಿಸಿಕೊಂಡಿದ್ದಾರೆ.

ಬೌಲಿಂಗ್ ವಿಭಾಘದಲ್ಲಿ ಆಸ್ಟ್ರೇಲಿಯಾದ ವೇಗಿ ಜೋಶ್ ಹೇಜಲ್‌ವುಡ್ 705 ಅಂಕಗಳೊಂದಿಗೆ ಮೊದಲನೇ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್ 701 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ, 691 ಅಂಕಗಳನ್ನು ಹೊಂದಿರುವ ಮೊಹಮ್ಮದ್ ಸಿರಾಜ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಆಲ್‌ರೌಂಡರ್ ವಿಭಾಗದಲ್ಲಿ ಶಕೀಬ್ ಅಲ್ ಹಸನ್ ಮೊದಲ ಸ್ಥಾನದಲ್ಲಿದ್ದರೆ, ಮೊಹಮ್ಮದ್ ನಬಿ ಮತ್ತು ರಶೀದ್ ಖಾನ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ.

ICC Ranking: Virat Kohli Stays At Number 7 In ODI Batters Ranking : Rashid Khan No.1 T20 Bowler

ಟೆಸ್ಟ್‌ನಲ್ಲಿ 2ನೇ ಸ್ಥಾನಕ್ಕೆ ಜಿಗಿದ ಕೇನ್ ವಿಲಿಯಮ್ಸನ್

ಟೆಸ್ಟ್ ಕ್ರಿಕೆಟ್ ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ ಕೇನ್ ವಿಲಿಯಮ್ಸನ್ ಭರ್ಜರಿ ಏರಿಕೆ ಕಂಡಿದ್ದಾರೆ. ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಮುನ್ನ 6ನೇ ಸ್ಥಾನದಲ್ಲಿದ್ದ ಅವರು, ಈಗ 4 ಕ್ರಮಾಂಕಗಳ ಏರಿಕೆ ಕಂಡು 2ನೇ ಸ್ಥಾನದಲ್ಲಿದ್ದಾರೆ. 915 ಪಾಯಿಂಟ್‌ಗಳೊಂದಿಗೆ ಮಾರ್ನಸ್ ಲ್ಯಾಬುಸ್ಚಾಗ್ನೆ ಅಗ್ರಸ್ಥಾನದಲ್ಲಿದ್ದು, ಕೇನ್ ವಿಲಿಯಮ್ಸನ್ 883 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ರವಿಚಂದ್ರನ್ ಅಶ್ವಿನ್ ಮೊದಲನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಜೇಮ್ಸ್ ಆಂಡರ್ಸನ್ ಎರಡನೇ ಸ್ಥಾನದಲ್ಲಿದ್ದು, ಪ್ಯಾಟ್ ಕಮ್ಮಿನ್ಸ್ ಮೂರನೇ ಸ್ಥಾನದಲ್ಲಿದ್ದಾರೆ. ಆಲ್‌ರೌಂಡರ್ ವಿಭಾಗದಲ್ಲಿ ಜಡೇಜಾ ಅಗ್ರಸ್ಥಾನದಲ್ಲಿದ್ದು, ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ. ಶಕೀಬ್ ಅಲ್ ಹಸನ್ ಮೂರನೇ ಸ್ಥಾನದಲ್ಲಿದ್ದಾರೆ.

Story first published: Wednesday, March 29, 2023, 15:46 [IST]
Other articles published on Mar 29, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+