ICC Ranking: ಮುಂದುವರಿದ ಶುಬ್ಮನ್ ಗಿಲ್ ನಾಗಾಲೋಟ: ಮತ್ತೆ ಟಾಪ್ 10ನಲ್ಲಿ ಕೊಹ್ಲಿ, ರೋಹಿತ್
ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಶುಬ್ಮನ್ ಗಿಲ್ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಏಷ್ಯಾಕಪ್ ಟೂರ್ನಿಯ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಮೋಘ ಅರ್ಧ ಶತಕ ಸಿಡಿಸಿದ ಗಿಲ್ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ತನ್ನ ಅತ್ಯುನ್ನತ ಸ್ಥಾನಕ್ಕೇರಿದ್ದು 2ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಪ್ರಸ್ತುತ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಶುಬ್ಮನ್ ಗಿಲ್ ಅವರಿಗಿಂತ ಮೇಲಿನ ಸ್ಥಾನದಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಂ ಮಾತ್ರವೇ ಇದ್ದಾರೆ. ಅಲ್ಲದೆ ಟೀಮ್ ಇಂಡಿಯಾದ ಮೂವರು ಆಟಗಾರರು ಟಾಪ್ 10 ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದು 2019ರ ಜನವರಿ ಬಳಿಕ ಇದೇ ಮೊದಲ ಬಾರಿಗೆ ಮೂವರು ಆಟಗಾರರು ಐಸಿಸಿ ಏಕದಿನ ಬ್ಯಾಟಿಂಗ್ ವಿಭಾಗದ ಶ್ರೇಯಾಂಕ ಪಟ್ಟಿಯಲ್ಲಿ ಸ್ಥಾನವನ್ನು ಪಡೆದುಕೊಂಡಂತಾಗಿದೆ.

ಟೀಮ್ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ನಾಯಕ ರೋಹಿತ್ ಶರ್ಮಾ ಕೂಡ ಟಾಪ್ 10 ಪಟ್ಟಿಯಲ್ಲಿ ಕಾಣಿಸಿಕೊಂಡಿರುವ ಮತ್ತಿಬ್ಬರು ಬ್ಯಾಟರ್‌ಗಳಾಗಿದ್ದಾರೆ. ವಿರಾಟ್ ಕೊಹ್ಲಿ 8ನೇ ಶ್ರೇಯಾಂಕದಲ್ಲಿದ್ದರೆ ನಾಯಕ ರೋಹಿತ್ ಶರ್ಮಾ 9ನೇ ಶ್ರೇಯಾಂಕವನ್ನು ಹೊಂದಿದ್ದಾರೆ. ಈ ಮೂಲಕ ವಿಶ್ವಕಪ್ ಟೂರ್ನಿ ಸನಿಹದಲ್ಲಿರುವಾಗ ಭಾರತ ತಂಡದ ಬ್ಯಾಟರ್‌ಗಳಿಂದ ಗಮನಾರ್ಹ ಸಾಧನೆಯಾಗಿದೆ.
2019ರಲ್ಲಿ ಭಾರತದ ಮೂರು ಅಗ್ರ ಕ್ರಮಾಂಕದ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಟಾಪ್ 10ನಲ್ಲಿ ಕಾಣಿಸಿಕೊಂಡಿದ್ದರು. ಇದೀಗ ನಾಲ್ಕೂವರೆ ವರ್ಷಗಳ ಬಳಿಕ ಮತ್ತೊಮ್ಮೆ ಆ ಸಾಧನೆ ಮಾಡಲು ಸಾಧ್ಯವಾಗಿದೆ. 2018ರ ಸೆಪ್ಟೆಂಬರ್‌ನಲ್ಲಿ ಈ ಮೂವರು ಆಟಗಾರರು ಟಾಪ್ 6 ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದರು ಎನ್ನುವುದು ಗಮನಾರ್ಹ.
ಇನ್ನು ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನ ತಂಡದ ಮೂವರು ಆಟಗಾರರು ಕೂಡ ಟಾಪ್ 10ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಬಾಬರ್ ಅಜಂ ಮೊದಲ ಸ್ಥಾನದಲ್ಲಿದ್ದು ಎರಡನೇ ಸ್ಥಾನದಲ್ಲಿರುವ ಶುಬ್ಮನ್ ಗಿಲ್ ಅವರಿಗಿಂಯ 100 ಅಂಕಗಳ ಅಂರ ಹೊಂದಿದ್ದಾರೆ. ಇನ್ನು ಇಮಾಮ್ ಉಕ್ ಹಕ್ ಹಾಗೂ ಫಕರ್ ಜಮಾನ್ ಕೂಡ ಈ ಪಟ್ಟಿಯಲ್ಲಿದ್ದು ಕ್ರಮವಾಗಿ 5 ಹಾಗೂ 10ನೇ ಸ್ಥಾನದಲ್ಲಿದ್ದಾರೆ.
ಇನ್ನು ಬೌಲರ್‌ಗಳ ಪಟ್ಟಿಯಲ್ಲಿ ಟಾಪ್ 10ನಲ್ಲಿ ಇಬ್ಬರು ಭಾರತೀಯ ಬೌಲರ್‌ಗಳಿದ್ದಾರೆ. ಕುಲ್‌ದೀಪ್ ಯಾದವ್ ಒಂದು ಸ್ಥಾನಗಳ ಏರಿಕೆ ಕಂಡಿದ್ದು 7ನೇ ಸ್ಥಾನವನ್ನು ಪಡೆದುಕೊಂಡಿದ್ದರೆ ಮೊಹಮ್ಮದ್ ಸಿರಾಜ್ 9ನೇ ಸ್ಥಾನದಲ್ಲಿದ್ದಾರೆ. ಇನ್ನು ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯ ಮಾತ್ರವೇ ಸ್ಥಾನ ಪಡೆದುಕೊಂಡಿದ್ದಾರೆ. ಹಾರ್ದಿಕ್ ಒಂದು ಸ್ಥಾನದ ಏರಿಕೆ ಕಂಡು 6ನೇ ಶ್ರೇಯಾಂಕ ಹೊಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications