ಐಸಿಸಿ ರ‍್ಯಾಂಕಿಂಗ್: ವೃತ್ತಿಜೀವನದಲ್ಲಿ ಅತ್ಯುತ್ತಮ ಶ್ರೇಯಾಂಕ ಪಡೆದ ಹಾರ್ದಿಕ್ ಪಾಂಡ್ಯ

ಟೀಮ್ ಇಂಡಿಯಾದ ಪ್ರಮುಖ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಎಂಥಾ ಅದ್ಭುತ ಫಾರ್ಮ್ನಲ್ಲಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಕಳೆದ ಮೂರ್ನಾಲ್ಕು ತಿಂಗಳುಗಳಲ್ಲಿ ಪಾಂಡ್ಯ ಮೈದಾನಕ್ಕಿಳಿದಾಗ ಒಂದು ಬಾರಿಯೂ ನಿರೀಕ್ಷೆಯಲ್ಲಿ ಹುಸಿಗೊಳಿಸಿ ವಾಪಾಸ್ ಬಂದವರಲ್ಲ. ಕಳೆದ ಭಾನುವಾರ ಅಂತ್ಯವಾದ ಪಾಕಿಸ್ತಾನದ ವಿರುದ್ಧದ ಪಂದ್ಯ ಇದಕ್ಕೆ ಇತ್ತೀಚಿನ ಸಾಕ್ಷಿಯಾಗಿದೆ. ಈ ಅದ್ಭುತ ಪ್ರದರ್ಶನದಿಂದಾಗಿ ಶ್ರೇಯಾಂಕಪಟ್ಟಿಯಲ್ಲಿಯೂ ಹಾರ್ದಿಕ್ ಪಾಂಡ್ಯ ಅದ್ಭುತ ಏರಿಕೆ ಕಂಡಿದ್ದಾರೆ.
ಟಿ20 ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯ ತಮ್ಮ ವೃತ್ತಿ ಜೀವನದ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ನಿಡಿದ ಆಲ್‌ರೌಂಡರ್ ಪ್ರದರ್ಶನದ ಬಳಿಕ ಹಾರ್ದಿಕ್ ಪಾಂಡ್ಯ ಐಸಿಸಿ ಟಿ20 ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ 5ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಹಾರ್ದಿಕ್ ಕ್ರಿಕೆಟ್ ಭವಿಷ್ಯದ ಬಗ್ಗೆ ಎದ್ದಿತ್ತು ಅನುಮಾನ
ಕಳೆದ ವರ್ಷ ಟಿ20 ವಿಶ್ವಕಪ್‌ನ ಬಳಿಕ ಫಿಟ್‌ನೆಸ್‌ನ ಸಮಸ್ಯೆಯಿಂದಾಗಿ ಹೊರಗುಳಿದಿದ್ದ ಹಾರ್ದಿಕ್ ಪಾಂಡ್ಯ ಅವರ ಕ್ರಿಕೆಟ್ ಭವಿಷ್ಯದ ಬಗ್ಗೆ ಅನುಮಾನಗಳು ಮೂಡಿದ್ದವು. ಸುಮಾರು ಐದು ತಿಂಗಳುಗಳ ಕಾಲ ಪಾಂಡ್ಯ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವುಳಿದುಕೊಂಡಿದ್ದರು . ಆದರೆ ಐಪಿಎಲ್ 2022ರಲ್ಲಿ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದ ಅವರು ಸಂಪೂರ್ಣ ಫಿಟ್ ಆಗಿದ್ದು ಮಾತ್ರವಲ್ಲದೆ ಅದ್ಭುತ ಪ್ರದರ್ಶನ ನೀಡುತ್ತಾ ಮಿಂಚುತ್ತಿದ್ದಾರೆ.

ಪಾಕ್ ವಿರುದ್ಧ ಪಾಂಡ್ಯ ಹೋರಾಟ
ಹಾರ್ದಿಕ್ ಪಾಂಡ್ಯ ಈ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ನೀಡಿದ ಸಮಯೋಚಿತ ಪ್ರದರ್ಶನ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತು. ಬ್ಯಾಟಿಂಗ್ ನಡೆಸಲು ಅತ್ಯಂತ ಸವಾಲಾಗಿದ್ದ ಪಿಚ್‌ನಲ್ಲಿ ಹಾರ್ದಿಕ್ ಪಾಂಡ್ಯ 17 ಎಸೆತಗಳಲ್ಲಿ 33 ರನ್ ಬಾರಿಸುವ ಮೂಲಕ ತಾನು ಭಾರತ ತಂಡಕ್ಕೆ ಎಷ್ಟು ಮೌಲ್ಯಯುತ ಆಟಗಾರ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಇದಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ಬೌಲಿಂಗ್‌ನಲ್ಲಿಯೂ ಅಮೋಘ ಪ್ರದರ್ಶನ ನೀಡುವ ಮೂಲಕ ಪಾಕಿಸ್ತಾನ ತಂಡಕ್ಕೆ ಆಘಾತ ನೀಡಿದರು. ನಾಲ್ಕು ಓವರ್‌ಗಳ ತಮ್ಮ ಬೌಲಿಂಗ್ ದಾಳಿಯಲ್ಲಿ ಹಾರ್ದಿಕ್ ಪಾಂಡ್ಯ ಬರೊಬ್ಬರಿ ಮೂರು ವಿಕೆಟ್ ಪಡೆದುಕೊಂಡಿದ್ದಾರೆ. ಬಿಟ್ಟುಕೊಟ್ಟ ರನ್ ಕೇವಲ 25. ಮೊಹಮ್ಮದ್ ರಿಜ್ವಾನ್, ಇಫ್ತಿಕಾರ್ ಅಹ್ಮದ್ ಹಾಗೂ ಕುಶ್ದಿಲ್ ಹಾರ್ದಿಕ್ ಪಾಡೆದ ವಿಕೆಟ್‌ಗಳು. ತಮ್ಮ ಶಾರ್ಟ್‌ಪಿಚ್ ಎಸೆತವನ್ನು ಅದ್ಭುತವಾಗಿ ಬಳಸಿಕೊಂಡ ಹಾರ್ದಿಕ್ ಪಾಕ್ ಬ್ಯಾಟರ್‌ಗಳಿಗೆ ಸವಾಲಾದರು. ಇನ್ನು ಅನುಭವಿ ಭುವನೇಶ್ವರ್ ಕುಮಾರ್ ಈ ಪಂದ್ಯದಲ್ಲಿ ನಾಲ್ಕು ವಿಕೆಟ್ ಕಿತ್ತು ಮಿಂಚಿದ್ದಾರೆ.

ಹಾಂಕಾಂಗ್ ವಿರುದ್ಧ ಎರಡನೇ ಪಂದ್ಯ
ಏಷ್ಯಾ ಕಪ್ ಟೂರ್ನಿಯಲ್ಲಿ ಬುಧವಾರ ನಾಲ್ಕನೇ ಮುಖಾಮುಖಿ ನಡೆಯುತ್ತಿದ್ದು ಈ ಪಂದ್ಯದಲ್ಲಿ ಟೂರ್ನಿ ಗೆಲ್ಲುವ ನೆಚ್ಚಿನ ತಂಡವಾಗಿರುವ ಹಾಲಿ ಚಾಂಪಿಯನ್ ಭಾರತ ತಂಡಕ್ಕೆ ಹಾಂಕಾಂಗ್ ತಂಡ ಸವಾಲೊಡ್ಡಲಿದೆ. ಅರ್ಹತಾ ಸುತ್ತಿನಲ್ಲಿ ಮೂರಕ್ಕೆ ಮೂರು ಪಂದ್ಯಗಳನ್ನು ಗೆದ್ದುಕೊಂಡು ಈ ಟೂರ್ನಿಗೆ ಅರ್ಹತೆ ಸಂಪಾದಿಸಿರುವ ಹಾಂಕಾಂಗ್ ಭಾರತದ ವಿರುದ್ಧ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ. ಇನ್ನು ಈ ಟೂರ್ನಿ ಮೊದಲ ಪಂದ್ಯದಲ್ಲಿ ಬದ್ಧ ಎದುರಾಳಿ ಪಾಕಿಸ್ತಾನ ತಂಡವನ್ನು ಮಣಿಸಿರುವ ಭಾರತ ತಂಡ ಹಾಂಕಾಂಗ್ ವಿರುದ್ಧದ ಪಂದ್ಯ ಗೆದ್ದು ಮುಂದಿನ ಸುತ್ತಿಗೇರುವ ಆತ್ಮವಿಶ್ವಾಸದಲ್ಲಿದೆ. ಇತ್ತ ಹಾಂಕಾಂಗ್ ಭಾರತಕ್ಕೆ ಕಠಿಣ ಪೈಪೋಟಿ ನೀಡುವ ವಿಶ್ವಾಸದಲ್ಲಿದ್ದು ಭಾರತದ ಬಲಿಷ್ಠ ಆಟಗಾರರ ಪಡೆಯ ಸವಾಲಿಗೆ ಯಾವ ರೀತಿಯ ಉತ್ತರ ನೀಡಲಿದೆ ಎಂಬುದಕ್ಕೆ ಉತ್ತರ ದೊರೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications