Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ICC Rankings: ವಾರ್ಷಿಕ್ ರ‍್ಯಾಂಕಿಂಗ್‌ನಲ್ಲಿ ಭಾರತದ ಪ್ರಾಬಲ್ಯ

ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ವಾರ್ಷಿಕ ಸೀಮಿತ ಓವರ್‌ಗಳ ಶ್ರೇಯಾಂಕವನ್ನು ಪ್ರಕಟಿಸಿದೆ. ಈ ಶ್ರೇಯಾಂಕದಲ್ಲಿ ಭಾರತ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಭಾರತ ತಂಡ ಏಕದಿನ ರ್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಈ ಮೂಲಕ ಜಗತ್ತಿಗೆ ತನ್ನ ಶಕ್ತಿಯನ್ನು ಪ್ರದರ್ಶಿಸಿದೆ. ಟೀಮ್ ಇಂಡಿಯಾ ಸೀಮಿತ ಓವರ್‌ಗಳ ಎರಡೂ ಸ್ವರೂಪಗಳಲ್ಲಿ ತನ್ನ ಪ್ರಾಬಲ್ಯ ಮುಂದುವರೆಸಿದೆ. ಟೀಮ್ ಇಂಡಿಯಾ ಟೆಸ್ಟ್‌ ಶ್ರೇಯಾಂಕದಲ್ಲಿ ಮೂರನೇ ಸ್ಥಾನದಲ್ಲಿದ್ದು ಆಸೀಸ್‌ ಮೊದಲ ಸ್ಥಾನದಲ್ಲಿದೆ.

ಐಸಿಸಿ ಸೋಮವಾರ ಬಿಡುಗಡೆ ಮಾಡಿದ ವಾರ್ಷಿಕ ಶ್ರೇಯಾಂಕದಲ್ಲಿ ಭಾರತ ಪುರುಷರ ತಂಡ ಏಕದಿನ ಹಾಗೂ ಟಿ20 ಶ್ರೇಯಾಂಕದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಭಾರತ ಇತ್ತೀಚಿಗೆ ತವರಿನಲ್ಲಿ ನಡೆದ ಟಿ20 ವಿಶ್ವಕಪ್‌ ಗೆದ್ದು ಇತಿಹಾಸ ನಿರ್ಮಿಸಿದ ಬ್ಲ್ಯೂ ಬಾಯ್ಸ್‌ ಚುಟುಕು ಫಾರ್ಮೆಟ್‌ನಲ್ಲಿ ಅಗ್ರಸ್ಥಾನವನ್ನು ಪಡೆದಿದೆ. ಭಾರತ ತಂಡವು 275 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೊದಲ ಸ್ಥಾನ ಪಡೆದಿದೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಇಂಗ್ಲೆಂಡ್‌ ಇದ್ದು, 262 ರೇಟಿಂಗ್ ಅಂಕ ಕಲೆ ಹಾಕಿದೆ. ಟೆಸ್ಟ್‌ನಲ್ಲಿ ನಂಬರ್ 1 ಸ್ಥಾನದಲ್ಲಿರುವ ಆಸೀಸ್‌ 258 ರೇಟಿಂಗ್ ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ICC Rankings

ಟೀಮ್ ಇಂಡಿಯಾ ಏಕದಿನ ಫಾರ್ಮೆಟ್‌ನಲ್ಲೂ ತನ್ನ ಪ್ರಾಬಲ್ಯ ಮುಂದುವರೆಸಿದೆ. ಈ ಮಾದರಿಯಲ್ಲೂ ಮೊದಲ ಸ್ಥಾನವನ್ನು ಬೇರೆ ತಂಡಗಳಿಗೆ ಬಿಟ್ಟುಕೊಟ್ಟಿಲ್ಲ. ಅಗ್ರ ಸ್ಥಾನದಲ್ಲಿರುವ ಭಾರತ 118 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ನ್ಯೂಜಿಲೆಂಡ್‌ (113) ಎರಡನೇ ಸ್ಥಾನ, ಆಸ್ಟ್ರೇಲಿಯಾ (109) ಮೂರನೇ ಸ್ಥಾನವನ್ನು ಪಡೆದಿದೆ. ಇನ್ನು ದಕ್ಷಿಣ ಆಫ್ರಿಕಾ ಒಂದು ಸ್ಥಾನ ಬಡ್ತಿ ಪಡೆದಿದ್ದು 102 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಪಡೆದಿದೆ. ಇನ್ನು ಪಾಕಿಸ್ತಾನ ಒಂದು ಅಂಕ ಕುಸಿತ ಕಂಡಿದ್ದು ಐದನೇ ಸ್ಥಾನದಲ್ಲಿದೆ. ಶ್ರೀಲಂಕಾ ಆರನೇ ಸ್ಥಾನ, ಅಫ್ಘಾನಿಸ್ತಾನ, ಇಂಗ್ಲೆಂಡ್, ಬಾಂಗ್ಲಾದೇಶ ಮತ್ತು ವೆಸ್ಟ್ ಇಂಡೀಸ್ ಕ್ರಮವಾಗಿ ಏಳನೇ, ಎಂಟನೇ, ಒಂಬತ್ತನೇ ಮತ್ತು ಹತ್ತನೇ ಸ್ಥಾನದಲ್ಲಿವೆ.

ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾಗೆ ಅಗ್ರಸ್ಥಾನ

ಏಕದಿನ ಹಾಗೂ ಟಿ20 ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನ ಪಡೆದಿರುವ ಭಾರತ, ಟೆಸ್ಟ್‌ನಲ್ಲಿ ಕೊಂಚ ಹಿನ್ನಡೆ ಅನುಭವಿಸಿದೆ. ಟೆಸ್ಟ್‌ ಮಾದರಿಯ ವಾರ್ಷಿಕ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾ ನಂಬರ್ 1 ಸ್ಥಾನದಲ್ಲಿದೆ. ಆಸೀಸ್‌ 131 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಇನ್ನು ಹಾಲಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಚಾಂಪಿಯನ್ ದಕ್ಷಿಣ ಆಫ್ರಿಕಾ 119 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದು, 104 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಇಂಗ್ಲೆಂಡ್ (102) ನಾಲ್ಕನೇ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್‌ (101) ಐದನೇ ಸ್ಥಾನದಲ್ಲಿದೆ.

Story first published: Monday, May 11, 2026, 19:51 [IST]
Other articles published on May 11, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+