ಟೆಸ್ಟ್ ಇತಿಹಾಸದಲ್ಲಿ ಚೊಚ್ಚಲ ಬಾರಿಗೆ ನಂ.1 ಸ್ಥಾನಕ್ಕೇರಿದ ನ್ಯೂಜಿಲೆಂಡ್

ದುಬೈ: 2020ರ ವರ್ಷ ಕೊನೇ ಕ್ಷಣದಲ್ಲಿರುವಾಗ ನ್ಯೂಜಿಲೆಂಟ್ ಕ್ರಿಕೆಟ್ ತಂಡ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅಪರೂಪದ ಸಾಧನೆ ತೋರಿದೆ. ಕೇನ್ ವಿಲಿಯಮ್ಸನ್ ಪಡೆ ಟೆಸ್ಟ್‌ನಲ್ಲಿ ಇದೇ ಮೊದಲ ಬಾರಿಗೆ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರಿದೆ.
ಬುಧವಾರ (ಡಿಸೆಂಬರ್ 30) ಐಸಿಸಿ ಪ್ರಕಟಿಸಿರುವ ಪುರುಷರ ವಿಭಾಗದ ನೂತನ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಸಮಾನ ರೇಟಿಂಗ್ ಪಾಯಿಂಟ್ಸ್‌ನೊಂದಿಗೆ ನಂ.1 ಸ್ಥಾನದಲ್ಲಿವೆ. ಎರಡೂ ತಂಡಗಳೂ 116 ರೇಟಿಂಗ್ ಪಾಯಿಂಟ್ಸ್ ಹೊಂದಿವೆ.
ಸದ್ಯ ಪಾಕಿಸ್ತಾನಕ್ಕೆ ಟೆಸ್ಟ್ ಸರಣಿಯಲ್ಲಿ ಆತಿಥ್ಯ ವಹಿಸಿರುವ ನ್ಯೂಜಿಲೆಂಡ್, ಪ್ರವಾಸಿಗರ ವಿರುದ್ಧ ಮೊದಲ ಟೆಸ್ಟ್‌ನಲ್ಲಿ ಭರ್ಜರಿ 101 ರನ್ ನಿಂದ ಗೆದ್ದು ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0ಯ ಮುನ್ನಡೆ ಸಾಧಿಸಿದೆ. ಈ ಪಂದ್ಯದ ಗೆಲುವು ನ್ಯೂಜಿಲೆಂಡ್ ತಂಡಕ್ಕೆ ರ್‍ಯಾಂಕಿಂಗ್‌ನಲ್ಲಿ ಮೇಲಕ್ಕೇರಲು ನೆರವು ನೀಡಿದೆ.
ಪ್ರಸ್ತುತ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಆಸ್ಟ್ರೇಲಿಯಾ (116 ಪಾಯಿಂಟ್ಸ್), ನ್ಯೂಜಿಲೆಂಡ್ (116), ಭಾರತ (114), ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಆರಂಭಿಕ ಐದು ಸ್ಥಾನಗಳಲ್ಲಿವೆ. ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ ಸ್ಟೀವ್ ಸ್ಮಿತ್, ವಿರಾಟ್ ಕೊಹ್ಲಿ ಮತ್ತು ಕೇನ್ ವಿಲಿಯಮ್ಸನ್ ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications