Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ICC Rankings: ಟೆಸ್ಟ್‌ನಲ್ಲಿ ಮತ್ತೆ ನಂ.1 ಸ್ಥಾನಕ್ಕೇರಿದ ಟೀಮ್ ಇಂಡಿಯಾ; 3 ಸ್ವರೂಪಗಳಲ್ಲಿ ಭಾರತದ್ದೇ ಏಕಚಕ್ರಾಧಿಪತ್ಯ!

ಶನಿವಾರ, ಮಾರ್ಚ್‌ 9ರಂದು ಧರ್ಮಶಾಲಾದಲ್ಲಿ ನಡೆದ ಐದನೇ ಟೆಸ್ಟ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಇಂಗ್ಲೆಂಡ್ ತಂಡವನ್ನು ಮಣಿಸಿ ಐದು ಪಂದ್ಯಗಳ ಸರಣಿಯನ್ನು 4-1 ಅಂತರದಿಂದ ಗೆದ್ದಿತು. ಇದಾದ ಒಂದು ದಿನದ ಬಳಿಕ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಐಸಿಸಿ ತಂಡಗಳ ಟೆಸ್ಟ್ ಶ್ರೇಯಾಂಕದಲ್ಲಿ ಮರಳಿ ಅಗ್ರಸ್ಥಾನ ಪಡೆದುಕೊಂಡಿದೆ.

ಭಾನುವಾರ, ಮಾರ್ಚ್ 10ರಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿದ ಇತ್ತೀಚಿನ ಟೆಸ್ಟ್ ಶ್ರೇಯಾಂಕದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದೆ.

ಈಗಾಗಲೇ 2023-25ರ ಚಕ್ರದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ತಂಡ, ಇದೀಗ ಕ್ರಿಕೆಟ್‌ನ ಎಲ್ಲಾ ಮೂರು ಸ್ವರೂಪಗಳ ಐಸಿಸಿ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿ ಪ್ರಾಬಲ್ಯ ಸಾಧಿಸಿದೆ.

ICC Rankings Team India Jumps To Top Spot Again in Test Ranking India Is No 1 Team in All 3 Formats

ಪ್ರಸ್ತುತ ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್‌ ಪಂದ್ಯದ ಫಲಿತಾಂಶವನ್ನು ಲೆಕ್ಕಿಸದೆ ರೋಹಿತ್ ಶರ್ಮಾ ಪಡೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಉಳಿಯುತ್ತದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವಿಜೇತ ಆಸ್ಟ್ರೇಲಿಯಾ ತಂಡವು ವೆಲ್ಲಿಂಗ್ಟನ್‌ನಲ್ಲಿ 172 ರನ್‌ಗಳ ಗೆಲುವಿನ ನಂತರ, ಎರಡು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.

122 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಭಾರತ ತಂಡ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾ ತಂಡಕ್ಕಿಂತ ಐದು ಅಂಕಗಳ ಮುಂದಿದ್ದರೆ, ಇಂಗ್ಲೆಂಡ್ ತಂಡ 111 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಏಕದಿನ ಪಂದ್ಯಗಳಲ್ಲಿ ಭಾರತ ತಂಡ 121 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದರೆ, ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ತಂಡ 118 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ಇನ್ನು ಟಿ20 ಕ್ರಿಕೆಟ್‌ನಲ್ಲಿ ಭಾರತ ತಂಡ 266 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದು, ಇಂಗ್ಲೆಂಡ್ 256 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ICC Rankings Team India Jumps To Top Spot Again in Test Ranking India Is No 1 Team in All 3 Formats

ಭಾರತ ತಂಡವು ಸೆಪ್ಟೆಂಬರ್ 2023ರಿಂದ ಜನವರಿ 2024ರವರೆಗೆ ವಿಶ್ವದ ನಂ.1 ಟೆಸ್ಟ್ ತಂಡವಾಗಿತ್ತು. ಆದರೆ ದಕ್ಷಿಣ ಆಫ್ರಿಕಾ ವಿರುದ್ಧ 1-1 ಅಂತರದಲ್ಲಿ ಸರಣಿ ಡ್ರಾ ನಂತರ ಎರಡನೇ ಸ್ಥಾನಕ್ಕೆ ಕುಸಿದಿತ್ತು.

ಇದೇ ವೇಳೆ ತವರಿನಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್‌ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಆಸ್ಟ್ರೇಲಿಯಾ ತಂಡ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಭಾರತವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿತ್ತು. ಇದೀಗ ಭಾರತದ ಗೆಲುವಿನಿಂದ ಅಗ್ರಸ್ಥಾನ ಬಿಟ್ಟುಕೊಟ್ಟಿದೆ.

ಇತ್ತೀಚಿಗೆ ಮುಕ್ತಾಯಗೊಂಡ ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಆತಿಥೇಯ ಭಾರತ ತಂಡವು ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ 28 ರನ್‌ಗಳಿಂದ ಸೋತಿತ್ತು. ಆದರೆ ಟೀಮ್ ಇಂಡಿಯಾ ನಂತರದ ನಾಲ್ಕು ಟೆಸ್ಟ್‌ ಪಂದ್ಯಗಳನ್ನು ಗೆಲ್ಲಲು ಅತ್ಯುತ್ತಮ ಶೈಲಿಯಲ್ಲಿ ಪುಟಿದೆದ್ದಿತು.

ವಿಶಾಖಪಟ್ಟಣ, ರಾಜ್‌ಕೋಟ್, ರಾಂಚಿ ಮತ್ತು ಧರ್ಮಶಾಲಾದಲ್ಲಿನ ಗೆಲುವುಗಳು ಭಾರತ ತಂಡವು ಐಸಿಸಿ ಟೆಸ್ಟ್ ತಂಡಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನವನ್ನು ಮರಳಿ ಪಡೆಯಲು ಸಹಾಯ ಮಾಡಿದವು.

Story first published: Sunday, March 10, 2024, 14:59 [IST]
Other articles published on Mar 10, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+