Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

T20I Rankings: ಟಾಪ್ 10ನಲ್ಲಿ ಇಬ್ಬರು ಭಾರತೀಯರಿಗೆ ಸ್ಥಾನ

ICC Rankings: Virat Kohli remains static at 5th in T20I rankings

ದುಬೈ: ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ಆರಂಭಿಕ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟಿ20ಐ ರ್‍ಯಾಂಕಿಂಗ್‌ನಲ್ಲಿ ಟಾಪ್ ಟೆನ್‌ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಕೊಹ್ಲಿ 5ನೇ ಸ್ಥಾನದಲ್ಲಿದ್ದರೆ, ರಾಹುಲ್ 7ನೇ ಸ್ಥಾನ ಪಡೆದುಕೊಂಡಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ತಂಡದ, 28ರ ಹರೆಯದ ಮೊಹಮ್ಮದ್ ರಿಝ್ವಾನ್ ಕೂಡ ಈ ಸಾರಿ ಟಾಪ್‌ ಟೆನ್‌ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಆರಂಭಿಕ ಬ್ಯಾಟ್ಸ್‌ಮನ್‌ ಕಮ್ ವಿಕೆಟ್ ಕೀಪರ್ ಆಗಿರುವ ರಿಝ್ವಾನ್ ಜಿಂಬಾಬ್ವೆ ವಿರುದ್ಧದ ಪ್ರಥಮ ಮತ್ತು ತೃತೀಯ ಟಿ20 ಪಂದ್ಯದಲ್ಲಿ ಕ್ರಮವಾಗಿ 82, 91 ರನ್ ಬಾರಿಸಿದ್ದರು. ಅದೂ ಕೂಡ ಅಜೇಯ ಬ್ಯಾಟಿಂಗ್‌ ಪ್ರದರ್ಶಿಸಿದ್ದರು. ಇದೇ ಕಾರಣಕ್ಕೆ ರಿಝ್ವಾನ್ ರ್‍ಯಾಂಕಿಂಗ್‌ನಲ್ಲಿ ಜಿಗಿತ ಕಂಡಿದ್ದಾರೆ.

ಪಾಕ್ ನಾಯಕ ಬಾಬರ್ ಅಝಮ್ ಟಿ20 ರ್‍ಯಾಂಕಿಂಗ್‌ನಲ್ಲಿ ತೃತೀಯ ಸ್ಥಾನದಲ್ಲಿದ್ದರೆ, ರಿಝ್ವಾನ್ 10ನೇ ಸ್ಥಾನದಲ್ಲಿದ್ದಾರೆ. ಅಗ್ರ ಸ್ಥಾನದಲ್ಲಿ ಇಂಗ್ಲೆಂಡ್‌ನ ಡೇವಿಡ್ ಮಲಾನ್, ದ್ವಿತೀಯ ಸ್ಥಾನದಲ್ಲಿ ಆಸ್ಟ್ರೇಲಿಯಾದ ಆ್ಯರನ್ ಫಿಂಚ್, 4ನೇ ಸ್ಥಾನದಲ್ಲಿ ನ್ಯೂಜಿಲೆಂಡ್‌ ಡೆವೊನ್ ಕಾನ್ವೇ ಇದ್ದಾರೆ.

ಟಿ20 ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ದಕ್ಷಿಣ ಆಫ್ರಿಕಾದ ತಬ್ರೈಜ್ ಸಂಶಿ, ಅಫ್ಘಾನಿಸ್ತಾನ ರಶೀದ್ ಖಾನ್ ಮತ್ತು ಆಸ್ಟ್ರೇಲಿಯಾದ ಆ್ಯಷ್ಟನ್ ಅಗರ್ ಕ್ರಮವಾಗಿ ಅಗ್ರ ಮೂರು ಸ್ಥಾನಗಳಲ್ಲಿದ್ದಾರೆ. ಆಲ್ ರೌಂಡರ್‌ಗಳಲ್ಲಿ ಅಫ್ಘಾನ್‌ನ ಮೊಹಮ್ಮದ್ ನಬಿ, ಬಾಂಗ್ಲಾದ ಶಕೀಬ್ ಅಲ್ ಹಸನ್, ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಮೊದಲ ಮೂರು ಸ್ಥಾನಗಳಲ್ಲಿದ್ದಾರೆ. ದೇಶಗಳಲ್ಲಿ ಭಾರತ, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಆರಂಭಿಕ ಸ್ಥಾನಗಳಲ್ಲಿವೆ.

Story first published: Thursday, April 29, 2021, 9:31 [IST]
Other articles published on Apr 29, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+