Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WTC ಫೈನಲ್ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿಯ ಸ್ಟೈಲಿಶ್ ಪೋಸ್ಟರ್ ಬಿಡುಗಡೆಗೊಳಿಸಿದ ಐಸಿಸಿ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಎರಡನೇ ಬಾರಿಗೆ ಕಾಣಿಸಿಕೊಳ್ಳಲು ಟೀಮ್ ಇಂಡಿಯಾ ಸಜ್ಜಾಗಿದೆ. ಬಲಿಷ್ಠ ತಂಡವಾದ ಆಸ್ಟ್ರೇಲಿಯಾ ವಿರುದ್ಧ ಈ ಬಾರಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಸೆಣೆಸಾಡಲಿದ್ದು ಚಾಂಪಿಯನ್ ಪಟ್ಟಕ್ಕಾಗಿ ತೀವ್ರ ಪೈಪೋಟಿ ನಡೆಸಲಿದೆ. ಈ ಬಹುನಿರೀಕ್ಷಿತ ಪಂದ್ಯ ಜೂನ್ 7 ಬುಧವಾರ ನಡೆಯಲಿದ್ದು ಲಂಡನ್‌ನ ಓವಲ್ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ.

ಈ ಪೈಪೋಟಿಯ ಪಂದ್ಯಕ್ಕೆ ವಿಶ್ವ ಕ್ರಿಕೆಟ್‌ನ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪಂದ್ಯದ ಆರಂಭಕ್ಕೂ ಒಂದು ದಿನ ಮುನ್ನ ಟೀಮ್ ಇಂಡಿಯಾದ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿಯ ವರ್ಣರಂಜಿತ ಪೋಸ್ಟರ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ICC shared a stunning poster of Virat Kohli in advance of the WTC 2023 final

"ವಿರಾಟ್ ಕೊಹ್ಲಿ WTC 2023 ಫೈನಲ್‌ನ ಸಮಯದಲ್ಲಿ ಆರ್ಭಟಿಸುವ ಫಾರ್ಮ್‌ಗೆ ಮರಳಿದ್ದಾರೆ" ಎಂದು ಈ ಪೋಸ್ಟರ್‌ನಲ್ಲಿ ಬರೆದುಕೊಂಡು ಐಸಿಸಿ ಹಂಚಿಕೊಂಡಿದೆ. ಸುದೀರ್ಖ ಕಾಲದಿಂದ ಫಾರ್ಮ್ ಕಳೆದುಕೊಮಡಿದ್ದ ವಿರಾಟ್ ಕೊಹ್ಲಿ ಕಳೆದ ವರ್ಷದಲ್ಲಿ ಎಲ್ಲಾ ಮಾದರಿಯಲ್ಲಿಯೂ ಅದ್ಭುತ ಫಾರ್ಮ್‌ಗೆ ಮರಳಿದರು. ಪ್ರಸ್ತುತ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದು ಸ್ಥಿರ ಆಟದ ಮೂಲಕ ತಂಡಕ್ಕೆ ನೆರವಾಗುತ್ತಿದ್ದಾರೆ.

ಬಾರ್ಡರ್-ಗವಾಸ್ಕರ್ ಸರಣಿಯ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಮೋಘ ಶತಕ ಬಾರಿಸಿದ್ದ ವಿರಾಟ್ ಕೊಹ್ಲಿ ಬಳಿಕ ಐಪಿಎಲ್‌ನಲ್ಲಿಯೂ ತಮ್ಮ ಹಿಂದಿನ ಫಾರ್ಮ್‌ಗೆ ಮರಳಿದ್ದರು. ಐಪಿಎಲ್‌ನಲ್ಲಿ ಆರ್‌ಸಿಬಿ ಪರ ರನ್‌ಮಳೆ ಹರಿಸಿದ ಕೊಹ್ಲಿ ಸತತ ಎರಡು ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಇದೀಗ ಅದೇ ಫಾರ್ಮ್‌ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯವನ್ನಾಡಲು ಸಜ್ಜಾಗಿದ್ದಾರೆ.

ವಿಶ್ವ ಕ್ರಿಕೆಟ್ ಕಂಡ ಅತ್ಯುತ್ತಮ ಆಟಗಾರರ ಪೈಕಿ ವಿರಾಟ್ ಕೊಹ್ಲಿ ಕೂಡ ಒಬ್ಬರೆನಿಸಿಕೊಂಡಿದ್ದು ಟೆಸ್ಟ್ ಮಾದರಿಯಲ್ಲಿಯೂ ಅದ್ಭುತ ದಾಖಲೆ ಹೊಂದಿದ್ದಾರೆ. ಇನ್ನು ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ವಿರಾಟ್ ಕೊಹ್ಲಿ ಅಮೋಘ ಆಟವನ್ನಾಡುವ ಕೊಹ್ಲಿ ಅದ್ಭುತ ಯಶಸ್ಸು ಸಾಧಿಸಿದ್ದಾರೆ. ದೆಹಲಿ ಮೂಲದ ಈ ಆಟಗಾರ ಆಸ್ಟ್ರೇಲಿಯಾ ವಿರುದ್ಧ 24 ಟೆಸ್ಟ್ ಪಂದ್ಯಗಳನ್ನು ಆಡಿದ್ದು 8 ಶತಕಗಳ ಸಹಿತ 48.26ರ ಸರಾಸರಿಯಲ್ಲಿ 1979 ರನ್‌ಗಳನ್ನು ಗಳಿಸಿದ್ದಾರೆ.

ಟೀಮ್ ಇಂಡಿಯಾ ಸಂಪೂರ್ಣ ತಂಡ: ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಯ್‌ದೇವ್ ಉನಾದ್ಕಟ್

ಆಸ್ಟ್ರೇಲಿಯಾ ಸಂಪೂರ್ಣ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಟಾಡ್ ಮರ್ಫಿ, ಮೈಕೆಲ್ ನೆಸರ್, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್

Story first published: Tuesday, June 6, 2023, 21:45 [IST]
Other articles published on Jun 6, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+