ICC Champions Trophy 2025: ಪಾಕಿಸ್ತಾನ ಕ್ರಿಕೆಟ್ ಬೋರ್ಡ್‌ಗೆ ಶಾಕ್ ಕೊಟ್ಟ ಐಸಿಸಿ!
ಬಹು ನಿರೀಕ್ಷಿತ 2025ರ ಐಸಿಸಿ ಚಾಂಪಿಯನ್ ಟ್ರೋಫಿ ಟೂರ್ನಿಯನ್ನು ನಡೆಸಲು ಪಾಕಿಸ್ತಾನ ಎಲ್ಲಾ ರೀತಿಯ ಸಿದ್ಧತ ಕಾರ್ಯಗಳನ್ನು ಕೈಗೊಂಡಿದೆ. ಇದರ ನಡುವೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪಾಕಿಸ್ತಾನಕ್ಕೆ ಬಿಗ್ ಶಾಕ್ ಕೊಟ್ಟಿದೆ. ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (ಪಿಸಿಬಿ) ಮತ್ತು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ನಡುವೆ ಚಾಂಪಿಯನ್ ಟ್ರೋಫಿ ವೇಳಾಪಟ್ಟಿ ಬಗ್ಗೆ ವಿವಾದ ನಡೆಯುತ್ತಿದೆ. ಹೀಗಾಗಿ ಐಸಿಸಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ನವೆಂಬರ್ 11 ರಂದು ಲಾಹೋರ್‌ನಲ್ಲಿ ನಡೆಯಲಿರುವ ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ಸಂಬಂಧಿಸಿದ ಪ್ರಮುಖ ಕಾರ್ಯಕ್ರಮವನ್ನು ರದ್ದುಗೊಳಿಸಲು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನಿರ್ಧರಿಸಿದೆ. ಚಾಂಪಿಯನ್ ಟ್ರೋಫಿ ವೇಳಾಪಟ್ಟಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಮತ್ತು ಭಾರತ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯದಿಂದಾಗಿ ಐಸಿಸಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

2025 ಫೆಬ್ರವರಿ 19 ರಿಂದ ಮಾರ್ಚ್ 19 ರವರೆಗೆ ಚಾಂಪಿಯನ್ ಟ್ರೋಫಿ ಟೂರ್ನಿ ನಡೆಯಲಿದೆ. ಈ ಐಸಿಸಿ ಟೂರ್ನಿಯಲ್ಲಿ ಎಂಟು ತಂಡಗಳ ನಡುವೆ ಏಕದಿನ ಮಾದರಿಯಲ್ಲಿ ಟೂರ್ನಿಯನ್ನ ನಡೆಸಲು ಎಲ್ಲ ರೀತಿಯ ಸಿದ್ಧತಾ ಕಾರ್ಯಗಳನ್ನು ಪಾಕಿಸ್ತಾನ ಕೈಗೊಂಡಿದೆ. ಆದರೆ, ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ ಟ್ರೋಪಿಯಲ್ಲಿ ಟೀಮ್ ಇಂಡಿಯಾ ಭಾಗವಹಿಸುವ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ.
'ಚಾಂಪಿಯನ್ ಟ್ರೋಫಿ ಟೂರ್ನಿಯ ವೇಳಾಪಟ್ಟಿ ದೃಢಪಟ್ಟಿಲ್ಲ. ನಾವು ಇನ್ನೂ ಚಾಂಪಿಯನ್ಸ್ ಟ್ರೋಫಿಯ ವೇಳಾಪಟ್ಟಿಯನ್ನು ಆತಿಥೇಯ ಮತ್ತು ಭಾಗವಹಿಸುವ ದೇಶಗಳೊಂದಿಗೆ ಚರ್ಚಿಸುತ್ತಿದ್ದೇವೆ. ಒಮ್ಮೆ ಖಚಿತಪಡಿಸಿದ ನಂತರ ನಾವು ಅದನ್ನು ಅಧಿಕೃತವಾಗಿ ಪ್ರಕಟಿಸುತ್ತೇವೆ' ಎಂದು ಐಸಿಸಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗಾಗಿ ಭಾರತ ತಂಡವು ಪಾಕಿಸ್ತಾನಕ್ಕೆ ಹೋಗುವುದು ಬಹುತೇಕ ಅನುಮಾನ. ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯಗಳನ್ನು ಲಾಹೋರ್, ರಾವಲ್ಪಿಂಡಿ ಮತ್ತು ಕರಾಚಿ ಸೇರಿದಂತೆ ಪ್ರಮುಖ ನಗರಗಳಲ್ಲಿ ನಡೆಸಲು ಪಾಕಿಸ್ತಾನ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಆದರೆ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟೀಮ್ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಸರ್ಕಾರದ ಅನುಮತಿ ಪಡೆದಿಲ್ಲ ಎಂದು ಐಸಿಸಿಗೆ ಮಾಹಿತಿ ನೀಡಿದ್ದು, ಹೀಗಾಗಿ ಟೂರ್ನಿಗೆ ಹೈಬ್ರಿಡ್ ಮಾದರಿಯ ಸಾಧ್ಯತೆ ಹೆಚ್ಚುತ್ತಿದೆ. ಈ ಮೂಲಕ ಕೆಲವು ಪಂದ್ಯಗಳು, ವಿಶೇಷವಾಗಿ ಭಾರತದ ಪಂದ್ಯಗಳು ಯುಎಇಯಲ್ಲಿ ನಡೆಯಲಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications