ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ಶ್ರೇಯಾಂಕ: ಭರ್ಜರಿ ಶತಕದ ಬಳಿಕ ರ‍್ಯಾಂಕಿಂಗ್ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಭಾರೀ ಏರಿಕೆ

ICC T20 Ranking: After maiden t20I century against Afghanistan Virat Kohli jumps to No.15 in T20I rankings

ಏಷ್ಯಾ ಕಪ್‌ನಲ್ಲಿ ಟೀಮ್ ಇಂಡಿಯಾ ಪರವಾಗಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಮಾಜಿ ನಾಯಕ ವಿರಾಟ್ ಕೊಹ್ಲಿ ಫಾರ್ಮ್ ಕಂಡುಕೊಂಡಿದ್ದಾರೆ. ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಿರುವುದು ಟೀಮ್ ಇಂಡಿಯಾ ಪಾಲಿಗೆ ಸಕಾರಾತ್ಮಕ ಸಂಗತಿಯಾಗಿದೆ. ಟಿ20 ವಿಶ್ವಕಪ್‌ ಸನಿಹದಲ್ಲಿರುವಾಗ ಕೊಹ್ಲಿ ಮತ್ತೆ ಫಾರ್ಮ್ ಕಂಡುಕೊಂಡಿರುವುದು ಅಭಿಮಾನಿಗಳಿಗೂ ಹರ್ಷ ಹೆಚ್ಚಿಸಿದೆ. ಈ ಸಂದರ್ಭದಲ್ಲಿ ಇದೀಗ ಐಸಿಸಿ ಟಿ20 ಮಾದರಿಯ ಶ್ರೇಯಾಂಕ ಪಟ್ಟಿ ಬಿಡುಗಡೆಗೊಳಿಸಿದ್ದು ಇದರಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಏರಿಕೆ ಕಂಡಿದ್ದಾರೆ.

ಏಷ್ಯಾ ಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಎರಡು ಅರ್ಧ ಶತಕ ಹಾಗೂ ಒಂದು ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಈ ಬಾರಿಯ ಏಷ್ಯಾ ಕಪ್ ಟೂರ್ನಿಯಲ್ಲಿ ಎರಡನೇ ಅತಿ ಹೆಚ್ಚು ರನ್‌ಗಳಿಸಿದ ಆಟಗಾರ ಎನಿಸಿದ್ದಾರೆ. ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಟಿ20 ಮಾದರಿಯಲ್ಲಿ ತಮ್ಮ ಚೊಚ್ಚಲ ಶತಕವನ್ನು ಕೂಡ ಬಾರಿಸಿದ್ದ ವಿರಾಟ್ ಕೊಹ್ಲಿ ಅದಕ್ಕೂ ಮುನ್ನ ಹಾಂಕಾಂಗ್ ಹಾಗೂ ಪಾಕಿಸ್ಥಾನದ ವಿರುದ್ಧ ಅರ್ಧ ಶತಕ ಬಾರಿಸಿದ್ದರು. ಈ ಪ್ರದರ್ಶನ ಶ್ರೇಯಾಂಕಪಟ್ಟಿಯ ಮೇಲೆ ಪರಿಣಾಮ ಬಿದ್ದಿದೆ.

ಕೆಲವರು ಒಮ್ಮೆ ಮಾತ್ರ ನಿವೃತ್ತಿಯಾಗುತ್ತಾರೆ: ಕೊಹ್ಲಿಗೆ ನಿವೃತ್ತಿ ಸಲಹೆ ನೀಡಿದ ಅಫ್ರಿದಿಗೆ ಅಮಿತ್ ಮಿಶ್ರಾ ಪಂಚ್!ಕೆಲವರು ಒಮ್ಮೆ ಮಾತ್ರ ನಿವೃತ್ತಿಯಾಗುತ್ತಾರೆ: ಕೊಹ್ಲಿಗೆ ನಿವೃತ್ತಿ ಸಲಹೆ ನೀಡಿದ ಅಫ್ರಿದಿಗೆ ಅಮಿತ್ ಮಿಶ್ರಾ ಪಂಚ್!

14 ಸ್ಥಾನಗಳ ಏರಿಕೆ ಕಂಡ ಕೊಹ್ಲಿ

14 ಸ್ಥಾನಗಳ ಏರಿಕೆ ಕಂಡ ಕೊಹ್ಲಿ

ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಇತ್ತೀಚಿನ ದಿನಗಳಲ್ಲಿ ಕಳಪೆ ಪ್ರದರ್ಶನದಿಂದಾಗಿ ಶ್ರೇಯಾಂಕಪಟ್ಟಿಯಲ್ಲಿ ಸತತವಾಗಿ ಹಿನ್ನಡೆ ಅನುಭವಿಸುತ್ತಾ ಸಾಗಿದ್ದರು. ಆದರೆ ಇದೀಗ ಭರ್ಜರಿ ಪ್ರದರ್ಶನದ ಮೂಲಕ ಫಾರ್ಮ್ ಕಂಡುಕೊಂಡಿರುವ ಕೊಹ್ಲಿ 14 ಅಂಕಗಳ ಏರಿಕೆ ಕಂಡಿದ್ದಾರೆ. ಈ ಮೂಲಕ 15ನೇ ಶ್ರೇಯಾಂಕವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೂ ಮುನ್ನ ಅವರು 29ನೇ ರ್ಶೇಯಾಂಕಕ್ಕೆ ಕುಸಿದಿದ್ದರು.

ಏರಿಕೆ ಕಂಡ ಶ್ರೀಲಂಕಾ ಸ್ಪಿನ್ ಆಲ್‌ರೌಂಡರ್ ಹಸರಂಗಾ

ಏರಿಕೆ ಕಂಡ ಶ್ರೀಲಂಕಾ ಸ್ಪಿನ್ ಆಲ್‌ರೌಂಡರ್ ಹಸರಂಗಾ

ಇನ್ನು ಏಷ್ಯಾ ಕಪ್ ಟೂರ್ನಿಯಲ್ಲಿ ಸ್ಪಿನ್ ಬೌಲಿಂಗ್ ದಾಳಿಯ ಜೊತೆಗೆ ಫೈನಲ್‌ನಲ್ಲಿ ನೀಡಿದ ಪರಿಣಾಮಕಾರಿ ಬ್ಯಾಟಿಂಗ್ ಪ್ರದರ್ಶನದಿಂದಾಗಿ ವನಿಂದು ಹಸರಂಗ ಬೌಲಿಂಗ್ ಹಾಗೂ ಆಲ್‌ರೌಂಡರ್ ಪಟ್ಟಿಯಲ್ಲಿ ಏರಿಕೆ ಕಂಡಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ಮೂರು ಸ್ಥಾನಗಳ ಏರಿಕೆ ಕಂಡಿರುವ ಹಸರಂಗಾ 6ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇನ್ನು ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಏಳು ಸ್ಥಾನಗಳ ಏರಿಕೆ ಕಮಡಿದ್ದು ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.ಏಷ್ಯಾ ಕಪ್ ಟೂರ್ನಿಯಲ್ಲಿ ಹಸರಂಗಾ ಟೂರ್ನಿಯ ಶ್ರೇಷ್ಠ ಆಟಗಾರ ಎನಿಸಿಕೊಂಡಿದ್ದಾರೆ.

ಆಲ್‌ರೌಂಡ್‌ಗಳ ಪಟ್ಟಿಯಲ್ಲಿ ಮತ್ತೆ ಶಕೀಬ್‌ಗೆ ಅಗ್ರಸ್ಥಾನ

ಆಲ್‌ರೌಂಡ್‌ಗಳ ಪಟ್ಟಿಯಲ್ಲಿ ಮತ್ತೆ ಶಕೀಬ್‌ಗೆ ಅಗ್ರಸ್ಥಾನ

ಇನ್ನು ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ಅಫ್ಘಾನಿಸ್ತಾನ ನಾಯಕನನ್ನು ಮತ್ತೆ ಹಿಂದಿಕ್ಕಿದ್ದಾರೆ. ಈ ಮೂಲಕ ಅಗ್ರ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಶಕೀಬ್ ಅಲ್ ಹಸನ್ ನೇತೃತ್ವದಲ್ಲಿ ಬಾಂಗ್ಲಾದೇಶ ತಂಡ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದೆಯಾದರೂ ಶಕೀಬ್ ಪ್ರದರ್ಶನ ಉತ್ತಮವಾಗಿತ್ತು. ಆದರೆ ಬಾಂಗ್ಲಾದೇಶ ಟೂರ್ನಿಯಲ್ಲಿ ಒಂದೂ ಪಂದ್ಯ ಗೆಲ್ಲದೆ ಹೀನಾಯ ಸೋಲು ಅನುಭವಿಸಿದೆ.

ವಿಶ್ವಕಪ್‌ನಲ್ಲಿ ಕೊಹ್ಲಿ ಮೇಲೆ ಹೆಚ್ಚಿದ ನಿರೀಕ್ಷೆ

ವಿಶ್ವಕಪ್‌ನಲ್ಲಿ ಕೊಹ್ಲಿ ಮೇಲೆ ಹೆಚ್ಚಿದ ನಿರೀಕ್ಷೆ

ಇನ್ನು ಏಷ್ಯಾ ಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರವಾಗಿ ವಿರಾಟ್ ಕೊಹ್ಲಿಯಿಂದ ಅದ್ಭುತ ಪ್ರದರ್ಶನ ಬಂದ ಬಳಿಕ ಭಾರತೀಯ ಅಭಿಮಾನಿಗಳು ನಿರಾಳವಾಗಿದ್ದಾರೆ. ವಿರಾಟ್ ಕೊಹ್ಲಿ ತಮ್ಮ ಹಳೆಯ ಲಯಕ್ಕೆ ಮರಳಿರುವ ಕಾರಣದಿಂದಾಗಿ ಕೊಹ್ಲಿ ಬ್ಯಾಟ್‌ನಿಂದ ರನ್ ಹರಿದುಬರುವ ನಿರೀಕ್ಷೆಗಳಿದೆ. ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಭಾರತದ ಅಗ್ರ ಕ್ರಮಾಂಕದಲ್ಲಿ ಭರ್ಜರಿ ಪ್ರದರ್ಶನ ನೀಡುವ ವಿಶ್ವಾಸವಿದೆ. ಕೆಲ ಕ್ರಿಕೆಟ್ ಅಭಿಮಾನಿಗಳು ವಿರಾಟ್ ಕೊಹ್ಲಿ ಆರಂಭಿಕರಾಗಿ ವಿಶ್ವಕಪ್‌ನಲ್ಲಿ ಕಣಕ್ಕಿಳಿಯಲಿ ಎಂಬ ಅಭಿಪ್ರಾಯವನ್ನು ಕೂಡ ವ್ಯಕ್ತಪಡಿಸುತ್ತಿದ್ದಾರೆ.

Story first published: Wednesday, September 14, 2022, 16:05 [IST]
Other articles published on Sep 14, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X