ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ICC T20 Ranking: ವೃತ್ತಿಜೀವನದ ಅತ್ಯುತ್ತಮ ರೇಟಿಂಗ್ ಗಳಿಸಿದ ಸೂರ್ಯಕುಮಾರ್ ಯಾದವ್

ICC T20 Ranking: Indias Star Batter Suryakumar Yadav Gets Career Best T20 Ratings

ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಐಸಿಸಿ ಟಿ20 ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ ತಮ್ಮ ಅಗ್ರಸ್ಥಾನವನ್ನು ಮತ್ತಷ್ಟು ಬಲಪಡಿಸಿಕೊಂಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಮೌಂಟ್ ಮೌಂಗನುಯಿಯಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅಜೇಯ 111 ರನ್ ಗಳಿಸಿ ರ್‍ಯಾಂಕಿಂಗ್‌ನಲ್ಲಿ ದೊಡ್ಡ ಅಂಕಗಳನ್ನು ಗಳಿಸಿದರು. ಸೂರ್ಯಕುಮಾರ್ ಯಾದವ್ ಇದೀಗ 31 ರೇಟಿಂಗ್ ಪಾಯಿಂಟ್‌ಗಳನ್ನು ಗಳಿಸಿ ಜೀವನಶ್ರೇಷ್ಟ 890 ಅಂಕಗಳಿಗೆ ಜಿಗಿದಿದ್ದಾರೆ.

ಟಿ20 ನಾಯಕತ್ವ ಬೆಂಬಲಿಸಿದ ರವಿಶಾಸ್ತ್ರಿ, ಗವಾಸ್ಕರ್‌ಗೆ ಹಾರ್ದಿಕ್ ಪಾಂಡ್ಯ ಕೊಟ್ಟ ಪ್ರತಿಕ್ರಿಯೆ!ಟಿ20 ನಾಯಕತ್ವ ಬೆಂಬಲಿಸಿದ ರವಿಶಾಸ್ತ್ರಿ, ಗವಾಸ್ಕರ್‌ಗೆ ಹಾರ್ದಿಕ್ ಪಾಂಡ್ಯ ಕೊಟ್ಟ ಪ್ರತಿಕ್ರಿಯೆ!

ಇದು ಬ್ಯಾಟಿಂಗ್ ರ್‍ಯಾಂಕಿಂಗ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿರುವ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಮತ್ತು ಸೂರ್ಯಕುಮಾರ್ ನಡುವಿನ ಅಂತರವನ್ನು ಇನ್ನಷ್ಟು ಹೆಚ್ಚಿಸಿದೆ.

ರ್‍ಯಾಂಕಿಂಗ್‌ನಲ್ಲಿ 2ನೇ ಸ್ಥಾನಕ್ಕೆ ಏರಿದ ಡೆವೊನ್ ಕಾನ್ವೆ

ರ್‍ಯಾಂಕಿಂಗ್‌ನಲ್ಲಿ 2ನೇ ಸ್ಥಾನಕ್ಕೆ ಏರಿದ ಡೆವೊನ್ ಕಾನ್ವೆ

ನ್ಯೂಜಿಲೆಂಡ್‌ನ ಆರಂಭಿಕ ಆಟಗಾರ ಡೆವೊನ್ ಕಾನ್ವೆ ನೇಪಿಯರ್‌ನಲ್ಲಿ ಭಾರತ ವಿರುದ್ಧದ ಟೈ ಆದ ಅಂತಿಮ ಟಿ20 ಪಂದ್ಯದಲ್ಲಿ 59 ರನ್ ಗಳಿಸುವ ಮೂಲಕ ಅವರು ಇತ್ತೀಚಿನ ರ್‍ಯಾಂಕಿಂಗ್‌ನಲ್ಲಿ 2ನೇ ಸ್ಥಾನಕ್ಕೆ ಏರಿದ್ದಾರೆ. ಇದೇ ವೇಳೆ ಪಾಕಿಸ್ತಾನದ ನಾಯಕ ಬಾಬರ್ ಅಜಂ ಅವರು ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇನ್ನು ಭಾರತದ ಪರ ನಾಯಕ ಹಾರ್ದಿಕ್ ಪಾಂಡ್ಯ ಅಂತಿಮ ಪಂದ್ಯದಲ್ಲಿ ಅಜೇಯ 30 ರನ್ ಗಳಿಸಿದ್ದು, ಬ್ಯಾಟರ್‌ಗಳ ಶ್ರೇಯಾಂಕದಲ್ಲಿ ಜಂಟಿ 50ನೇ ಸ್ಥಾನವನ್ನು ತಲುಪಿದೆ.

ಭುವನೇಶ್ವರ್ ಕುಮಾರ್ ಎರಡು ಸ್ಥಾನ ಮೇಲಕ್ಕೇರಿದ್ದಾರೆ

ಭುವನೇಶ್ವರ್ ಕುಮಾರ್ ಎರಡು ಸ್ಥಾನ ಮೇಲಕ್ಕೇರಿದ್ದಾರೆ

ಬೌಲರ್‌ಗಳ ವಿಭಾಗದಲ್ಲಿ ಭುವನೇಶ್ವರ್ ಕುಮಾರ್ ಎರಡು ಸ್ಥಾನ ಮೇಲಕ್ಕೇರಿ 11ನೇ ಸ್ಥಾನಕ್ಕೆ ಏರಿಕೆ ಕಂಡಿದ್ದರೆ, ಅರ್ಶ್‌ದೀಪ್ ಸಿಂಗ್ ಒಂದು ಸ್ಥಾನ ಮೇಲೇರಿ 21ನೇ ಸ್ಥಾನಕ್ಕೆ ತಲುಪಿದ್ದಾರೆ. ಇನ್ನು ಯುಜ್ವೇಂದ್ರ ಚಾಹಲ್ 8 ಸ್ಥಾನ ಏರಿಕೆ ಕಂಡು 40ನೇ ಸ್ಥಾನದಲ್ಲಿದ್ದಾರೆ.

ಟಿ20 ಬ್ಯಾಟರ್‌ಗಳ ರ್‍ಯಾಂಕಿಂಗ್‌ನಲ್ಲಿ ಇತ್ತೀಚಿನ ಅಪ್‌ಡೇಟ್ ನಂತರ ಭಾರತದ ಅಭಿಮಾನಿಗಳು ಪಾಕಿಸ್ತಾನದ ನಾಯಕ ಬಾಬರ್ ಅಜಂ ಅವರ ಟ್ವಿಟ್ಟರ್‌ನಲ್ಲಿ 'SKY' ಎಂಬ ಶೀರ್ಷಿಕೆಯೊಂದಿಗೆ ಚಿತ್ರವನ್ನು ಪೋಸ್ಟ್ ಮಾಡಿ ಬಾಬರ್‌ ಅಜಂರನ್ನು ಟ್ರೋಲ್ ಮಾಡಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ 239 ರನ್ ಬಾರಿಸಿದ ಸೂರ್ಯಕುಮಾರ್

ಟಿ20 ವಿಶ್ವಕಪ್‌ನಲ್ಲಿ 239 ರನ್ ಬಾರಿಸಿದ ಸೂರ್ಯಕುಮಾರ್

ಸೂರ್ಯಕುಮಾರ್ ಯಾದವ್ ಅವರು ಆಸ್ಟ್ರೇಲಿಯಾದಲ್ಲಿ ನಡೆದ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ 239 ರನ್ ಬಾರಿಸಿದ್ದಾರೆ. ಇನ್ನು ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ 124 ರನ್ ಗಳಿಸಿ ಭಾರತ ಅತಿ ಹೆಚ್ಚು ರನ್ ದಾಖಲಿಸಿದವರಾಗಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಅವರ ಅಜೇಯ 111 ರನ್ ಅತ್ಯದ್ಭುತ ಶಾಟ್‌ಗಳಿಂದ ಕೂಡಿತ್ತು. ಅವರ ಆ ಇನ್ನಿಂಗ್ಸ್ ಅನ್ನು ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 'ಮತ್ತೊಂದು ವಿಡಿಯೋ ಗೇಮ್ ಇನ್ನಿಂಗ್ಸ್' ಎಂದು ಬಣ್ಣಿಸಿದ್ದಾರೆ.

ಟಿ20 ಕ್ರಿಕೆಟ್‌ನ ಒಂದೇ ಕ್ಯಾಲೆಂಡರ್ ವರ್ಷದಲ್ಲಿ 1500 ರನ್ ಗಳಿಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 31 ಟಿ20 ಪಂದ್ಯಗಳಿಂದ 1614 ರನ್ ಗಳಿಸಿರುವ ವಿರಾಟ್ ಕೊಹ್ಲಿ ಪ್ರಸ್ತುತ ಮೊದಲ ಸ್ಥಾನದಲ್ಲಿದ್ದಾರೆ. ಅಲ್ಲದೇ ಸೂರ್ಯಕುಮಾರ್ ಯಾದವ್ ಅವರು ಐಪಿಎಲ್ 2022 ಪಂದ್ಯಗಳಲ್ಲಿ 303 ರನ್ ಗಳಿಸಿದ್ದಾರೆ.

Story first published: Wednesday, November 23, 2022, 16:51 [IST]
Other articles published on Nov 23, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X