For Quick Alerts
ALLOW NOTIFICATIONS  
For Daily Alerts
 

ICC T20 Ranking: ಟಿ20 ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಬಿಟ್ಟುಕೊಡದ ಸೂರ್ಯಕುಮಾರ್ ಯಾದವ್

ಬುಧವಾರ, ಏಪ್ರಿಲ್ 12ರಂದು ಬಿಡುಗಡೆಯಾದ ನೂತನ ಐಸಿಸಿ ಪುರುಷರ ಟಿ20 ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ ಭಾರತದ ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ. ಸದ್ಯ ನಡೆಯುತ್ತಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್)ನಲ್ಲಿ ಕಳಪೆ ಪ್ರದರ್ಶನದ ಹೊರತಾಗಿಯೂ ನಂ.1 ಸ್ಥಾನ ಉಳಿಸಿಕೊಂಡಿದ್ದಾರೆ.

ಸೂರ್ಯಕುಮಾರ್ ಯಾದವ್ 906 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ 811 ರೇಟಿಂಗ್ ಪಾಯಿಂಟ್‌ಗಳೊಂದಿಗೆ 2ನೇ ಸ್ಥಾನದಲ್ಲಿದ್ದಾರೆ.

 ICC T20 Ranking: Indias Suryakumar Yadav Continues At No.1 Position in T20 Batting Rankings

ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ 755 ರೇಟಿಂಗ್ ಪಾಯಿಂಟ್‌ಗಳಿಂದ 3ನೇ ಸ್ಥಾನ, ದಕ್ಷಿಣ ಆಫ್ರಿಕಾದ ಐಡೆನ್ ಮಾರ್ಕ್ರಾಮ್ 748 ರೇಟಿಂಗ್ ಪಾಯಿಂಟ್‌ಗಳೊಂದಿಗೆ 4ನೇ ಸ್ಥಾನ ಮತ್ತು ನ್ಯೂಜಿಲೆಂಡ್‌ನ ಡೆವೊನ್ ಕಾನ್ವೇ 745 ರೇಟಿಂಗ್ ಪಾಯಿಂಟ್‌ಗಳನ್ನು ಗಳಿಸಿ 5ನೇ ಸ್ಥಾನ ಪಡೆದಿದ್ದಾರೆ. ಭಾರತದ ಇನ್ನೊಬ್ಬ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 15ನೇ ಸ್ಥಾನ ಉಳಿಸಿಕೊಂಡಿದ್ದಾರೆ.

ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಆಟಗಾರನಾಗಿರುವ ಸೂರ್ಯಕುಮಾರ್ ಯಾದವ್ ಆಡಿದ ಮೊದಲ ಮೂರು ಪಂದ್ಯಗಳಲ್ಲಿ 15, 1 ಮತ್ತು 0 ರನ್ ಗಳಿಸಿದ್ದಾರೆ. ಇದು ಅವರ ಅತ್ಯಂತ ಕೆಟ್ಟ ಕಳಪೆ ಬ್ಯಾಟಿಂಗ್ ಫಾರ್ಮ್ ಆಗಿದೆ.

ತಮ್ಮ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನದಿಂದ ಪಾಕಿಸ್ತಾನ ನಾಯಕ ಬಾಬರ್ ಅಜಂ ಮೂರನೇ ಸ್ಥಾನಕ್ಕೆ ಏರಿದ್ದು, ಶನಿವಾರದಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಹಿಂದಿಕ್ಕುವ ಅವಕಾಶ ಹೊಂದಿದ್ದಾರೆ.

 ICC T20 Ranking: Indias Suryakumar Yadav Continues At No.1 Position in T20 Batting Rankings

ಜಂಟಿ ಐದನೇ ಸ್ಥಾನ ಪಡೆದ ಮಹೇಶ್ ತೀಕ್ಷಣ

ಇತ್ತೀಚೆಗೆ ಮುಕ್ತಾಯಗೊಂಡ ಆತಿಥೇಯ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಶ್ರೀಲಂಕಾದ ಯುವ ಸ್ಪಿನ್ನರ್ ಮಹೇಶ್ ತೀಕ್ಷಣ ಉತ್ತಮ ಪ್ರದರ್ಶನಕ್ಕಾಗಿ ಐಸಿಸಿ ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ. 22 ವರ್ಷದ ಮಹೇಶ್ ತೀಕ್ಷಣ ಬೌಲರ್‌ಗಳ ಶ್ರೇಯಾಂಕದಲ್ಲಿ ವೃತ್ತಿಜೀವನದ ಅತ್ಯುತ್ತಮ ಜಂಟಿ ಐದನೇ ಸ್ಥಾನ ಪಡೆದಿದ್ದಾರೆ.

ಅಫ್ಘಾನಿಸ್ತಾನದ ಸ್ಪಿನ್ನರ್ ರಶೀದ್ ಖಾನ್ ಟಿ20 ಬೌಲರ್‌ಗಳ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ಅಫ್ಘಾನಿಸ್ತಾನದವರೇ ಆದ ಫಜಲ್ಹಾಕ್ ಫಾರೂಕಿ, ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್‌ವುಡ್ ಮತ್ತು ಶ್ರೀಲಂಕಾದ ವನಿಂದು ಹಸರಂಗ ಅವರನ್ನು ಹಿಂದಿಕ್ಕಿ ನಂ.1 ಟಿ20 ಬೌಲರ್ ಆಗಿದ್ದಾರೆ. ಟಿ20 ಕ್ರಿಕೆಟ್‌ನ ಟಾಪ್ 10 ಬೌಲರ್‌ಗಳ ಪಟ್ಟಿಯಲ್ಲಿ ಭಾರತದ ಯಾವುದೇ ಬೌಲರ್‌ಗಳು ಸ್ಥಾನ ಪಡೆದಿಲ್ಲ.

ಟೆಸ್ಟ್ ಬೌಲಿಂಗ್ ಶ್ರೇಯಾಂಕ

ಇನ್ನು ಮಿರ್‌ಪುರದಲ್ಲಿ ಐರ್ಲೆಂಡ್ ತಂಡದ ವಿರುದ್ಧ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ಜಯ ಗಳಿಸಿದ ನಂತರ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಬದಲಾವಣೆ ಕಂಡುಬಂದಿದೆ.

 ICC T20 Ranking: Indias Suryakumar Yadav Continues At No.1 Position in T20 Batting Rankings

ಬಾಂಗ್ಲಾದ ಅನುಭವಿ ಬಲಗೈ ಬ್ಯಾಟ್ಸ್‌ಮನ್ ಮುಶ್ಫಿಕರ್ ರಹೀಮ್ 126 ಮತ್ತು ಔಟಾಗದೆ 51 ರನ್ ಬಾರಿಸಿದ ನಂತರ ಟೆಸ್ಟ್ ಬ್ಯಾಟರ್‌ಗಳ ಪಟ್ಟಿಯಲ್ಲಿ ಐದು ಸ್ಥಾನ ಮೇಲೇರಿ 17ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇದೆ ವೇಳೆ ಸ್ಪಿನ್ ಜೋಡಿಯಾದ ತೈಜುಲ್ ಇಸ್ಲಾಂ ಮತ್ತು ಶಕೀಬ್ ಅಲ್ ಹಸನ್ ಬೌಲರ್‌ಗಳ ಪಟ್ಟಿಯಲ್ಲಿ ಏರಿಕೆ ಕಂಡಿದ್ದಾರೆ.

ತೈಜುಲ್ ಇಸ್ಲಾಂ ಐರ್ಲೆಂಡ್ ವಿರುದ್ಧ ಮೊದಲ ಇನ್ನಿಂಗ್ಸ್‌ನಲ್ಲಿ ಐದು-ವಿಕೆಟ್‌ ಗೊಂಚಲು ಪಡೆದು ಮೂರು ಸ್ಥಾನಗಳ ಏರಿಕೆ ಕಂಡು 20ನೇ ಸ್ಥಾನಕ್ಕೆ ತಲುಪಿದ್ದಾರೆ. ಇನ್ನು ಬಾಂಗ್ಲಾದೇಶ ತಂಡದ ನಾಯಕ ಶಕೀಬ್ ಅಲ್ ಹಸನ್ ಎರಡನೇ ಇನ್ನಿಂಗ್ಸ್‌ನಲ್ಲಿ 26 ರನ್‌ಗಳಿಗೆ 2 ವಿಕೆಟ್ ಪಡೆಯುವ ಮೂಲಕ 2 ಸ್ಥಾನಗಳ ಏರಿಕೆ ಕಂಡು 26ನೇ ಸ್ಥಾನ ಪಡೆದರು.

Story first published: Wednesday, April 12, 2023, 22:31 [IST]
Other articles published on Apr 12, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+