ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ICC T20 Ranking: RCB ಬೌಲರ್ ಜೋಶ್ ಹೇಜಲ್‌ವುಡ್ 2ನೇ ಸ್ಥಾನಕ್ಕೆ ಜಿಗಿತ

Josh hazlewood

ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಇತ್ತೀಚಿನ ಏಕದಿನ ಮತ್ತು ಟಿ20 ರ್ಯಾಂಕಿಂಗ್‌ಗಳನ್ನ ಬಿಡುಗಡೆ ಮಾಡಿದೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಉಪನಾಯಕ ಕೆ.ಎಲ್ ರಾಹುಲ್ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ರ್ಯಾಂಕಿಂಗ್‌ನಲ್ಲಿ ತಮ್ಮ ಸ್ಥಾನ ಉಳಿಸಿಕೊಂಡಿದ್ದಾರೆ.

ಟಿ20 ಬ್ಯಾಟಿಂಗ್ ರ್ಯಾಂಕಿಂಗ್‌ನಲ್ಲಿ ಕೆ.ಎಲ್ ರಾಹುಲ್ ನಾಲ್ಕನೇ ಸ್ಥಾನದಲ್ಲಿ ಮುಂದುವರಿದರೆ, ವಿರಾಟ್ ಕೊಹ್ಲಿ ಐದನೇ ಸ್ಥಾನದಲ್ಲಿದ್ದಾರೆ. ಆದ್ರೆ ಟಿ20 ಬೌಲಿಂಗ್ ವಿಭಾಗದಲ್ಲಿ ಭಾರತದ ಯಾವೊಬ್ಬ ಬೌಲರ್ ಕೂಡ ಅಗ್ರ 10ರೊಳಗೆ ಸ್ಥಾನ ಪಡೆದಿಲ್ಲ. ದಕ್ಷಿಣ ಆಫ್ರಿಕಾದ ಬೌಲರ್ ತಬ್ರೈಜ್ ಶಮ್ಸಿ ಅಗ್ರಸ್ಥಾನಕ್ಕೇರಿದ ಹೊಸ ಬೌಲರ್ ಆಗಿದ್ದಾರೆ.

'ನನ್ನ ಆಟ ಇನ್ನೂ ಮುಗಿದಿಲ್ಲ' ಎಂದು ಡೆಲ್ಲಿ ಕ್ಯಾಪಿಟಲ್ಸ್‌ ಮಾಲೀಕನಿಗೆ ಅಮಿತ್‌ ಮಿಶ್ರಾ ಸಂದೇಶ'ನನ್ನ ಆಟ ಇನ್ನೂ ಮುಗಿದಿಲ್ಲ' ಎಂದು ಡೆಲ್ಲಿ ಕ್ಯಾಪಿಟಲ್ಸ್‌ ಮಾಲೀಕನಿಗೆ ಅಮಿತ್‌ ಮಿಶ್ರಾ ಸಂದೇಶ

ಏಕದಿನ ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ. ಪಾಕ್ ನಾಯಕ ಬಾಬರ್ ಅಜಮ್ ಮೊದಲ ಸ್ಥಾನದಲ್ಲಿ ಉಳಿದಿದ್ದಾನೆ ಇನ್ನುಳಿದಂತೆ ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್ ಮತ್ತು ರಿಷಬ್ ಪಂತ್ ತಮ್ಮ ಸ್ಥಾನವನ್ನು ಸುಧಾರಿಸಿದ್ದಾರೆ. ಪಂತ್ 71ನೇ ಸ್ಥಾನಕ್ಕೆ ಜಿಗಿದಿದ್ದು, ಬೌಲಿಂಗ್ ವಿಭಾಗದಲ್ಲಿ ಬುಮ್ರಾ ಎಂದಿನಂತೆ ಏಳನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ನ್ಯೂಜಿಲೆಂಡ್ ಬೌಲರ್ ಟ್ರೆಂಟ್ ಬೌಲ್ಡ್ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದಾರೆ.

T20 ಕ್ರಿಕೆಟ್ ರ್ಯಾಂಕಿಂಗ್
ದಕ್ಷಿಣ ಆಫ್ರಿಕಾದ ಬೌಲರ್ ತಬ್ರೈಜ್ ಶಮ್ಸಿ ಟಿ20 ಬೌಲಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯದ ವೇಗಿ ಜೋಶ್ ಹ್ಯಾಜಲ್‌ವುಡ್ ಎರಡನೇ ಸ್ಥಾನದಲ್ಲಿದ್ದಾರೆ. ಇವರಿಬ್ಬರ ನಡುವೆ ಕೇವಲ ಒಂದು ಪಾಯಿಂಟ್ ವ್ಯತ್ಯಾಸವಿರುವುದು ಗಮನಾರ್ಹ. ಶ್ರೀಲಂಕಾದ ಸ್ಪಿನ್ನರ್ ವಹಿಂದು ಹಸರಂಗ ಮೂರನೇ ಮತ್ತು ಇಂಗ್ಲೆಂಡ್ ಸ್ಪಿನ್ನರ್ ಆದಿಲ್ ರಶೀದ್ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಸ್ಟ್ರೇಲಿಯಾದ ಸ್ಪಿನ್ನರ್ ಆ್ಯಡಂ ಜಂಪಾ ಐದನೇ ಮತ್ತು ಅಫ್ಘಾನಿಸ್ತಾನ ಸ್ಪಿನ್ನರ್ ರಶೀದ್ ಖಾನ್ ಆರನೇ ಸ್ಥಾನ ಪಡೆದಿದ್ದಾರೆ.

ಆಲ್ ರೌಂಡರ್ಸ್ ವಿಭಾಗದಲ್ಲಿ ಅಫ್ಘಾನಿಸ್ತಾನದ ಮೊಹಮ್ಮದ್ ನಬಿ ಅಗ್ರಸ್ಥಾನದಲ್ಲಿದ್ದಾರೆ. ಬಾಂಗ್ಲಾದೇಶದ ಆಲ್ ರೌಂಡರ್ ಶಕೀಬ್ ಅಲ್ ಹಸನ್ ಎರಡನೇ ಹಾಗೂ ಇಂಗ್ಲೆಂಡ್ ಆಲ್ ರೌಂಡರ್ ಮೊಯಿನ್ ಅಲಿ ಮೂರನೇ ಸ್ಥಾನ ಪಡೆದರು. ಇನ್ನು ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ನಾಲ್ಕನೇ ಹಾಗೂ ಶ್ರೀಲಂಕಾದ ಆಲ್ ರೌಂಡರ್ ವಹಿಂದು ಹಸರಂಗ ಐದನೇ ಸ್ಥಾನ ಪಡೆದರು.

ವಿಂಡೀಸ್ ವಿರುದ್ಧ ಮೊದಲ T 20 ಗೆದ್ದ ಭಾರತ | Oneindia Kannada

ಪಾಕಿಸ್ತಾನದ ಆರಂಭಿಕರಾದ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಟಿ20 ಬ್ಯಾಟಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ಏಡೆನ್ ಮಕ್ರಾಮ್ ಮೂರನೇ ಮತ್ತು ಭಾರತದ ಕೆ.ಎಲ್ ರಾಹುಲ್ ನಾಲ್ಕನೇ, ಇಂಗ್ಲೆಂಡ್ ಬ್ಯಾಟ್ಸ್‌ಮನ್ ಡೇವಿಡ್ ಮಲನ್ ಐದನೇ ಸ್ಥಾನದಲ್ಲಿದ್ದಾರೆ.

Story first published: Thursday, February 17, 2022, 9:50 [IST]
Other articles published on Feb 17, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X