ಟಿ20 ವಿಶ್ವಕಪ್ ತಂಡವನ್ನು ಪ್ರಕಟಿಸಿದ ICC, ನಾಲ್ವರು ಭಾರತೀಯರಿಗೆ ಸ್ಥಾನ; ಚಾಂಪಿಯನ್ ನಾಯಕನಿಗಿಲ್ಲ ಅವಕಾಶ
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಣ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯ ಮುಗಿದಿದೆ. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ 96 ರನ್‌ಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಅಬ್ಬರಿಸಿದೆ. ಈ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಆಟಗಾರರು ಐಸಿಸಿ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಟೀಮ್ ಇಂಡಿಯಾಕ್ಕೆ ಚಾಂಪಿಯನ್ ಪಟ್ಟವನ್ನು ತೊಡಿಸಿದ ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ಈ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ.
ಸಂಪ್ರದಾಯದಂತೆ ಐಸಿಸಿ ಟಿ20 ವಿಶ್ವಕಪ್ ತಂಡವನ್ನು ಸೋಮವಾರ ಪ್ರಕಟಿಸಿದೆ. ಈ ತಂಡದಲ್ಲಿ ನಾಲ್ವರು ಭಾರತೀಯ ಆಟಗಾರರು ಸ್ಥಾನ ಪಡೆದಿದ್ದಾರೆ. ಟೂರ್ನಿಯ ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿಯನ್ನು ಪಡೆದ ಸಂಜು ಸ್ಯಾಮ್ಸನ್ ಅವರಿಗೆ ತಂಡದಲ್ಲಿ ಆರಂಭಿಕರಾಗಿ ಸ್ಥಾನ ಲಭಿಸಿದೆ. ಇನ್ನೊಬ್ಬ ಆರಂಭಿಕ ಆಟಗಾರನಾಗಿ ಪಾಕಿಸ್ತಾನ ತಂಡದ ಸಾಹಿಬ್‌ಜಾದ ಫರ್ಹಾನ್ ಅವರಿಗೆ ಆರಂಭಿಕ ಸ್ಥಾನ ನೀಡಲಾಗಿದೆ. ಇವರು ಟಿ20 ವಿಶ್ವಕಪ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಸಾಧನೆ ಹೊಂದಿದ್ದಾರೆ.

ಮೂರನೇ ಕ್ರಮಾಂಕದಲ್ಲಿ ಭಾರತದ ಭರವಸೆಯ ಆಟಗಾರ ಇಶಾನ್ ಕಿಶನ್ ಅವರಿಗೆ ಸ್ಥಾನ ಲಭಿಸಿದೆ. ಇವರು ಆರಂಭದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕೆ ಇಳಿದಿದ್ದು, ಬಳಿಕ ಮೂರನೇ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿ ತಂಡಕ್ಕೆ ನೆರವಾಗಿದ್ದಾರೆ. ಇವರ ಸ್ಥಿರ ಪ್ರದರ್ಶನದ ಫಲವಾಗಿ ಇವರಿಗೂ ತಂಡದಲ್ಲಿ ಸ್ಥಾನ ನೀಡಲಾಗಿದೆ. ದಕ್ಷಿಣ ಆಫ್ರಿಕಾ ತಂಡದ ನಾಯಕ ಏಡನ್ ಮಾರ್ಕ್ರಾಮ್ ಅವರಿಗೆ ನಾಲ್ಕನೇ ಸ್ಥಾನದಲ್ಲಿ ಅವಕಾಶ ನೀಡಲಾಗಿದೆ. ಅಲ್ಲದೆ ಇವರಿಗೆ ತಂಡದ ನಾಯಕತ್ವವನ್ನು ನೀಡಲಾಗಿದೆ.
ಆಲ್‌ರೌಂಡರ್ ರೂಪದಲ್ಲಿ ಮೂವರಿಗೆ ಸ್ಥಾನ
ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಇಂಗ್ಲೆಂಡ್ ತಂಡದ ವಿಲ್ ಜಾಕ್ಸ್, ವಿಂಡೀಸ್ ತಂಡದ ಜೇಸನ್ ಹೋಲ್ಡರ್ ಅವರು ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದರಿಂದ ಇವರಿಗೂ ತಂಡದಲ್ಲಿ ಸ್ಥಾನ ನೀಡಲಾಗಿದೆ. ವೇಗದ ಬೌಲರ್‌ಗಳಾಗಿ ಜಸ್ಪ್ರೀತ್ ಬುಮ್ರಾ, ಲುಂಗಿ ಎನ್‌ಗಿಡಿ, ಬ್ಲೆಸ್ಸಿಂಗ್ ಮುಜರಬಾನಿ ಸ್ಥಾನ ಪಡೆದಿದ್ದಾರೆ. ಇನ್ನು ಇಂಗ್ಲೆಂಡ್ ತಂಡದ ಆದಿಲ್ ರಶೀದ್ ಅವರು ತಂಡದಲ್ಲಿರುವ ಏಕೈಕ ಸ್ಪಿನ್ ಬೌಲರ್ ಆಗಿದ್ದಾರೆ. ಅಮೆರಿಕ ತಂಡದ ಶಾಡ್ಲಿ ವ್ಯಾನ್ ಶಾಲ್ಕ್‌ವಿಕ್ 12ನೇ ಆಟಗಾರರಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಟಿ20 ವಿಶ್ವಕಪ್ 2026 ತಂಡ: ಸಾಹಿಬ್‌ಜಾದ ಫರ್ಹಾನ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಏಡೆನ್ ಮಾರ್ಕ್ರಾಮ್ (ನಾಯಕ), ಹಾರ್ದಿಕ್ ಪಾಂಡ್ಯ, ವಿಲ್ ಜ್ಯಾಕ್ಸ್, ಜೇಸನ್ ಹೋಲ್ಡರ್, ಜಸ್ಪ್ರೀತ್ ಬುಮ್ರಾ, ಲುಂಗಿ ಎನ್‌ಗಿಡಿ, ಆದಿಲ್ ರಶೀದ್, ಬ್ಲೆಸ್ಸಿಂಗ್ ಮುಜರಬಾನಿ, ಶಾಡ್ಲಿ ವ್ಯಾನ್ ಶಾಲ್ಕ್‌ವಿಕ್ (12ನೇ ಆಟಗಾರ)
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications