ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್‌ಗೆ ಬಲಿಷ್ಠ ಟೀಮ್ ಇಂಡಿಯಾ ತಂಡ ಪ್ರಕಟ: ಸಂಪೂರ್ಣ ತಂಡದ ವಿವರ

ICC T20 World Cup 2021 India Squad, Indian Team Player List

ಮುಂಬೈ, ಸೆಪ್ಟೆಂಬರ್ 8: ಟಿ20 ವಿಶ್ವಕಪ್‌ಗೆ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದೆ. ಸಾಕಷ್ಟು ಕುತೂಹಲ ಮೂಡಿಸಿದ್ದ ಈ ತಂಡದಲ್ಲಿ ಯಾರಿಗೆಲ್ಲಾ ಅವಕಾಶ ದೊರೆಯಲಿದೆ ಎಂಬ ಕಾತರಕ್ಕೆ ಉತ್ತರ ದೊರೆತಿದೆ. ಟೀಮ್ ಇಂಡಿಯಾದ ಆಯ್ಕೆ ಸಮಿತಿ ಬಲಿಷ್ಠ ಭಾರತ ತಂಡದ ಆಟಗಾರರನ್ನು ಘೋಷಣೆ ಮಾಡಿದೆ.

15 ಆಟಗಾರರ ಟೀಮ್ ಇಂಡಿಯಾ ಬಳಗವನ್ನು ಬಿಸಿಸಿಐ ಪ್ರಕಟಿಸಿದೆ. ಅಲ್ಲದೆ ಮೂವರು ಮೀಸಲು ಆಟಗಾರರು ಕೂಡ ಈ ವಿಶ್ವಕಪ್‌ನ ಈ ತಂಡದ ಜೊತೆಗೆ ಸಾಥ್ ನೀಡಲಿದ್ದಾರೆ. ಟೀಮ್ ಇಂಡಿಯಾದ ಈ ವಿಶ್ವಕಪ್ ತಂಡದಲ್ಲಿ ಅಚ್ಚರಿ ಎಂಬಂತೆ ಅನುಭವಿ ಆರ್ ಅಶ್ವಿನ್ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಆದರೆ ಅನುಭವಿ ಶಿಖರ್ ಧವನ್ ಈ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ.

ಹಾಗಾದರೆ ಒಟ್ಟಾರೆ ತಂಡ ಹೇಗಿದೆ ಎಂಬುದನ್ನು ಮುಂದೆ ಓದಿ

ಭಾರತ vs ಇಂಗ್ಲೆಂಡ್: ಅಂತಿಮ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ 3 ಪ್ರಮುಖ ಬದಲಾವಣೆ ಸಂಭವಭಾರತ vs ಇಂಗ್ಲೆಂಡ್: ಅಂತಿಮ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ 3 ಪ್ರಮುಖ ಬದಲಾವಣೆ ಸಂಭವ

ಬ್ಯಾಟಿಂಗ್ ಪಡೆ ಹೀಗಿದೆ

ಬ್ಯಾಟಿಂಗ್ ಪಡೆ ಹೀಗಿದೆ

ಟಿ20 ವಿಶ್ವಕಪ್‌ಗೆ ಪ್ರಕಟಿಸಿರುವ ಟೀಮ್ ಇಂಡಿಯಾದ ಬ್ಯಾಟಿಂಗ್ ಪಡೆಯ ನಾಯಕ ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಅತ್ಯಂತ ಬಲಿಷ್ಠವಾಗಿದೆ. ಶಿಖರ್ ಧವನ್ ಮಾತ್ರ ಈ ತಂಡದಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ಉಳಿದಂತೆ ಆರಂಭಿಕರಾಗೊ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಮೂರನೇ ಕ್ರಮಾಂಕದಲ್ಲಿ ನಾಯಕ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್‌ಗೆ ಸ್ಥಾನ ದೊರೆಯುವುದು ಬಹುತೇಕ ಖಚಿತ. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ಗಳಾಗಿ ರಿಷಭ್ ಪಂತ್ ಹಾಗೂ ಇಶಾನ್ ಕಿಶನ್ ಈ ತಂಡದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ.

ಆಲ್‌ರೌಂಡರ್‌ಗಳಾಗಿ ಪಾಂಡ್ಯ, ಜಡೇಜಾ

ಆಲ್‌ರೌಂಡರ್‌ಗಳಾಗಿ ಪಾಂಡ್ಯ, ಜಡೇಜಾ

ಟಿ20 ವಿಶ್ವಕಪ್ ತಂಡದಲ್ಲಿ ಆಲ್‌ರೌಂಡರ್‌ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ ಫಿಟ್‌ನೆಸ್ ಸಮಸ್ಯೆ ಹಾಗೂ ಇತ್ತೀಚಿನ ಫಾರ್ಮ್‌ನಿಂದಾಗಿ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಬಗ್ಗೆ ಅನುಮಾನಗಳು ಇತ್ತು. ಆದರೆ ಕಡೆಗೂ ಈ ಪರೀಕ್ಷೆಯಲ್ಲಿ ಪಾಂಡ್ಯ ಗೆದ್ದಿದ್ದಾರೆ. ಮತ್ತೊಂದೆಡೆ ರವೀಂದ್ರ ಜಡೇಜಾ ಸ್ಪಿನ್ನರ್ ಹಾಗೂ ಕೆಳ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಜವಾಬ್ಧಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಆರ್ ಅಶ್ವಿನ್ ಕಮ್‌ಬ್ಯಾಕ್

ಆರ್ ಅಶ್ವಿನ್ ಕಮ್‌ಬ್ಯಾಕ್

ಇನ್ನು ಟೀಮ್ ಇಂಡಿಯಾದ ಬೌಲಿಂಗ್ ಪಡೆಗೆ ಆರ್ ಅಶ್ವಿನ್ ಸೇರ್ಪಡೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ಟೀಮ್ ಇಂಡಿಯುಆದ ಸೀಮಿತ ಓವರ್‌ಗಳ ತಂಡದಿಂದಲೇ ಹೊರಗುಳಿದಿರುವ ಅಶ್ವಿನ್ ಟೆಸ್ಟ್ ತಂಡದಲ್ಲಿ ಮಾತ್ರವೇ ಖಾಯಂ ಸದಸ್ಯನಾಗಿದ್ದರು. ಆದರೆ ವಿಶ್ವಕಪ್‌ನ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಐಪಿಎಲ್‌ನಲ್ಲಿ ನೀಡಿದ ಪ್ರದರ್ಶನ ಹಾಗೂ ಯುಎಇನ ಕ್ರೀಡಾಂಗಣದಲ್ಲಿ ಆರ್ ಅಶ್ವಿನ್ ಬೌಲಿಂಗ್ ಹೆಚ್ಚು ಸೂಕ್ತವಾಗುತ್ತದೆ ಎಂಬ ಕಾರಣಕ್ಕೆ ಈ ಆಯ್ಕೆ ಮಾಡಿರುವ ಸಾಧ್ಯತೆಯಿದೆ.

ಬೌಲಿಂಗ್ ವಿಭಾಗದಲ್ಲಿ ಯಾರ್ಯಾರು?

ಬೌಲಿಂಗ್ ವಿಭಾಗದಲ್ಲಿ ಯಾರ್ಯಾರು?

ಇನ್ನು ಇತ್ತೀಚಿನ ದಿನಗಳಲ್ಲಿ ಐಪಿಎಲ್‌ನಲ್ಲಿ ಮಿಂಚಿರುವ ರಾಹುಲ್ ಚಾಹರ್ ಕಳೆದ ಶ್ರೀಲಂಕಾ ಪ್ರವಾಸದಲ್ಲಿಯೂ ಸಾಮರ್ಥ್ಯವನ್ನು ಪ್ರದರ್ಶಿಸಿದ್ದರು. ಈ ಮೂಲಕ ದೊಡ್ಡ ವೇದಿಕೆಯಲ್ಲಿ ಅವಕಾಶ ಪಡೆದುಕೊಂಡಿದ್ದಾರೆ ರಾಹುಲ್ ಚಾಹರ್. ಆರ್ ಅಶ್ವಿನ್ ಸುದೀರ್ಘ ಕಾಲದ ಬಳಿಕ ಟಿ20 ತಂಡಕ್ಕೆ ವಾಪಾಸಾಗಿದ್ದಾರೆ. ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ ಕೂಡ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇನ್ನು ವೇಗಿಗಳಾಗಿ ಜಸ್ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ ತಂಡದಲ್ಲಿ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾ ಸಂಪೂರ್ಣ ತಂಡ ಹೀಗಿದೆ

ಟೀಮ್ ಇಂಡಿಯಾ ಸಂಪೂರ್ಣ ತಂಡ ಹೀಗಿದೆ

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬೂಮ್ರಾ , ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ

ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್

Story first published: Thursday, September 9, 2021, 10:07 [IST]
Other articles published on Sep 9, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X