T20 World Cup 2022: ಭಾರತದ ಪರ ಈ ಬಾರಿ ವಿಶ್ವಕಪ್‌ನಲ್ಲಿ ಹೆಚ್ಚು ರನ್ ಗಳಿಸುವ ಆಟಗಾರ ಇವರೇ ನೋಡಿ

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಭಾರತದ ಪರವಾಗಿ ಯಾರು ಅತಿ ಹೆಚ್ಚಿನ ರನ್ ಬಾರಿಸಬಹುದು ಎಂದು ಹಲವರು ತಮ್ಮ ಅಭಿಪ್ರಾಯಗಳನ್ನು ಹೇಳುತ್ತಿದ್ದಾರೆ. ಈ ಬಾರಿ ವಿರಾಟ್ ಕೊಹ್ಲಿ ಅಥವಾ ಅದ್ಭುತ ಫಾರ್ಮ್‌ನಲ್ಲಿರುವ ಸೂರ್ಯಕುಮಾರ್ ಯಾದವ್ ಭಾರತದ ಪರವಾಗಿ ಹೆಚ್ಚಿನ ರನ್ ಗಳಿಸಬಹುದು ಎಂದು ಹಲವರು ಭವಿಷ್ಯ ನುಡಿದ್ದಾರೆ.
ಆದರೆ, ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಮಾತ್ರ ಭಾರತದ ಪರವಾಗಿ ಟಿ20 ವಿಶ್ವಕಪ್‌ನಲ್ಲಿ ಹೆಚ್ಚಿನ ರನ್ ಗಳಿಸುವ ಆಟಗಾರ ಕೆ.ಎಲ್ ರಾಹುಲ್ ಎಂದು ಹೇಳಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಚೋಪ್ರಾ, ಕೆಎಲ್ ರಾಹುಲ್ ಆಸ್ಟ್ರೇಲಿಯಾದ ಪಿಚ್‌ಗಳಲ್ಲಿ ಆಡುವುದನ್ನು ಆನಂದಿಸುತ್ತಾರೆ ಎಂದು ಹೇಳಿದ್ದಾರೆ. ಆರಂಭಿಕ ಆಟಗಾರ ರಾಹುಲ್ ಟಿ20 ಮಾದರಿಯಲ್ಲಿ ಕೊನೆಯವರೆಗೂ ಬ್ಯಾಟಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದಾರೆ ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.
"ಕೆಎಲ್ ರಾಹುಲ್ 2022 ರ ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕಾಗಿ ಅಗ್ರ ರನ್ ಗಳಿಸುವವರಾಗಬಹುದು. ಅವರಿಗೆ ಎಲ್ಲಾ 20 ಓವರ್‌ಗಳನ್ನು ಬ್ಯಾಟ್ ಮಾಡುವ ಅವಕಾಶವಿದೆ. ಕೊನೆಯವರೆಗೂ ಬ್ಯಾಟಿಂಗ್ ಮಾಡುವ ಸಾಮರ್ಥ್ಯವೂ ಅವರಿಗೆ ಇದೆ. ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುತ್ತದೆ, ಈ ಪಿಚ್‌ಗಳು ರಾಹುಲ್ ಬ್ಯಾಟಿಂಗ್‌ಗೆ ತುಂಬಾ ಸರಿಹೊಂದುತ್ತವೆ" ಎಂದು ಅವರು ಹೇಳಿದ್ದಾರೆ.

ಉತ್ತಮ ರನ್ ಗಳಿಸಿರುವ ರಾಹುಲ್
ತೊಡೆಸಂದು ಗಾಯದಿಂದ ರಾಹುಲ್ ಹಲವಾರು ತಿಂಗಳುಗಳಿಂದ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಏಷ್ಯಾ ಕಪ್ 2022 ರಲ್ಲಿ ಕ್ರಿಕೆಟ್‌ಗೆ ವಾಪಸಾದ ಅವರು ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ವಿಫಲರಾದರು. ನಂತರ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕೆಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡಿದರು.
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಮೂರು ಟಿ20 ಪಂದ್ಯಗಳಿಂದ ಕೆಎಲ್ ರಾಹುಲ್ 108 ರನ್ ಗಳಿಸಿದರು. ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಮಾತ್ರ ಬ್ಯಾಟಿಂಗ್ ಮಾಡಿದ ಕೆಎಲ್ ರಾಹುಲ್ ಎರಡೂ ಪಂದ್ಯಗಳಲ್ಲಿ ಅರ್ಧ ಶತಕ ಗಳಿಸುವಲ್ಲಿ ಸಫಲರಾದರು.
ಬಿಜೆಪಿ ಸೇರಲು ಹಿಂದೇಟು ಹಾಕಿದ್ದಕ್ಕೆ, ಗಂಗೂಲಿಗೆ ಬಿಸಿಸಿಐ ಪಟ್ಟ ಮತ್ತೆ ಸಿಗಲಿಲ್ವಾ? TMC ಆರೋಪ ನಿಜವೇ?

ಅಭ್ಯಾಸ ಪಂದ್ಯದಲ್ಲಿ ರಾಹುಲ್ ಉತ್ತಮ ಬ್ಯಾಟಿಂಗ್
ಸದ್ಯ ಆಸ್ಟ್ರೇಲಿಯಾದಲ್ಲಿ ಟೀಂ ಇಂಡಿಯಾ ಟಿ20 ವಿಶ್ವಕಪ್‌ಗಾಗಿ ಭರ್ಜರಿ ತಯಾರಿ ನಡೆಸುತ್ತಿದೆ. ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧದ ಮೊದಲನೇ ಅಭ್ಯಾಸ ಪಂದ್ಯದಲ್ಲಿ ಜಯ ಸಾಧಿಸಿದ್ದ ಟೀಂ ಇಂಡಿಯಾ ಎರಡನೇ ಪಂದ್ಯದಲ್ಲಿ ಮಾತ್ರ 36 ರನ್‌ಗಳ ಅಂತರದಿಂದ ಸೋಲನುಭವಿಸಿದೆ.
ಮೊದಲನೇ ಅಭ್ಯಾಸ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಕೆಎಲ್ ರಾಹುಲ್ ಎರಡನೇ ಅಭ್ಯಾಸ ಪಂದ್ಯದಲ್ಲಿ ಅತ್ಯುತ್ತಮವಾಗಿ ಬ್ಯಾಟಿಂಗ್ ಮಾಡಿದ್ದಾರೆ. 55 ಎಸೆತಗಳಲ್ಲಿ 74 ರನ್ ಗಳಿಸುವ ಮೂಲಕ ಆಸ್ಟ್ರೇಲಿಯಾದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ಮಾಡುವ ಭರವಸೆ ಮೂಡಿಸಿದ್ದಾರೆ.

ಆಸ್ಟ್ರೇಲಿಯಾ ಪಿಚ್‌ಗಳು ಅರ್ಷ್‌ದೀಪ್‌ಗೆ ಇಷ್ಟವಾಗುತ್ತವೆ
2022 ರ ಟಿ 20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾಗೆ ಎಡಗೈ ವೇಗಿ ಅರ್ಷ್‌ದೀಪ್ ಸಿಂಗ್ ಪ್ರಮುಖ ಪಾತ್ರ ವಹಿಸುತ್ತಾರೆ, ಎಲ್ಲಾ ಪ್ರಮುಖ ಹಂತಗಳಲ್ಲಿ ಬೌಲಿಂಗ್ ಮಾಡುತ್ತಾರೆ ಎಂದು ಆಕಾಶ್ ಚೋಪ್ರಾ ಹೇಳಿದರು.
ಯುವ ಆಟಗಾರನು ಹೊಸ ಚೆಂಡಿನೊಂದಿಗೆ ಹೇಗೆ ಪರಿಣಾಮಕಾರಿಯಾಗಬಹುದು. ನಾಯಕ ರೋಹಿತ್ ಶರ್ಮಾರ ಮೊದಲ ಆಯ್ಕೆಯಾಗಿರುತ್ತಾರೆ ಎಂದು ಚೋಪ್ರಾ ಹೇಳಿದರು. "ಅರ್ಶ್‌ದೀಪ್ ಸಿಂಗ್ ಹೊಸ ಚೆಂಡಿನೊಂದಿಗೆ ಬೌಲಿಂಗ್ ಮಾಡುತ್ತಾರೆ, ಮತ್ತು ಅಂತಿಮ ಓವರ್‌ಗಳಲ್ಲಿ ಕೂಡ ಬೌಲಿಂಗ್ ಮಾಡುತ್ತಾರೆ. ಮಧ್ಯಮ ಓವರ್‌ಗಳಲ್ಲಿಯೂ ಅವರು ಬೌಲಿಂಗ್ ಮಾಡುವ ಸಾಧ್ಯತೆ ಇದೆ. ಆಸ್ಟ್ರೇಲಿಯಾದ ದೊಡ್ಡ ಮೈದಾನಗಳು, ಪಿಚ್‌ಗಳು ಅವರಿಗೆ ಸಹಕಾರಿಯಾಗಿರುತ್ತವೆ" ಎಂದು ಹೇಳಿದ್ದಾರೆ.

ಈ ಬಾರಿ ಟೀಂ ಇಂಡಿಯಾ ಉತ್ತಮವಾಗಿ ತಯಾರಾಗಿದೆ
ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿದೆ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ. ಕಳೆದ ಬಾರಿ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು ಎಂದು ಚೋಪ್ರಾ ಒಪ್ಪಿಕೊಂಡಿದ್ದಾರೆ.
ಈ ಬಾರಿಯ ಟಿ 20 ವಿಶ್ವಕಪ್‌ಗಾಗಿ ಟೀಂ ಇಂಡಿಯಾ ಉತ್ತಮವಾಗಿ ಸಿದ್ಧತೆ ನಡೆಸಿದೆ ಎಂದು ಅವರು ಹೇಳಿದ್ದಾರೆ. "ಸದ್ಯ ಭಾರತ ವಿಶ್ವದ ಅತ್ಯುತ್ತಮ ತಂಡಗಳಲ್ಲಿ ಒಂದಾಗಿದೆ. ಬ್ಯಾಟಿಂಗ್, ಬೌಲಿಂಗ್‌ನಲ್ಲಿ ಸಾಕಷ್ಟು ಸುಧಾರಣೆಯಾಗಿದೆ" ಎಂದು ಅವರು ಹೇಳಿದರು.
ಭಾರತ ಅಕ್ಟೋಬರ್ 23 ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ತಮ್ಮ ಆರಂಭಿಕ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications